ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆ; ಶುಕ್ರವಾರದಿಂದ ಪ್ರಿಯಾಂಕ ಗಾಂಧಿ ಪ್ರಚಾರ

|
Google Oneindia Kannada News

ಗೋವಾ, ಡಿಸೆಂಬರ್ 09; ಗೋವಾ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಪ್ರಚಾರ ನಡೆಸಲಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿಯೂ ಆಗಿರುವ ಅವರು ಡಿಸೆಂಬರ್ 10ರಂದು ಗೋವಾದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಶುಕ್ರವಾರ ಪ್ರಿಯಾಂಕ ಗಾಂಧಿ ವಾದ್ರಾ ಗೋವಾದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ವಿವಿಧ ಸಮುದಾಯಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲು ಅಲ್ಸೋನಾದಲ್ಲಿರುವ ಹುತಾತ್ಮ ಸ್ಮಾರಕಕ್ಕೆ ಭೇಟಿ ಕೊಟ್ಟು ನಮನ ಸಲ್ಲಿಸಲಿದ್ದಾರೆ.

ಗೋವಾ ಚುನಾವಣೆ; ಹಲವು ಪದಾಧಿಕಾರಿಗಳನ್ನು ನೇಮಿಸಿದ ಕಾಂಗ್ರೆಸ್ ಗೋವಾ ಚುನಾವಣೆ; ಹಲವು ಪದಾಧಿಕಾರಿಗಳನ್ನು ನೇಮಿಸಿದ ಕಾಂಗ್ರೆಸ್

ಪ್ರಿಯದರ್ಶಿನಿ ಮಹಿಳಾ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳ ಜೊತೆಗೆ ಸಹ ಮಾತುಕತೆ ನಡೆಸಲಿದ್ದಾರೆ. ಮರ್ಮಗೋವಾದಲ್ಲಿ ಆಯೋಜನೆ ಮಾಡಿರುವ ಸಮಾವೇಶದಲ್ಲಿ ಅವರು ಹಲವಾರು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮ ಸಹ ಇದೆ.

ಗೋವಾ ಚುನಾವಣೆ; ಪ್ರತಿ ಬೂತ್‌ನಲ್ಲಿ 500 ಮತ ಬಿಜೆಪಿ ಗುರಿ! ಗೋವಾ ಚುನಾವಣೆ; ಪ್ರತಿ ಬೂತ್‌ನಲ್ಲಿ 500 ಮತ ಬಿಜೆಪಿ ಗುರಿ!

Goa Assembly Elections Priyanka Gandhi Vadra To Kick Start Campaign On December 10

ಶಿವಸೇನೆ ಜೊತೆ ಮೈತ್ರಿ?; ನವದೆಹಲಿಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಪ್ರಿಯಾಂಕ ವಾದ್ರಾ ಭೇಟಿ ಮಾಡಿದ್ದರು. ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಭೇಟಿಯ ಬಳಿಕ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿಯ ಸುಳಿವು ನೀಡಿದರು.

ಗೋವಾ ಚುನಾವಣೆ; ಪರಿಕ್ಕರ್ ಪುತ್ರನಿಗೆ ಬಿಜೆಪಿ ಟಿಕೆಟ್ ಸಿಗಲಿದೆಯೇ?ಗೋವಾ ಚುನಾವಣೆ; ಪರಿಕ್ಕರ್ ಪುತ್ರನಿಗೆ ಬಿಜೆಪಿ ಟಿಕೆಟ್ ಸಿಗಲಿದೆಯೇ?

ಕೆಲವು ದಿನಗಳ ಹಿಂದೆ ಗೋವಾದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಲುಜಿನೋ ಫಲೇರಿಯೋ ಕಾಂಗ್ರೆಸ್‌ ಬಿಟ್ಟು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೇರಿದ್ದರು. ವಿಧಾನಸಭೆ ಚುನಾವಣೆ ಎದುರಿರುವಾಗ ಇದು ಪಕ್ಷಕ್ಕೆ ಭಾರೀ ಹಿನ್ನಡೆ ಉಂಟು ಮಾಡಿತ್ತು.

ಗೋವಾ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದ್ದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಶಾಸಕ ರವಿ ನಾಯಕ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಆದ್ದರಿಂದ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಬದಲಾವಣೆಗಳು ಆಗಿವೆ.

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಗೋವಾ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ಕೊಟ್ಟಿದೆ. ಅಕ್ಟೋಬರ್‌ನಲ್ಲಿ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರ ನಡೆಸಿದ್ದರು. ಈಗ ಪ್ರಿಯಾಂಕ ಗಾಂಧಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.

ರವಿ ನಾಯಕ್ ಬಿಜೆಪಿ ಸೇರ್ಪಡೆ; ಕಾಂಗ್ರೆಸ್ ತೊರೆದಿದ್ದ ಮಾಜಿ ಮುಖ್ಯಂಮಂತ್ರಿ, ಶಾಸಕ ರವಿ ನಾಯಕ್ ಪಣಜಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಸೇರಿದರು. ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಗೋವಾ ಚುನಾವಣೆಯ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ರವಿ ನಾಯಕ್‌ರನ್ನು ಬರಮಾಡಿಕೊಂಡರು.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ರವಿ ನಾಯಕ್, "ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 27 ಸ್ಥಾನಗಳಲ್ಲಿ ಜಯಗಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಮಾತ್ರ ದೇಶವನ್ನು ಮುಂದಕ್ಕೆ ಕೊಂಡೊಯ್ಯಬಲ್ಲರು" ಎಂದು ಹೇಳಿದರು.

ರವಿ ನಾಯಕ್ ಮಕ್ಕಳಾದ ರಾಯ್ ಮತ್ತು ರಿತೇಶ್ ಈಗಾಗಲೇ ಬಿಜೆಪಿ ಸೇರಿದ್ದಾರೆ. ಹಾಲಿ ಶಾಸಕರೇ ಪಕ್ಷ ಬಿಟ್ಟಿದ್ದು ಗೋವಾ ಕಾಂಗ್ರೆಸ್ ಪಾಲಿಕೆಗೆ ಮುಖಭಂಗವಾಗಿದೆ. 2017ರ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿದ್ದರೂ ಕಾಂಗ್ರೆಸ್‌ಗೆ ಅಧಿಕಾರ ಹಿಡಿಯಲು ಸಾಧ್ಯವಾಗಿರಲಿಲ್ಲ.

ರವಿ ನಾಯಕ್ ಮಕ್ಕಳು ಬಿಜೆಪಿ ಸೇರಿದ ತಕ್ಷಣ ಗೋವಾ ಕಾಂಗ್ರೆಸ್ ರವಿ ನಾಯಕ್‌ರನ್ನು ಪಕ್ಷದಿಂದ ವಜಾಗೊಳಿಸಿತ್ತು. ಕಾಂಗ್ರೆಸ್ ಶಾಸಕರಾಗಿದ್ದುಕೊಂಡು ಮಕ್ಕಳನ್ನು ಬಿಜೆಪಿಗೆ ಸೇರಿಸಿದ್ದಾರೆ. ಎರಡು ದೋಣಿಯಲ್ಲಿ ಕಾಲಿಡುವ ಪ್ರಯತ್ನ ಮಾಡಿದ್ದಾರೆ. ಅಂಥ ನಾಯಕರು ಕಾಂಗ್ರೆಸ್‌ಗೆ ಬೇಕಿಲ್ಲ. ಪಕ್ಷ ನಿಷ್ಠೆ ಹೊಂದಿರುವ ನಾಯಕರು ನಮಗೆ ಬೇಕು ಎಂದು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಛೋಡಂಕರ್ ಹೇಳಿದ್ದರು.

English summary
Congress general secretary Priyanka Gandhi Vadra to kick start Goa assembly elections 2022 campaign on December 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X