ಗೋವಾ ಚುನಾವಣೆ; ಒಂದೇ ದಿನ ಇಬ್ಬರು ಬಿಜೆಪಿ ಶಾಸಕರ ರಾಜೀನಾಮೆ

ಪಣಜಿ, ಜನವರಿ 11; ಗೋವಾದ ಆಡಳಿತ ಪಕ್ಷ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಒಂದೇ ದಿನ ಇಬ್ಬರು ಶಾಸಕರು ಪಕ್ಷ ತೊರೆದಿದ್ದಾರೆ. ಈಗಾಗಲೇ ಗೋವಾ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಫೆಬ್ರವರಿ 14ರಂದು ಮತದಾನ ನಡೆಯಲಿದೆ.

ಸೋಮವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಸಚಿವರಾಗಿದ್ದ ಮೈಕಲ್ ಲೋಬೋ ಹಾಗೂ ಪ್ರವೀಣ್ ಜಾಂತ್ಯೆ ಬಿಜೆಪಿ ತೊರೆದಿದ್ದಾರೆ. ಈ ಮೂಲಕ ಬಿಜೆಪಿಯ ನಾಲ್ವರು ಶಾಸಕರು ಇದುವರೆಗೂ ರಾಜೀನಾಮೆ ನೀಡಿದ್ದಾರೆ.

ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈಕಲ್ ಲೋಬೋ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, "ಬಿಜೆಪಿ ಈಗ ಜನಸಾಮಾನ್ಯರ ಪಕ್ಷವಾಗಿ ಉಳಿದಿಲ್ಲ. ಪಕ್ಷದ ತಳಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ" ಎಂದು ಆರೋಪಿಸಿದ್ದಾರೆ.

Goa Assembly Polls Two BJP MLAs Quits BJP

ಕೆಲವು ದಿನಗಳಿಂದ ಬಹಿರಂಗವಾಗಿಯೇ ಪಕ್ಷದ ವಿರುದ್ಧ ಮೈಕಲ್ ಲೋಬೋ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಮನೋಹರ್ ಪರಿಕ್ಕರ್ ಕಟ್ಟಿದ ಪಕ್ಷ ಇದಲ್ಲ ಎಂದು ಹೇಳುತ್ತಿದ್ದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆಗೂ ಭಿನ್ನಾಭಿಪ್ರಾಯ ಹೊಂದಿದ್ದರು. ಈಗ ಸಚಿವ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ತೊರೆದಿದ್ದಾರೆ.

ಕ್ಯಾಥೋಲಿಕ್ ಸಮುದಾಯದ ಪ್ರಭಾವಿ ನಾಯಕ ಮೈಕಲ್ ಲೋಬೋ ಬರ್ದೇಶ್‌ ಪ್ರದೇಶದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ಈ ಪ್ರದೇಶದಲ್ಲಿ 6 ವಿಧಾನಸಭಾ ಕ್ಷೇತ್ರಗಳಿವೆ. ಗೋವಾ ಬಿಜೆಪಿ ಕ್ರಿಶ್ಚಿಯನ್ ಸಮುದಾಯವನ್ನು ಕಡೆಗಣಿಸುತ್ತಿದೆ ಎಂಬ ಆರೋಪವೂ ಇದೆ.

Recommended Video

      Happy Birthday, Rahul Dravid ಅವರಿಗೆ ಪಂದ್ಯದ ಜೊತೆಗೆ ಹುಟ್ಟುಹಬ್ಬದ ಸಂಭ್ರಮ | Oneindia Kannada

      ಅಲಿನಾ ಸಾಲ್ದಾನಾ, ಕಾರ್ಲೊಸ್ ಅಲ್ಮೇಡಾ, ಮೈಕಲ್ ಲೋಬೋ ಮತ್ತು ಪ್ರವೀಣ್ ಜಾಂತ್ಯೆ ಬಿಜೆಪಿ ತೊರೆದಿದ್ದಾರೆ. ಇದರಿಂದಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಬಲ 23ಕ್ಕೆ ಕುಸಿತಗೊಂಡಿದೆ. ಕಾಂಗ್ರೆಸ್‌ನ ಹಲವು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಕಡೆ ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮೈಕಲ್ ಲೋಬೋ ಬಿಜೆಪಿ ತೊರೆದಿದ್ದಾರೆ. ಅವರು ಕಾಂಗ್ರೆಸ್ ಸೇರುವುದಕ್ಕೆ ಸ್ಥಳೀಯ ನಾಯಕರು ವಿರೋಧ ಸಹ ವ್ಯಕ್ತಪಡಿಸುತ್ತಿದ್ದಾರೆ.

      ಪ್ರವೀಣ್ ಜಾಂತ್ಯೆ ರಾಜೀನಾಮೆ; ಸೋಮವಾರ ಮೈಕಲ್ ಲೋಬೋ ಬಳಿಕ ಪ್ರವೀಣ್ ಜಾಂತ್ಯೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಅವರು 2017ರ ಚುನಾವಣೆಗೂ ಮೊದಲು ಬಿಜೆಪಿ ಸೇರಿದ್ದರು. ಚುನಾವಣೆಗೆ ಟಿಕೆಟ್ ಪಡೆದು ಗೆದ್ದು ಬಂದಿದ್ದರು.

      ಬಿಜೆಪಿ ತೊರೆದ ಪ್ರವೀಣ್ ಜಾಂತ್ಯೆ ಸುಧಿನ್ ಧವ್ಲಿಕರ್ ನೇತೃತ್ವದ ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷ (ಎಂಜಿಪಿ) ಸೇರಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಎಂಜಿಪಿ ಪಕ್ಷ ಟಿಎಂಸಿ ಜೊತೆ ಮೈತ್ರಿ ಮಾಡಿಕೊಂಡಿದೆ.

      ಮೈಕಲ್ ಲೋಬೋ ಯಾವ ಪಕ್ಷ ಸೇರಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಕಾಂಗ್ರೆಸ್ ಸೇರುತ್ತೀರಾ? ಎಂಬ ಪ್ರಶ್ನೆಗೆ "ಬೇರೆ ಪಕ್ಷಗಳ ಜೊತೆಯೂ ಮಾತುಕತೆ ನಡೆದಿದೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

      ಗೋವಾದಲ್ಲಿ ಕ್ರಿಶ್ಚಿಯನ್ ಸಮುದಾಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆದರೆ ಈಗ ಸಮುದಾಯ ಬಿಜೆಪಿ ವಿರುದ್ಧವಾಗಿದೆ. ಗೋವಾ ವಿಧಾನಸಭೆಯಲ್ಲಿದ್ದ ನಾಲ್ವರು ಬಿಜೆಪಿ ಶಾಸಕರ ಪೈಕಿ ಮೂವರು ಪಕ್ಷ ತೊರೆದಿದ್ದಾರೆ.

      2017ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 13 ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ ಬೇರೆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆ ಆ ಹೊರಹೊಮ್ಮಿದರೂ ಸಹ ಅಧಿಕಾರ ಹಿಡಿಯಲು ವಿಫಲವಾಗಿತ್ತು.

      40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಿಗದಿಯಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ಇಬ್ಬರು ಶಾಸಕರು ಪಕ್ಷ ತೊರೆದಿದ್ದು, ರಾಜ್ಯ ಬಿಜೆಪಿ ಘಟಕಕ್ಕೆ ಹಿನ್ನಡೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+