ಗೋವಾದಲ್ಲಿ ಮನೋಹರ್ ಪರಿಕ್ಕರ್ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು

ಪಣಜಿ, ಮೇ 23: ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಗೋವಾ ವಿಧಾನಸಭಾ ಕ್ಷೇತ್ರವಾದ ಪಣಜಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಬಿಜೆಪಿಗೆ ಮುಖಭಂಗವನ್ನುಂಟು ಮಾಡಿದೆ.

ಕಾಂಗ್ರೆಸ್ ನ ಅಟಾನಾಸಿಯೋ ಮೊನ್ಸೆರಟ್ಟ್ ಅವರು 1775 ಮತಗಳ ಅಂತರದಿಂದ ಬಿಜೆಪಿಯ ಸಿದ್ಧಾರ್ಥ್ ಕುಂಕೋಲಿಯೆಂಕರ್ ಅವರನ್ನು ಸೋಲಿಸಿದರು.

ಇತ್ತೀಚೆಗಷ್ಟೇ ಮೃತರಾದ ಪರಿಕ್ಕರ್ ಅವರು ಈ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದರು. ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ಮೇ 19 ರಂದು ಉಪಚುನಾವಣೆ ನಡೆದಿತ್ತು. ಇಂದು ಅದರ ಫಲಿತಾಂಶ ಬಿಡುಗಡೆಯಾಗಿದ್ದು, ಬಿಜೆಪಿ ಸೋಲು ಕಂಡಿದೆ.

Goa: BJP loses Manohar Parrikars Panaji assembly seat

ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಅವರಿಗೆ ಟಿಕೆಟ್ ನೀಡದೆ, ಅನುಕಂಪದ ಮತಗಳನ್ನೂ ಬಿಜೆಪಿ ಕಳದುಕೊಂಡ ಕಾರಣ ಈ ಕ್ಷೇತ್ರದಲ್ಲಿ ಅದು ಸೋಲು ಕಂಡಿದೆ.

ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು 2018ರ ಮಾರ್ಚ್ 17ರಂದು ಅವರು ವಿಧಿವಶರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+