• search
 • Live TV
ಪಣಜಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಗೆ ಕೊರೊನಾ ಸೋಂಕು

|

ಪಣಜಿ, ಸೆಪ್ಟೆಂಬರ್ 02: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌(47)ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನು ಸ್ವತಃ ಪ್ರಮೋದ್ ಸಾವಂತ್ ಅವರೇ ತನ್ನ ಟ್ವಿಟ್ಟರ್ನಲ್ಲಿ ಖಚಿತ ಪಡಿಸಿದ್ದಾರೆ.

   ಆಸ್ಪತ್ರೆಯಿಂದ ಕೆಲಸ ಮಾಡುತ್ತಿರುವ Minister | Oneindia Kannada

   ಗೋವಾ ರಾಜ್ಯದಲ್ಲಿ ಇದುವರೆಗೆ 17,418 ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದುವರೆಗೆ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

   ಪ್ರಮೋದ್ ಸಾವಂತ್ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊವಿಡ್ 19 ಆರೈಕೆ ಕೇಂದ್ರಗಳ ಹೊಣೆ ಹೊತ್ತಿರುವ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಯಾಚರಣೆ ಪರಿಶೀಲನೆ ನಡೆಸಿದ್ದರು.

   ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.

   English summary
   Goa Chief Minister Pramod Sawant tweeted this morning to say that he has tested positive for coronavirus and that he is in home isolation. Mr Sawant, 47, said he is "asymptomatic and hence have opted for home isolation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X