Get Updates
Get notified of breaking news, exclusive insights, and must-see stories!
Live

Goa CM Swearing-in Live; 2ನೇ ಬಾರಿಗೆ ಗೋವಾದ ಮುಖ್ಯಮಂತ್ರಿಯಾದ ಪ್ರಮೋದ್ ಸಾವಂತ್

ಗೋವಾ, ಮಾರ್ಚ್ 28; ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮೂರು ಬಾರಿಯ ಶಾಸಕರಾದ 48 ವರ್ಷದ ಪ್ರಮೋದ್ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾದರು.

ಸೋಮವಾರ ಬೆಳಗ್ಗೆ 11 ಗಂಟೆಗೆ ಪಣಜಿ ಸಮೀಪದ ಬಾಂಬೋಲಿಂ ಶಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಪ್ರಮೋದ್ ಸಾವಂತ್‌ಗೆ ಪ್ರಮಾಣ ವಚನ ಬೋಧಿಸಿದರು.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಮಾರ್ಚ್ 10ರಂದು ಫಲಿತಾಂಶ ಪ್ರಕಟಗೊಂಡಿತ್ತು. ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು.

Pramod Sawant

ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಬಹುಮತಕ್ಕೆ ಬಿಜೆಪಿಗೆ 1 ಸ್ಥಾನದ ಕೊರತೆ ಇತ್ತು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇತರ ಶಾಸಕರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಬೆಂಬಲಿಸಿದ್ದು, ಅವರ ನೆರವಿನಿಂದ ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ.

Pramod Sawant

Mar 28, 2022, 11:15 am IST

ಗೋವಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಪ್ರಮಾಣ ವಚನ ಕಾರ್ಯಕ್ರಮ ಮುಕ್ತಾಯಗೊಂಡಿದೆ.
Mar 28, 2022, 11:12 am IST

ವಿಶ್ವಜಿತ್ ರಾಣೆ, ರವಿ ನಾಯಕ್, ಮೌವಿನ್ ಗೊಡಿನ್ಹೋ, ನೀಲೇಶ್ ಕಬ್ರಾಲ್, ಸುಭಾಷ್ ಶಿರೋಡ್ಕರ್, ರೋಹನ್ ಖೌಂಟೆ, ಅಟಾನಾಸಿಯೊ ಮಾನ್ಸೆರೇಟ್ ಮತ್ತು ಗೋವಿಂದ್ ಗೌಡೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
Mar 28, 2022, 11:04 am IST

ಗೋವಾ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
Mar 28, 2022, 11:03 am IST

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
Mar 28, 2022, 11:01 am IST

ಪ್ರಮೋದ್ ಸಾವಂತ್ ಪ್ರಮಾಣ ವಚನ ಕಾರ್ಯಕ್ರಮ ಆರಂಭಗಾಗಿದೆ.
Mar 28, 2022, 10:41 am IST

ಪಣಜಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ. ಪ್ರಮೋದ್ ಸಾವಂತ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Mar 28, 2022, 10:39 am IST

ರಾಜ್ಯಪಾಲರನ್ನು ಭೇಟಿಯಾದ ನಿಯೋಜಿತ ಸಿಎಂ ಪ್ರಮೋದ್ ಸಾವಂತ್
Mar 28, 2022, 10:20 am IST

ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇರುವ ಸಚಿವರು

ವಿಶ್ವಜೀತ್ ರಾಣೆ (ಶಾಸಕ, ವಾಲ್ಪೈ); ಮೂವೆನ್ ಗುಡಿನ್ಹೋ (ಶಾಸಕ, ದಾಬೋಲಿಮ್); ರವಿ ನಾಯ್ಕ್ (ಶಾಸಕ, ಫೋಂಡಾ); ನೀಲೇಶ್ ಕಬ್ರಾಲ್ (ಶಾಸಕ, ಕುಡಚಡೆ); ಸುಭಾಷ್ ಶಿರೋಡ್ಕರ್ (ಶಾಸಕರು, ಶಿರೋಡಾ); ರೋಹನ್ ಖೌಂಟೆ (ಶಾಸಕ, ಪರ್ವರಿಮ್); ಬಾಬುಷ್ ಮೊನ್ಸೆರಟ್ಟೆ (ಶಾಸಕ, ಪಣಜಿ); ಗೋವಿಂದಗೌಡ (ಶಾಸಕ, ಪ್ರಿಯೋಲ್)
Mar 28, 2022, 9:08 am IST

ಪ್ರಮಾಣ ವಚನ ಸಮಾರಂಭದಲ್ಲಿ 10 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
Mar 28, 2022, 8:27 am IST

ಪ್ರಮೋದ್ ಸಾವಂತ್ ಜೊತೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಆದರೆ ಯಾವ ಶಾಸಕರು ಸಂಪುಟ ಸೇರಲಿದ್ದಾರೆ ಎಂಬ ಗುಟ್ಟನ್ನು ಗೋವಾ ಬಿಜೆಪಿ ಬಿಟ್ಟುಕೊಟ್ಟಿಲ್ಲ.
Mar 28, 2022, 8:04 am IST

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸಮಾರಂಭಕ್ಕಾಗಿ ವಿಶೇಷ ವಿಮಾನದಲ್ಲಿ ಪಣಜಿಗೆ ತೆರಳಿದ್ದಾರೆ.
Mar 28, 2022, 7:51 am IST

ಬಿಜೆಪಿ ಆಡಳಿತವಿರುವ 7 ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
Mar 28, 2022, 7:26 am IST

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Mar 28, 2022, 7:11 am IST

ಸಂಕ್ವೆಲಿಮ್ ಕ್ಷೇತ್ರದ ಮೂರು ಬಾರಿಯ ಶಾಸಕ ಪ್ರಮೋದ್ ಸಾವಂತ್ (48) ಎರಡನೇ ಬಾರಿಗೆ ಗೋವಾದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
Mar 28, 2022, 7:11 am IST

2019ರಲ್ಲಿ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪ್ರಮೋದ್ ಸಾವಂತ್ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+