ಗೋವಾದಲ್ಲಿ ಇಂದು ವಿಶ್ವಾಸಮತ ಯಾಚನೆ, 5-ಸ್ಟಾರ್ ಹೊಟೆಲ್ ನಲ್ಲಿ ಶಾಸಕರು!

ಪಣಜಿ, ಮಾರ್ಚ್ 20: ಮನೋಹರ್ ಪರಿಕ್ಕರ್ ನಿಧನದ ನಂತರ ಗೋವಾ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಅವರು ಆಯ್ಕೆಯಾಗಿದ್ದು, ಇಂದು ಅವರು ವಿಶ್ವಾಸಮತ ಯಾಚಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎಲ್ಲಾ ಶಾಸಕರನ್ನೂ ಗೋವಾದ ಫೈವ್ ಸ್ಟಾರ್ ಹೊಟೆಲ್ ವೊಂದಕ್ಕೆ ಕಳಿಸಿದೆ. ಒಟ್ಟು 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಗೋವಾ ಸದ್ಯಕ್ಕೆ 36 ಸದಸ್ಯ ಬಲ ಹೊಂದಿದೆ. ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಮತ್ತು ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ನಿಧನದಿಂದ ಹಾಗೂ ಕಾಂಗ್ರೆಸ್ ನ ಇಬ್ಬರು ಶಾಸಕರಾದ ಸುಭಾಶ್ ಶಿರೋಡ್ಕರ್ ಮತ್ತು ದಯಾನಂದ್ ಸೊಪ್ಟೆ ಅವರ ರಾಜೀನಾಮೆಯಿಂದ ನಾಲ್ಕು ಸ್ಥಾನಗಳು ತೆರವಾಗಿವೆ.

ಒಟ್ಟು 36 ಸದಸ್ಯ ಬಲದ ಗೋವಾ ವಿಧಾನಸಭೆಗೆ ಅಗತ್ಯವಿರುವ ಬಹುಮತ 19. ಸದ್ಯಕ್ಕೆ ಬಿಜೆಪಿ(12)ಯು ಗೋವಾ ಫಾರ್ವರ್ಡ್ ಪಕ್ಷ(3) ಮಹಾರಾಷ್ಟ್ರ ಗೋಮಂತ್ ಪಕ್ಷ(3) ಮತ್ತು ಇತರರೊಂದಿಗೆ(3) ಸೇರಿ 21 ಸ್ಥಾನಗಳನ್ನು ಪಡೆದಿದ್ದು, ಬಹುಮತ ಸಾಬೀತುಪಡಿಸುವ ವಿಶ್ವಾಸ ಹೊಂದಿದೆ.

Goa CM Pramod Sawant, to face floor test, BJP MLAs in 5-star hotel

ಮೈತ್ರಿ ಪಕ್ಷಗಳು ಬಂಡಾಯ ಏಳುವ ಸಂಭವ ಇದ್ದಿದ್ದರಿಂದಲೇ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸುತ್ತಿದ್ದಂತೆಯೇ ಜಿಎಫ್ ಪಿಯ ವಿಜಯ್ ಸರ್ದೇಸಾಯಿ ಮತ್ತು ಎಮ್ ಜಿಪಿಯ ಸುದಿನ್ ಧಾವಾಲಿಕರ್ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+