ಗೋವಾದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ; ಮುಂದಿನ ತಂತ್ರ ಸಿದ್ಧ

ಪಣಜಿ, ಮಾರ್ಚ್ 08; ಗೋವಾ ವಿಧಾನಸಭೆ ಚುನಾವಣೆಗೆ ಮತದಾನ ಮುಕ್ತಾಯವಾಗಿದೆ. ಸೋಮವಾರ ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಸಹ ಪ್ರಕಟವಾಗಿವೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಒಂದೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21. ಸದ್ಯ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ. ಈ ಬಾರಿಯ ಚುನಾವಣೆಯಲ್ಲಿ 22 ಪ್ಲಸ್ ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಪಕ್ಷವಿದೆ.

5 ರಾಜ್ಯಗಳ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದ್ದು, ಸೋಮವಾರ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಗೋವಾದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಅತಂತ್ರ ಫಲಿತಾಂಶ ಬರಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ. ಈ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳು ಜೋರಾಗಿವೆ.

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ 14 ರಿಂದ 17, ಬಿಜೆಪಿ 14 ರಿಂದ 17 ಮತ್ತು ಎಎಪಿ 2 ರಿಂದ 4, ಇತರರು 3 ರಿಂದ 6 ಮತ್ತು ಟಿಎಂಸಿ 2-4 ಸ್ಥಾನಗಳಲ್ಲಿ ಜಯಗಳಿಸಲಿವೆ ಎಂದು ಸಮೀಕ್ಷೆಗಳು ಅಂದಾಜಿಸಿವೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯುವ ಭರವಸೆಯಲ್ಲಿವೆ. ಮಾರ್ಚ್ 10ರ ತನಕ ಕಾದು ನೋಡಿ ಎಂದು ಚುನಾವಣೋತ್ತರ ಸಮೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡಿವೆ.

ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್

ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಗೆಲ್ಲುವ ವಿಶ್ವಾಸದಲ್ಲಿದೆ. ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದ ಮೇಲೆ ಪಕ್ಷಕ್ಕೆ ಅಪಾರವಾದ ಭರವಸೆ ಇದೆ.

ಪಕ್ಷದ ಹಿರಿಯ ನಾಯಕ ಪಿ. ಚಿದಂಬರಂ ಚುನಾವಣೋತ್ತರ ಸಮೀಕ್ಷೆ ಬಳಿಕ ಪ್ರತಿಕ್ರಿಯೆ ನೀಡಿದ್ದು, "ಸರ್ಕಾರ ರಚನೆ ಮಾಡುವಾಗ ಬಿಜೆಪಿಯೇತರ ಪಕ್ಷಗಳ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತದೆ" ಎಂದು ಹೇಳಿದರು.

2017ರ ತಪ್ಪನ್ನು ಮತ್ತೆ ಮಾಡುವುದಿಲ್ಲ

2017ರ ತಪ್ಪನ್ನು ಮತ್ತೆ ಮಾಡುವುದಿಲ್ಲ

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮಾತನಾಡಿ, "2017ರ ಚುನಾವಣೆಯ ತಪ್ಪನ್ನು ಕಾಂಗ್ರೆಸ್ ಪಕ್ಷ ಮತ್ತೆ ಮಾಡುವುದಿಲ್ಲ. ನಾವು ಅತಿ ದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಹಿಂದಿಕ್ಕಿತು" ಎಂದರು.

"ಪಿ. ಚಿದಂಬರಂ ನಮಗೆ ಹೇಳಿದ್ದಾರೆ. ಒಂದು ವೇಳೆ ಪಕ್ಷ ಬಹುಮತವನ್ನು ಪಡೆದರೂ ಬಿಜೆಪಿಯೇತರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು" ಎಂದು ಹೇಳಿದ್ದಾರೆ ಎಂದರು.

ಕಾಂಗ್ರೆಸ್ ಮೈತ್ರಿಕೂಟಕ್ಕೆ ಗೆಲುವು

ಕಾಂಗ್ರೆಸ್ ಮೈತ್ರಿಕೂಟಕ್ಕೆ ಗೆಲುವು

"ನಾವು ಮತ್ತು ಗೋವಾ ಫಾರ್ವರ್ಡ್‌ ಪಕ್ಷದ ಮೈತ್ರಿಕೂಟ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ" ಎಂದು ದಿಗಂಬರ್ ಕಾಮತ್ ಹೇಳಿದರು.

ಗೋವಾದ 40 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 37 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ಗೋವಾ ಫಾರ್ವರ್ಡ್ ಪಕ್ಷಕ್ಕೆ 3 ಸೀಟುಗಳನ್ನು ಕಾಂಗ್ರೆಸ್ ಪಕ್ಷ ಬಿಟ್ಟುಕೊಟ್ಟಿದೆ.

ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಟಿಎಂಸಿ, ಎನ್‌ಸಿಪಿ ಮತ್ತು ಶಿವಸೇನೆಗಳು ಸಹ ಬೇಡಿಕೆ ಇಟ್ಟಿದ್ದವು. ಆದರೆ ಪಕ್ಷ ಮೈತ್ರಿಕೂಟ ರಚನೆಯ ಪ್ರಸ್ತಾಪವನ್ನು ಕಾಂಗ್ರೆಸ್ ಒಪ್ಪಲೇ ಇಲ್ಲ. ಕೇವಲ ಗೋವಾ ಫಾರ್ವರ್ಡ್‌ ಪಕ್ಷದೊಂದಿಗೆ ಮಾತ್ರ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತು.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ

ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಮಾತನಾಡಿ, "ಮಾರ್ಚ್ 10ರಂದು ಚುನಾವಣೆ ಫಲಿತಾಂಶ ಪ್ರಕಟಗೊಂಡ ತಕ್ಷಣ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾದ ತಕ್ಷಣ ನಾವು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದೇವೆ. 2017ರಲ್ಲಿ ನಡೆದ ರೀತಿ ಈ ವರ್ಷ ನಡೆಯುವುದಿಲ್ಲ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+