ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ; ಉತ್ಪಲ್ ಪರಿಕ್ಕರ್‌ಗೆ ಎಲ್ಲಾ ವಿರೋಧ ಪಕ್ಷಗಳ ಬೆಂಬಲ?

|
Google Oneindia Kannada News

ಪಣಜಿ, ಜನವರಿ 18; "ಬಿಜೆಪಿಯೇತರ ಪಕ್ಷಗಳು ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬೆಂಬಲಿಸಬೇಕು" ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಕರೆ ನೀಡಿದ್ದಾರೆ. ಫೆಬ್ರವರಿ 14ರಂದು ನಡೆಯುವ ಗೋವಾ ವಿಧಾನಸಭೆ ಚುನಾವಣೆಗೆ ಉತ್ಪಲ್ ಪರಿಕ್ಕರ್ ಬಿಜೆಪಿ ಟಿಕೆಟ್ ಆಕಾಂಕ್ಷಿ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಗೆ ತಿರುಗೇಟು ನೀಡುವಂತೆ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. "ಗೋವಾದ ಎಲ್ಲ ವಿರೋಧ ಪಕ್ಷಗಳು ಉತ್ಪಲ್ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಕಣಕ್ಕಿಳಿಯುವುದನ್ನು ಬೆಂಬಲಿಸಬೇಕು. ಯಾವ ಪಕ್ಷಗಳು ಸಹ ಅವರ ವಿರುದ್ಧ ಅಭ್ಯರ್ಥಿ ಹಾಕಬಾರದು" ಎಂದು ಕರೆ ನೀಡಿದ್ದಾರೆ.

ಗೋವಾ; ಎಎಪಿ, ಟಿಎಂಸಿಗೆ ಟ್ವೀಟ್ ಬಾಣ ಬಿಟ್ಟ ಪಿ. ಚಿದಂಬರಂ ಗೋವಾ; ಎಎಪಿ, ಟಿಎಂಸಿಗೆ ಟ್ವೀಟ್ ಬಾಣ ಬಿಟ್ಟ ಪಿ. ಚಿದಂಬರಂ

ಬಿಜೆಪಿ ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ ಇದೆ. ಪಣಜಿ ಕ್ಷೇತ್ರದಿಂದ ಬಾಬೂಶ್ ಮೊನ್ಸೆರಾತ್ ಟಿಕೆಟ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಜನವರಿ 12ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಉತ್ಪಲ್ ಪರಿಕ್ಕರ್ ಟಿಕೆಟ್‌ಗಾಗಿ ಮನವಿ ಮಾಡಿದ್ದರು.

ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು! ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು!

ದಿ. ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಗೋವಾದ ರಾಜಧಾಣಿ ಪಣಜಿ ಕ್ಷೇತ್ರದಿಂದಲೇ ಉತ್ಪಲ್ ಪರಿಕ್ಕರ್ ಟಿಕೆಟ್ ಬಯಸಿದ್ದಾರೆ. ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ಬಯಸಿದ್ದು, ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಗೋವಾ ಚುನಾವಣೆ; ಜನವರಿ 19ರಂದು ಬಿಜೆಪಿ ಅಭ್ಯರ್ಥಿಗಳು ಘೋಷಣೆ ಗೋವಾ ಚುನಾವಣೆ; ಜನವರಿ 19ರಂದು ಬಿಜೆಪಿ ಅಭ್ಯರ್ಥಿಗಳು ಘೋಷಣೆ

ಟಿಕೆಟ್ ನೀಡುವುದಿಲ್ಲ ಎಂಬ ಸುಳಿವು

ಟಿಕೆಟ್ ನೀಡುವುದಿಲ್ಲ ಎಂಬ ಸುಳಿವು

ಗೋವಾ ಚುನಾವಣೆ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್, "ನಾಯಕರ ಮಕ್ಕಳು ಎಂಬ ಕಾರಣಕ್ಕೆ ಟಿಕೆಟ್ ನೀಡಲು ಸಾಧ್ಯವಿಲ್ಲ. ಟಿಕೆಟ್ ನೀಡುವ ಕುರಿತು ಸಂಸದೀಯ ಮಂಡಳಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ" ಎಂದು ಹೇಳಿದ್ದರು. ಈ ಮೂಲಕ ಉತ್ಪಲ್‌ ಪರಿಕ್ಕರ್‌ಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ನೀಡುವುದಿಲ್ಲ ಎಂಬ ಸುಳಿವನ್ನು ಪರೋಕ್ಷವಾಗಿ ನೀಡಿದ್ದರು.

ಸಂಜಯ್ ರಾವತ್ ಟ್ವೀಟ್

ಶಿವಸೇನೆ ನಾಯಕ ಸಂಜಯ್ ರಾವರ್‌ ಉತ್ಪಲ್ ಪರಿಕ್ಕರ್‌ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಬೆಂಬಲ ನೀಡಿದ್ದಾರೆ. ಅವರು ಪಕ್ಷೇತರ ಅಭ್ಯರ್ಥಿಯಾದರೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಪ್ರಮೋದ್ ಸಾವಂತ್ ಹೇಳಿಕೆ

ಪ್ರಮೋದ್ ಸಾವಂತ್ ಹೇಳಿಕೆ

ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. 38 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಯನ್ನು ಪಕ್ಷ ಅಂತಿಮಗೊಳಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿಯೂ ಪಾಲ್ಗೊಂಡು ಗೋವಾಕ್ಕೆ ವಾಪಸ್ ಆಗಿದ್ದಾರೆ. ಜನವರಿ 19ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಆದರೆ ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ನೀಡುವ ವಿಚಾರದಲ್ಲಿ ಅವರು ಮೌನ ವಹಿಸಿದ್ದಾರೆ.

ಟಿಕೆಟ್ ವಿಚಾರದಲ್ಲಿ ಅಸಮಾಧಾನ

ಟಿಕೆಟ್ ವಿಚಾರದಲ್ಲಿ ಅಸಮಾಧಾನ

40 ಸದಸ್ಯ ಬಲದ ಗೋವಾ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಗೋವಾ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ. ಒಂದು ಕಡೆ ಮನೋಹರ್ ಪರಿಕ್ಕರ್ ಪುತ್ರನಿಗೆ ಟಿಕೆಟ್ ನೀಡುತ್ತಿಲ್ಲ. ಮತ್ತೊಂದು ಕಡೆ ಬಾಬು ಆಜಗಾಂವಕರ್‌ ಪೆಡ್ನೆಗೆ ಮಡಗಾಂವ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚಿಸಲಾಗಿದೆ. ಆದರೆ, ಅವರು ಪಸ್ತುತ ಪ್ರತಿನಿಧಿಸುತ್ತಿರುವ ಪೆಡ್ನೆ ಕ್ಷೇತ್ರದಿಂದಲೇ ಸ್ಫರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಏಕೆ ಟಿಕೆಟ್ ನೀಡುವುದಿಲ್ಲ?

ಏಕೆ ಟಿಕೆಟ್ ನೀಡುವುದಿಲ್ಲ?

ಪಣಜಿ ಕ್ಷೇತ್ರದಿಂದ ಉತ್ಪಲ್ ಪರಿಕ್ಕರ್‌ಗೆ ಬಿಜೆಪಿ ಏಕೆ ಟಿಕೆಟ್ ನೀಡುವುದಿಲ್ಲ? ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಲು ಉತ್ಪಲ್ ಪರಿಕ್ಕರ್ ಬಯಸಿದ್ದಾರೆ. ಆದರೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ನಿರೀಕ್ಷೆ ಇದೆ.

2019ರಲ್ಲಿ ಮನೋಹರ್ ಪರಿಕ್ಕರ್ ನಿಧನದ ಬಳಿಕ ನಡೆದ ಉಪ ಚುನಾವಣೆಯಲ್ಲಿಯೂ ಉತ್ಪಲ್ ಪರಿಕ್ಕರ್ ಟಿಕೆಟ್ ಕೇಳಿದ್ದರು. ಆದರೆ ಟಿಕೆಟ್ ನೀಡಿರಲಿಲ್ಲ, ಉಪ ಚುನಾವಣೆಯಲ್ಲಿ ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ.

ಪಕ್ಷಕ್ಕೆ ಸ್ವಾಗತಿಸಿದ ಕೇಜ್ರಿವಾಲ್

ಪಕ್ಷಕ್ಕೆ ಸ್ವಾಗತಿಸಿದ ಕೇಜ್ರಿವಾಲ್

ಗೋವಾ ವಿಧಾನಸಭೆ ಚುನಾವಣೆಗೆ ಮೊದಲ ಬಾರಿಗೆ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಶನಿವಾರ ಮತ್ತು ಭಾನುವಾರ ಗೋವಾ ಪ್ರವಾಸ ಕೈಗೊಂಡಿದ್ದ ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್‌ರನ್ನು ಪಕ್ಷಕ್ಕೆ ಆಹ್ವಾನಿಸಿದ್ದರು. "ಮನೋಹರ್ ಪರಿಕ್ಕರ್ ಬಗ್ಗೆ ಅಪಾರವಾದ ಗೌರವಿದೆ. ಉತ್ಪಲ್ ಪರಿಕ್ಕರ್ ಅವರು ಪಕ್ಷ ಸೇರಲು ಬಯಸಿದರೆ ಸ್ವಾಗತಿಸುತ್ತೇನೆ" ಎಂದು ಹೇಳಿದ್ದರು.

Recommended Video

IPLನಲ್ಲಿ ಈ ನೂತನ ತಂಡದ captain Hardik Pandya | Oneindia Kannada

English summary
All opposition parties in Goa suppor Utpal Parrikar candidature from Panaji by not fielding any candidate against him said Shiv Sena MP Sanjay Raut. Utpal Parrikar son of former CM Manohar Parrikar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X