ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆ; ಮಹತ್ವದ ಸಭೆ ನಡೆಸಿದ ದೇವೇಂದ್ರ ಫಡ್ನವೀಸ್

|
Google Oneindia Kannada News

ಪಣಜಿ, ಜನವರಿ 13; ಗೋವಾ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ವಿವಿಧ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿವೆ. ಫೆಬ್ರವರಿ 14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಗೋವಾ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಮಹತ್ವದ ಸಭೆ ನಡೆಸಿದರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಗೋವಾ ಚುನಾವಣೆ; ಮಾಜಿ ಸಚಿವ ಮಿಚೆಲ್ ಲೋಬೊ ಕಾಂಗ್ರೆಸ್ ಸೇರ್ಪಡೆ ಗೋವಾ ಚುನಾವಣೆ; ಮಾಜಿ ಸಚಿವ ಮಿಚೆಲ್ ಲೋಬೊ ಕಾಂಗ್ರೆಸ್ ಸೇರ್ಪಡೆ

ಬುಧವಾರ ಸಂಜೆ ಪಣಜಿಯಲ್ಲಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ಸಮಿತಿ ಸಭೆ ನಡೆಯಿತು. ಪ್ರಚಾರ ಕಾರ್ಯದಿಂದ ಹಿಡಿದು, ಅಭ್ಯರ್ಥಿಗಳ ಪಟ್ಟಿ ತಯಾರಿ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು.

ಗೋವಾ ಚುನಾವಣೆ; ಮೈತ್ರಿ ಸುಳಿವು ಕೊಟ್ಟ ಶರದ್ ಪವಾರ್ ಗೋವಾ ಚುನಾವಣೆ; ಮೈತ್ರಿ ಸುಳಿವು ಕೊಟ್ಟ ಶರದ್ ಪವಾರ್

Goa Election Devendra Fadnavis Meeting With State BJP Leaders

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜನವರಿ 21ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿದೆ.

ಗೋವಾ; ಶಾಸಕ ಸ್ಥಾನಕ್ಕೆ ಸಂಸ್ಕೃತಿ ಖಾತೆ ಸಚಿವ ರಾಜೀನಾಮೆ ಗೋವಾ; ಶಾಸಕ ಸ್ಥಾನಕ್ಕೆ ಸಂಸ್ಕೃತಿ ಖಾತೆ ಸಚಿವ ರಾಜೀನಾಮೆ

ಜನವರಿ 31 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಧಿಸೂಚನೆ ಪ್ರಕಟವಾಗುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಬೇಕಿದೆ. ಈ ಕುರಿತು ರಾಜ್ಯ ಬಿಜೆಪಿ ನಾಯಕರ ಜೊತೆ ದೇವೇಂದ್ರ ಫಡ್ನವೀಸ್ ಚರ್ಚೆ ನಡೆಸಿದರು.

ಇಬ್ಬರು ಶಾಸಕರ ರಾಜೀನಾಮೆ; ಸೋಮವಾರ ಬಿಜೆಪಿಯ ಇಬ್ಬರು ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಬಿಜೆಪಿ ತೆರೆದಿದ್ದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಸಚಿವರಾಗಿದ್ದ ಮೈಕಲ್ ಲೋಬೋ ಸಚಿವ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಈಗಾಗಲೇ ಕಾಂಗ್ರೆಸ್ ಸೇರಿದ್ದಾರೆ.

ಸೋಮವಾರ ಬಿಜೆಪಿ ಶಾಸಕ ಪ್ರವೀಣ್ ಜಾಂತ್ಯೆ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷವನ್ನು ತೊರೆದಿದ್ದರು. ಅವರು ಎಂಜಿಪಿ ಪಕ್ಷವನ್ನು ಸೇರಲಿದ್ದಾರೆ. ಈ ಹಿನ್ನಲೆಯಲ್ಲಿ ದೇವೇಂದ್ರ ಫಡ್ನವೀಸ್ ನಡೆಸಿದ ಸಭೆ ಕುತೂಹಲಕ್ಕೆ ಕಾರಣವಾಗಿತ್ತು.

ಕ್ರಿಶ್ಚಿಯನ್ ಸಮುದಾಯದ ಶಾಸಕರು ಪಕ್ಷವನ್ನು ತೆರೆಯುತ್ತಿರುವುದು ಗೋವಾ ಬಿಜೆಪಿಗೆ ತಲೆ ನೋವಾಗಿದೆ. ಮೈಕಲ್ ಲೋಬೊ, ಅಲಿನಾ ಸಾಲ್ದಾನಾ, ಕಾರ್ಲೊಸ್ ಅಲ್ಮೇಡಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗೋವಾ ವಿಧಾನಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ ನಾಲ್ವರು ಕ್ರಿಶ್ಚಿಯನ್ ಸಮುದಾಯದ ಶಾಸಕರಲ್ಲಿ ಮೂವರು ಪಕ್ಷ ಬಿಟ್ಟಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಈಗ ಬಿಜೆಪಿ ಶಾಸಕರ ಬಲ 23. ಶಾಸಕರ ರಾಜೀನಾಮೆ ಕುರಿತು ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ಭಾರತೀಯ ಜನತಾ ಪಕ್ಷ ದೊಡ್ಡ ಕುಟುಂಬವಿದ್ದಂತೆ. ತಾಯಿ ನಾಡಿನ ಸೇವೆಯನ್ನು ಅದು ಮುಂದುವರೆಸುತ್ತದೆ. ಕೆಲವರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಪಕ್ಷ ಬಿಟ್ಟು ಹೋಗಿದ್ದಾರೆ" ಎಂದು ಟ್ವೀಟ್ ಮಾಡಿದ್ದರು.

ಈ ಬಾರಿಯ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎನ್‌ಸಿಪಿ, ಜಿಎಫ್‌ಪಿ, ಎಂಜಿಪಿ ಜೊತೆಗೆ ಟಿಎಂಸಿ ಮತ್ತು ಆಮ್‌ ಆದ್ಮಿ ಪಕ್ಷಗಳು ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಈ ಬಾರಿಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ 3ನೇ ಸ್ಥಾನಕ್ಕೆ ಕುಸಿಯಲಿದ್ದು, ಎಎಪಿ ವಿರೋಧ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.

Recommended Video

Jaspreet Bumrah ಸೇಡು ತೀರಿಸಿಕೊಂಡ ರೀತಿ ಇದು | Oneindia Kannada

ರಾಜ್ಯ ಬಿಜೆಪಿ ಘಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಕೆ ಮಾಡಲಿದೆ. ಬಳಿಕ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಚುನಾವಣಾ ಪ್ರಣಾಳಿಕೆಯನ್ನು ಸಹ ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆ ಇದೆ.

English summary
Goa assembly election BJP in charge Devendra Fadnavis chaired state election management committee meeting in Panaji. Goa elections will be held on February 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X