Goa Jan Ki Baat-India News Exit Poll 2022 : ಅತಂತ್ರ ಫಲಿತಾಂಶ

ಪಣಜಿ, ಮಾರ್ಚ್ 07: ಈ ಬಾರಿಯ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರುವುದಿಲ್ಲ ಎಂದು ಮತ್ತೊಂದು ಸಮೀಕ್ಷೆ ಹೇಳಿದೆ. ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಗೋವಾ ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 21. ಸೋಮವಾರ ಸಂಜೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಕಳೆದ ಬಾರಿಯೂ ಗೋವಾದಲ್ಲಿ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿತ್ತು. ಆದರೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ.

Jan Ki Baat-India News ಗೋವಾ ಚುನಾವಣೆ ಬಗ್ಗೆ ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ಸೋಮವಾರ ವರದಿ ಬಿಡುಗಡೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ 19 ಸ್ಥಾನಗಳಲ್ಲಿ ಜಯಗಳಿಸಿದರೂ ಸಹ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ.

Goa Election Jan Ki Baat-India News Exit Poll Results 2022 In Kannada

ಗೋವಾ ರಾಜ್ಯದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿ 13 ರಿಂದ 19 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ ಮೈತ್ರಿಕೂಟ 19 ರಿಂದ 14 ಸ್ಥಾನಗಳಲ್ಲಿ ಜಯಗಳಿಸಲಿದೆ. ಎಎಪಿ ಪಕ್ಷ 5 ರಿಂದ 3 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವರದಿ ಹೇಳಿದೆ.

Goa Election Jan Ki Baat-India News Exit Poll Results 2022 In Kannada

ಚುನಾವಣೆಯಲ್ಲಿ ಎಂಜಿಪಿ 1 ರಿಂದ 2 ಸ್ಥಾನದಲ್ಲಿ ಜಯಗಳಿಸಬಹುದು. ಇತರರು 1 ರಿಂದ 3 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ವರದಿ ಸಮೀಕ್ಷೆ ಅಂದಾಜಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+