ಗೋವಾ ಚುನಾವಣೆ; ಎಎಪಿ ಸಿಎಂ ಅಭ್ಯರ್ಥಿಗೆ 4,098 ಮತಗಳು!
ಪಣಜಿ, ಮಾರ್ಚ್ 10; ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಎಎಪಿ ಪಕ್ಷ ಪಂಜಾಬ್ನಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಪಕ್ಷದ ಇಬ್ಬರು ಶಾಸಕರು ಗೆಲುವು ಸಾಧಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಗುರುವಾರ ಗೋವಾ ರಾಜ್ಯದ ಚುನಾವಣೆ ಮತ ಎಣಿಕೆ ನಡೆಯಿತು. ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ. ಆದರೆ ಪಕ್ಷೇತರರ ಬೆಂಬಲದಿಂದ ಸರ್ಕಾರ ರಚನೆ ಮಾಡಲಿದೆ.
ಗೋವಾ ವಿಧಾನಸಭೆ ಚುನಾವಣೆಗೆ ಎಎಪಿ ಸಹ 40 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ವಕೀಲರಾದ ಅಮಿತ್ ಪಾಲೇಕರ್ರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹ ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದರು.

ಅಮಿತ್ ಕಾಲೇಕರ್ ಸೆ. ಕ್ರೂಜ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಕ್ಷೇತ್ರದ ಹಾಲಿ ಶಾಸಕರಾಗಿದ್ದವರು ಬಿಜೆಪಿಯ ಆಂಟೊನಿಯೋ ಫರ್ನಾಂಡೀಸ್. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ನ ರುಡಾಲ್ಫ್ ಫರ್ನಾಂಡೀಸ್ ಕ್ಷೇತ್ರವನ್ನು ಬಿಜೆಪಿಯಿಂದ ಕಸಿದುಕೊಂಡಿದ್ದಾರೆ.
ಫೆಬ್ರವರಿ 14ರಂದು ನಡೆದ ಚುನಾವಣೆಯಲ್ಲಿ ಆಂಟೊನಿಯೋ ಫರ್ನಾಂಡೀಸ್ 6,377 ಮತಗಳನ್ನು ಪಡೆದಿದ್ದಾರೆ. ರುಡಾಲ್ಫ್ ಫರ್ನಾಂಡೀಸ್ 8,841 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ 4,098 ಮತಗಳನ್ನು ಪಡೆದು ಮೂರನೇ ಸ್ಥಾನವನ್ನು ಪಡೆದಿದ್ದಾರೆ.
ಉತ್ತರ ಗೋವಾ ಫಲಿತಾಂಶ; ಇನ್ನು ಗೋವಾ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಗೋವಾ ಭಾಗದ 19 ಸೀಟುಗಳ ಪೈಕಿ 10 ಸೀಟುಗಳಲ್ಲಿ ಬಿಜೆಪಿ ಜಯಗಳಿಸಿದೆ. ಕಾಂಗ್ರೆಸ್ ಪಕ್ಷ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎಂಜಿಪಿ, ಆರ್ಜಿಪಿ ಮತ್ತು ಪಕ್ಷೇತರ ಅಭ್ಯರ್ಥಿ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಜಯಗಳಿಸಿದ್ದು (1 ಕ್ಷೇತ್ರದಲ್ಲಿ) ಮುನ್ನಡೆಯಲ್ಲಿದೆ. ಎಎಪಿ 2, ಗೋವಾ ಫಾರ್ವರ್ಡ್ ಪಕ್ಷ 1, ಎಂಜಿಪಿ 2, ಆರ್ಜಿಪಿ 1 ಮತ್ತು ಪಕ್ಷೇತರರು 3 ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications