ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ

|
Google Oneindia Kannada News

ಪಣಜಿ, ಮಾರ್ಚ್ 12; ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಗೋವಾ ವಿಧಾನಸಭೆ ಚುನಾವಣೆ 2022ರಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದ್ದು, ಮತ್ತೆ ಸರ್ಕಾರವನ್ನು ರಚನೆ ಮಾಡಲಿದೆ.

ಶನಿವಾರ ಮುಖ್ಯಮಂತ್ರಿ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಪ್ರಮೋದ್ ಸಾವಂತ್ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಗೋವಾ ಅಂತಿಮ ಫಲಿತಾಂಶ; ಬಿಜೆಪಿಗೆ ಪಕ್ಷೇತರರ ಬೆಂಬಲ ಗೋವಾ ಅಂತಿಮ ಫಲಿತಾಂಶ; ಬಿಜೆಪಿಗೆ ಪಕ್ಷೇತರರ ಬೆಂಬಲ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನದ ಬಳಿಕ ಸ್ಥಾನ ತೆರವಾಗಿತ್ತು. 2019ರ ಮಾರ್ಚ್‌ನಲ್ಲಿ ಮಧ್ಯರಾತ್ರಿ 2 ಗಂಟೆಗೆ ಪ್ರಮೋದ್ ಸಾವಂತ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

ಗೋವಾ ಫಲಿತಾಂಶ; ಪಕ್ಷವಾರು ಸೀಟು, ಮತಗಳಿಕೆ ಅಂಕಿ-ಅಂಶಗೋವಾ ಫಲಿತಾಂಶ; ಪಕ್ಷವಾರು ಸೀಟು, ಮತಗಳಿಕೆ ಅಂಕಿ-ಅಂಶ

Goa Election Result 2022; Chief Minister Pramod Sawant Resigned

ಗೋವಾ ವಿಧಾನಸಭೆಯ ಅವಧಿ ಶನಿವಾರ ಪೂರ್ಣಗೊಂಡಿದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆದಿತ್ತು. ಗುರುವಾರ ಮತ ಎಣಿಕೆ ನಡೆದಿದೆ. ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್‌ ನಂಬರ್ 21 ತಲುಪಲು ವಿಫಲವಾಗಿದೆ.

ಗೋವಾ ಚುನಾವಣೆ; ಉತ್ಪಲ್ ಪರಿಕ್ಕರ್ ಪಡೆದ ಮತಗಳು ಎಷ್ಟು?ಗೋವಾ ಚುನಾವಣೆ; ಉತ್ಪಲ್ ಪರಿಕ್ಕರ್ ಪಡೆದ ಮತಗಳು ಎಷ್ಟು?

ಗೋವಾ ಚುನಾವಣೆ ಫಲಿತಾಂಶ; ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್‌ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇತರರು, ಎಂಜಿಪಿ ಪಕ್ಷ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದೆ. ಇದರಿಂದಾಗಿ ಬಿಜೆಪಿ ಬಲ 25ಕ್ಕೆ ಏರಿಕೆಯಾಗಿದ್ದು, ಸರ್ಕಾರ ರಚನೆ ಮಾಡಲಿದೆ.

ವೀಕ್ಷಕರು ಬಂದಿಲ್ಲ; ಶನಿವಾರ ರಾಜ್ಯದಲ್ಲಿ ಸರ್ಕಾರ ರಚನೆ ಬಗ್ಗೆ ಮಾತನಾಡಿದ ಪ್ರಮೋದ್ ಸಾವಂತ್, "ಎಂಜಿಪಿ ನಮಗೆ ಬೆಂಬಲ ನೀಡಿದೆ. ಕೇಂದ್ರದಿಂದ ವೀಕ್ಷಕರು ಇನ್ನೂ ಬಂದಿಲ್ಲ" ಎಂದರು.

ಕೇಂದ್ರದಿಂದ ವೀಕ್ಷಕರು ಬಂದ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಪ್ರಮೋದ್ ಸಾವಂತ್‌ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.

ಬಿಜೆಪಿ ಸರ್ಕಾರ ರಚನೆಗೆ ಬೆಂಬಲ ನೀಡಲಿರುವ ಎಂಜಿಪಿ, ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಿದೆ. ಹೈಕಮಾಂಡ್ ನಾಯಕರು ಬಂದ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

English summary
Goa Election Result 2022; Chief minister of Goa Pramod Sawant tendered his resignation to the governor P. S. Sreedharan Pillai. His first tenure comes to an end on March 12th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X