ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಫಲಿತಾಂಶ; ಪಕ್ಷವಾರು ಸೀಟು, ಮತಗಳಿಕೆ ಅಂಕಿ-ಅಂಶ

|
Google Oneindia Kannada News

ಪಣಜಿ, ಮಾರ್ಚ್ 11; ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಪಡೆಯುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷೇತರ ಅಭ್ಯರ್ಥಿಗಳ ಬೆಂಬಲದೊಂದಿಗೆ ಮತ್ತೆ ಅಧಿಕಾರ ಹಿಡಿಯುತ್ತಿದೆ.

ಗೋವಾ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 21. ಚುನಾವಣೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್‌ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಿಡಿಯಬಹುದು ಎಂಬ ಕಾಂಗ್ರೆಸ್‌ ಪಕ್ಷದ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಚುನಾವಣೆಯಲ್ಲಿ ಗೋವಾ ಫಾರ್ವರ್ಡ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ 37 ಕ್ಷೇತ್ರಗಳಲ್ಲಿ ಕಣಕ್ಕಿಳಿದಿತ್ತು, ಮೂರು ಕ್ಷೇತ್ರಗಳನ್ನು ಗೋವಾ ಫಾರ್ವರ್ಡ್‌ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು.

ಗೋವಾ ಚುನಾವಣೆ; ಎಎಪಿ ಸಿಎಂ ಅಭ್ಯರ್ಥಿಗೆ 4,098 ಮತಗಳು! ಗೋವಾ ಚುನಾವಣೆ; ಎಎಪಿ ಸಿಎಂ ಅಭ್ಯರ್ಥಿಗೆ 4,098 ಮತಗಳು!

Goa Election Result 2022: Party Wise Vote Share

ವಿಧಾನಸಭೆ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಶೇ 33.3ರಷ್ಟು ಮತಗಳನ್ನು ಪಡೆದಿದೆ. 11 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಶೇ 23.5ರಷ್ಟು ಮತವನ್ನು ಪಡೆದಿದೆ.

ಗೋವಾ ಚುನಾವಣೆ; ಜನರ ತೀರ್ಪು ಒಪ್ಪಿಕೊಂಡ ಕಾಂಗ್ರೆಸ್ ನಾಯಕರು ಗೋವಾ ಚುನಾವಣೆ; ಜನರ ತೀರ್ಪು ಒಪ್ಪಿಕೊಂಡ ಕಾಂಗ್ರೆಸ್ ನಾಯಕರು

ಇತರರು ಶೇ 19.37ರಷ್ಟು ಮತಗಳನ್ನು ಪಡೆದಿದ್ದಾರೆ. 2 ಕ್ಷೇತ್ರದಲ್ಲಿ ಗೆದ್ದಿರುವ ಎಎಪಿ ಶೇ 6.77ರಷ್ಟು ಮತಗಳನ್ನು ಪಡೆದಿದೆ. ಶೇ 1.12ರಷ್ಟು ನೋಟಾ ಮತಗಳು ಚಲಾವಣೆಯಾಗಿವೆ.

ಗೋವಾ; ಬಿಜೆಪಿಗೆ ಬೆಂಬಲ ಘೋಷಿಸಿದ ಮೂವರು ಪಕ್ಷೇತರರು! ಗೋವಾ; ಬಿಜೆಪಿಗೆ ಬೆಂಬಲ ಘೋಷಿಸಿದ ಮೂವರು ಪಕ್ಷೇತರರು!

20 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿಗೆ ಮೂವರು ಪಕ್ಷೇತರ ಅಭ್ಯರ್ಥಿಗಳು ಬೆಂಬಲ ನೀಡಿದ್ದಾರೆ. ಎಂಜಿಪಿ ಪಕ್ಷ ಸಹ 2 ಸ್ಥಾನದಲ್ಲಿ ಗೆದ್ದಿದ್ದು, ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ.

Recommended Video

ಅಧಿಕಾರದಲ್ಲಿದ್ರೂ ಪಂಜಾಬ್ನಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು ಹೇಗೆ? | Oneindia Kannada

English summary
Goa assembly election 2022 result announced. BJP bagged 20 seat and party will form government. Congress get 11 seats. Here are the vote share party wise.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X