Goa Election Result 2022: ಬಿಜೆಪಿ ನಾಯಕ ವಿಶ್ವಜಿತ್ ರಾಣೆ ಆನಂದಬಾಷ್ಪ
ಪಣಜಿ, ಮಾರ್ಚ್ 10: ಗೋವಾದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನಾಯಕ ಮತ್ತು ಸಚಿವ ವಿಶ್ವಜಿತ್ ರಾಣೆ ವಾಲ್ಪೊಯ್ ಸೆಗ್ಮೆಂಟ್‌ನಲ್ಲಿ ಮತದಾನ ಕೇಂದ್ರದಿಂದ ಹೊರಬರುವಾಗ ಸಂತೋಷದಿಂದ ಆನಂದಬಾಷ್ಪ ಸುರಿಸಿದ್ದಾರೆ. ಆರಂಭಿಕ ಚುನಾವಣೆ ಮತ ಎಣಿಕೆಯಲ್ಲಿ ಸುಮಾರು 7,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿರುವ ಬಿಜೆಪಿ ನಾಯಕ ವಿಶ್ವಜಿತ್ ರಾಣೆ ಸಂತಸದಿಂದ ಕಣ್ಣೀರು ಸುರಿಸಿದ್ದಾರೆ.
"ಇದು ಪ್ರಧಾನಿ (ನರೇಂದ್ರ ಮೋದಿ) ಮತ್ತು ಅವರು ಗೋವಾ ರಾಜ್ಯಕ್ಕಾಗಿ ಮಾಡಿದ ಎಲ್ಲಾ ಕಾರ್ಯಕ್ಕಾಗಿ ದೊರಕಿದ ಗೌರವ ಆಗಿದೆ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯಾಗಿದೆ," ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಮತ್ತು ಸಚಿವ ವಿಶ್ವಜಿತ್ ರಾಣೆ ಸಂತಸಗಂಬನಿ ಹರಿಸಿದರು.
"ಇದು ಜನರು ಮತ್ತು ಬಿಜೆಪಿಯ ನಾಯಕತ್ವದ ಗೆಲುವು. ಕಾಂಗ್ರೆಸ್ ಮತ್ತು ಇತರರ ಸೋಲಾಗಿದೆ. ಜನರು ನನ್ನನ್ನು ಗೆಲ್ಲಿಸಿದ್ದಾರೆ ಎಂದು ನನಗೆ ನಂಬಲು ಕೂಡಾ ಆಗುತ್ತಿಲ್ಲ. ಕಾಂಗ್ರೆಸ್ ಮತ್ತು ಇತರರು. ಪಕ್ಷಗಳು ಜನರನ್ನು ಮೂರ್ಖರನ್ನಾಗಿಸಿವೆ," ಎಂದು ಕೂಡಾ ಆನಂದಬಾಷ್ಪ ಸುರಿಸುತ್ತಲೇ ಹೇಳಿದ್ದಾರೆ.

ರಾಣೆ ಅವರು ತಮ್ಮ ಕಾರಿನಲ್ಲಿ ಕುಳಿತಾಗ ಅವರ ಬೆಂಬಲಿಗರು ಅವರನ್ನು ಮುಖ್ಯಮಂತ್ರಿ ಎಂದು ಹೆಸರಿಸಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಇನ್ನು "ಗೋವಾದಲ್ಲಿ ಅಧಿಕಾರದಲ್ಲಿರುವ ಸರ್ಕಾರವು ಮಹಿಳಾ ಸಬಲೀಕರಣ ಮತ್ತು ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರಗಳಾದ್ಯಂತ ವ್ಯಾಪಕವಾದ ಕೆಲಸವನ್ನು ಮಾಡಿದೆ," ಎಂದು ಹೇಳಿದ ವಿಶ್ವಜಿತ್ ರಾಣೆ ಕರಾವಳಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋವಾ ವಿಧಾನಸಭೆ ಚುನಾವಣೆ
ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಅಧಿಕಾರ ಪಡೆಯಲು ಮ್ಯಾಜಿಕ್ ನಂಬರ್ 21. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆದಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.
ಗೋವಾದಲ್ಲಿ 2017ರ ಚುನಾವಣೆಯಲ್ಲಿ ಬಿಜೆಪಿ 13, ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ವಿಫಲವಾಗಿ ಪ್ರತಿಪಕ್ಷದಲ್ಲಿ ಕುಳಿತಿತ್ತು. ವಿವಿಧ ಪಕ್ಷ, ಪಕ್ಷೇತರರ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿತ್ತು. (ಒನ್‌ಇಂಡಿಯಾ ಸುದ್ದಿ)
ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?
ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.












Click it and Unblock the Notifications