Breaking; ಗೋವಾ ಸಚಿವ ಮಿಚೆಲ್ ಲೋಬೊ ರಾಜೀನಾಮೆ

ಪಣಜಿ, ಜನವರಿ 10; ಗೋವಾ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಸಚಿವ ಮತ್ತು ಶಾಸಕ ಸ್ಥಾನಕ್ಕೆ ಮಿಚೆಲ್ ಲೋಬೊ ರಾಜೀನಾಮೆ ನೀಡಿದ್ದಾರೆ. ಫೆಬ್ರವರಿ 14ರಂದು 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಸೋಮವಾರ ಈ ಕುರಿತು ಮಿಚೆಲ್ ಲೋಬೊ ಫೇಸ್‌ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಲಂಘಾಟ್ ಕ್ಷೇತ್ರದ ಬಿಜೆಪಿ ಶಾಸಕ, ವಿಜ್ಞಾನ & ತಂತ್ರಜ್ಞಾನ, ಬಂದರು ಖಾತೆ ಸಚಿವರ ಮಿಚೆಲ್ ಲೋಬೋ ರಾಜೀನಾಮೆ ನೀಡಿದ್ದಾರೆ.

ಮಿಚೆಲ್ ಲೋಬೊ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯನ್ನು ಸಹ ಬಿಡಲಿದ್ದು, ಮುಂದಿನ ರಾಜಕೀಯ ಹೆಜ್ಜೆ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕುತೂಹಲ ಮೂಡಿಸಿದೆ.

Michael Lobo

"ನಾನು ಎರಡೂ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಮುಂದಿನ ದಾರಿ ಏನು ಎಂದು ನಾನು ತೀರ್ಮಾನಿಸಬೇಕಿದೆ. ನಾನು ಬಿಜೆಪಿ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ" ಎಂದು ಮಿಚೆಲ್ ಲೋಬೊ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಮಿಚೆಲ್ ಲೋಬೊ ಬೇರೆ ರಾಜಕೀಯ ಪಕ್ಷಗಳ ಜೊತೆಗೂ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.

"ಗೋವಾ ರಾಜ್ಯದ ಜನರು ಬಿಜೆಪಿ ಆಡಳಿತದ ಬಗ್ಗೆ ಅತೃಪ್ತಿ ಹೊಂದಿದ್ದಾರೆ" ಎಂದು ಮಿಚೆಲ್ ಲೋಬೊ ಹೊಸ ಬಾಂಬ್ ಸಿಡಿಸಿದ್ದಾರೆ. ಸರ್ಕಾರದ ಸಚಿವರೇ ಈ ರೀತಿಯ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

"ಮತದಾರರು ನನಗೆ ಹೇಳಿದ್ದಾರೆ. ಬಿಜೆಪಿ ಸಾಮಾನ್ಯ ಜನರ ಪಕ್ಷವಾಗಿ ಉಳಿದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ" ಎಂದು ಮಿಚೆಲ್ ಲೋಬೊ ಹೇಳಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಗೋವಾ ವಿಧಾನಸಭೆ ಚುನಾವಣೆಗೆ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ. 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್, ಗೋವಾ ಫಾರ್ವರ್ಡ್ ಪಕ್ಷ, ಎನ್‌ಸಿಪಿ, ಎಂಜಿಪಿ, ಆಮ್‌ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+