ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಗೋವಾದಲ್ಲಿ ಎರಡು ದಿನ ಕೇಜ್ರಿವಾಲ್ ಮನೆ-ಮನೆ ಪ್ರಚಾರ

|
Google Oneindia Kannada News

ಪಣಜಿ, ಜನವರಿ 14; ಗೋವಾ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಬಾರಿಯ ಚುನಾವಣೆಗೆ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಮೊದಲ ಬಾರಿಗೆ ಅರವಿಂದ ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜನವರಿ 15 ಮತ್ತು 16ರಂದು ಗೋವಾ ಪ್ರವಾಸ ಕೈಗೊಂಡಿದ್ದಾರೆ. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ.

ಸಮೀಕ್ಷೆ; ಗೋವಾ ಚುನಾವಣೆಯಲ್ಲಿ ಎಎಪಿಗೆ ಪ್ರತಿಪಕ್ಷ ಸ್ಥಾನ!ಸಮೀಕ್ಷೆ; ಗೋವಾ ಚುನಾವಣೆಯಲ್ಲಿ ಎಎಪಿಗೆ ಪ್ರತಿಪಕ್ಷ ಸ್ಥಾನ!

ಎರಡು ದಿನಗಳ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಅರವಿಂದ ಕೇಜ್ರಿವಾಲ್ ಮನೆ-ಮನೆ ಪ್ರಚಾರ ಕೈಗೊಳ್ಳಲಿದ್ದಾರೆ ಮತ್ತು ಪಕ್ಷದ ನಾಯಕರ ಜೊತೆ ಸಭೆಗಳನ್ನು ನಡೆಸಲಿದ್ದಾರೆ. ಚುನಾವಣೆ ಘೋಷಣೆ ಬಳಿಕ ಅರವಿಂದ ಕೇಜ್ರಿವಾಲ್ ರಾಜ್ಯ ಭೇಟಿ ಪಕ್ಷದ ರಾಜ್ಯ ಘಟಕದಲ್ಲಿ ಸಂಚಲನ ಮೂಡಿಸಿದೆ.

ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು! ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು!

Arvind Kejriwal

ಅರವಿಂದ ಕೇಜ್ರಿವಾಲ್ ಎಲ್ಲಿ ಪ್ರಚಾರ ನಡೆಸಬೇಕು? ಎಂಬುದು ಸೇರಿದಂತೆ ಅವರ ಎರಡು ದಿನದ ಕಾರ್ಯಕ್ರಮಗಳ ಪಟ್ಟಿಯನ್ನು ರಾಜ್ಯ ಘಟಕ ಅಂತಿಮಗೊಳಿಸಿದೆ. ಅರವಿಂದ ಕೇಜ್ರಿವಾಲ್ ಗೋವಾಕ್ಕೆ ಭೇಟಿ ನೀಡುವ ಮೂಲಕ ಅಧಿಕೃತವಾಗಿ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಗೋವಾ; ಎಎಪಿ & ಟಿಎಂಸಿ ಸ್ಪರ್ಧೆ ಬಗ್ಗೆ ವಿಶ್ಲೇಷಿಸಿದ ಪಿ. ಚಿದಂಬರಂ ಗೋವಾ; ಎಎಪಿ & ಟಿಎಂಸಿ ಸ್ಪರ್ಧೆ ಬಗ್ಗೆ ವಿಶ್ಲೇಷಿಸಿದ ಪಿ. ಚಿದಂಬರಂ

ಗೋವಾ, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ಚುನಾವಣೆ ಘೋಷಣೆಯಾಗಿದೆ. ಪಂಜಾಬ್, ಗೋವಾ ಮತ್ತು ಉತ್ತರಾಖಂಡ ಚುನಾವಣೆಗಳನ್ನು ಎಎಪಿ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪಂಜಾಬ್‌ನಲ್ಲಿ ಎಎಪಿಯೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ.

ಇನ್ನು ಗೋವಾ ಚುನಾವಣೆ ಕುರಿತು Times Now Navbharat by VETO ಚುನಾವಣಾ ಪೂರ್ವ ಸಮೀಕ್ಷೆ ನಡೆಸಿತ್ತು. ಈ ಸಮೀಕ್ಷೆ ವರದಿ ಪ್ರಕಾರ ಗೋವಾ ಚುನಾವಣೆಯಲ್ಲಿ ಬಿಜೆಪಿ 18-22, ಎಎಪಿ 7-11, ಕಾಂಗ್ರೆಸ್ 4-6, ಇತರರು 3-5 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಹೇಳಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಎಎಪಿ 2ನೇ ಅತಿ ದೊಡ್ಡ ಪಕ್ಷವಾಗಿ ಪ್ರತಿಪಕ್ಷ ಸ್ಥಾನವನ್ನು ಅಲಂಕರಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಯ ವರದಿ ಹೇಳಿದೆ. ಈ ವರದಿ ಬಳಿಕ ಎಎಪಿ ಗೋವಾ ಘಟಕದಲ್ಲಿ ಉತ್ಸಾಹ ಇನ್ನೂ ಹೆಚ್ಚಾಗಿದೆ.

ಇದೇ ಮೊದಲ ಬಾರಿಗೆ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಎಎಪಿ ರಾಜ್ಯ ಘಟಕ ಸಹ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದು ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ.

ಗೋವಾ ಚುನಾವಣೆಗಾಗಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಎಎಪಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕ್ಷೇತ್ರಗಳಲ್ಲಿ ಎರಡು ದಿನಗಳ ಕಾಲ ಅರವಿಂದ ಕೇಜ್ರಿವಾಲ್‌ ಸಂಚಾರ ನಡೆಸಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಮಹಿಳೆಯರಿಗೆ ಆರ್ಥಿಕ ಶಕ್ತಿ; ಚುನಾವಣೆ ದಿನಾಂಕ ಘೋಷಣೆಗೂ ಮೊದಲು ಅರವಿಂದ ಕೇಜ್ರಿವಾಲ್ ಗೋವಾಕ್ಕೆ ಭೇಟಿ ನೀಡಿದ್ದರು. ನವೆಲಿಮ್ ಕ್ಷೇತ್ರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.

ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2500 ರೂ. ಮಾಸಾಶನ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದರು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮಹಿಳೆಗೂ 1000 ರೂ. ನೀಡಲಾಗುತ್ತದೆ ಎಂದು ಹೇಳಿದ್ದರು.

ಉತ್ತರಾಖಂಡ, ಪಂಜಾಬ್ ರಾಜ್ಯಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಕೊಂಡು ಎಎಪಿ ಚುನಾವಣೆ ಎದುರಿಸುತ್ತಿದೆ. ಆದರೆ ಗೋವಾದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಯಾವುದೇ ಪಕ್ಷಗಳ ಜೊತೆ ಎಎಪಿ ಮೈತ್ರಿ ಸಹ ಮಾಡಿಕೊಂಡಿಲ್ಲ.

Recommended Video

AB De Villiers ಭಾರತೀಯರನ್ನು ಖುಷಿ ಪಡಿಸಲು ಹೀಗೆ ಮಾಡಿದ್ರಾ | Oneindia Kannada

ರಾಜ್ಯದಲ್ಲಿ ಮೊದಲ ಬಾರಿ ಚುನಾವಣೆ ಎದುರಿಸುತ್ತಿರುವ ಎಎಪಿಗೆ ಜನರು ಹೇಗೆ ಬೆಂಬಲ ನೀಡಲಿದ್ದಾರೆ? ಎಂದು ಕಾದು ನೋಡಬೇಕಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

English summary
AAP national convenor and Delhi CM Arvind Kejriwal to visit Goa for a two-day-tour. On January 15 & 16 he will participate in the door-to-door campaign for Goa elections 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X