• search
 • Live TV
ಪಣಜಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು!

|
Google Oneindia Kannada News

ಪಣಜಿ, ಜನವರಿ 14; ಗೋವಾ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ರಾಜ್ಯದ ಆಡಳಿತ ಪಕ್ಷ ಬಿಜೆಪಿ 40 ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಹೇಳಿದೆ. ಆದರೆ 38 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಈ ಕುರಿತು ಹೇಳಿಕೆ ನೀಡಿದ್ದಾರೆ, "40 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರ ಸಂಸದೀಯ ಸಮಿತಿಗೆ ಕಳಿಸಲಾಗಿದೆ" ಎಂದು ಹೇಳಿದ್ದಾರೆ.

ಗೋವಾದ 40 ಸ್ಥಾನಗಳಲ್ಲೂ ಬಿಜೆಪಿ ಸ್ಪರ್ಧೆ; ಸಿ. ಟಿ. ರವಿ ಗೋವಾದ 40 ಸ್ಥಾನಗಳಲ್ಲೂ ಬಿಜೆಪಿ ಸ್ಪರ್ಧೆ; ಸಿ. ಟಿ. ರವಿ

"ಕೆಲವು ಕ್ಷೇತ್ರಗಳಿಗೆ ಇನ್ನೂ ಒಂದು ಸುತ್ತಿನ ಚರ್ಚೆಯ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ದೆಹಲಿಯಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ" ಎಂದು ತಿಳಿಸಿದ್ದಾರೆ.

ಗೋವಾ; ಎಎಪಿ & ಟಿಎಂಸಿ ಸ್ಪರ್ಧೆ ಬಗ್ಗೆ ವಿಶ್ಲೇಷಿಸಿದ ಪಿ. ಚಿದಂಬರಂ ಗೋವಾ; ಎಎಪಿ & ಟಿಎಂಸಿ ಸ್ಪರ್ಧೆ ಬಗ್ಗೆ ವಿಶ್ಲೇಷಿಸಿದ ಪಿ. ಚಿದಂಬರಂ

ಯಾವುವು ಎರಡು ಕ್ಷೇತ್ರಗಳು?; ಬಿಜೆಪಿ ಕ್ರಿಶ್ಚಿಯನ್ ಪ್ರಾಬಲ್ಯ ಹೊಂದಿರುವ ಬೆನೌಲಿಮ್ ಮತ್ತು ನುವೆಮ್‌ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧವೇ ಮತ ಚಲಾವಣೆ ಆಗುವುದರಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಇದೆ ಎಂಬ ಸುದ್ದಿಯೂ ಇದೆ.

ಗೋವಾ; ಬಿಜೆಪಿಗೆ ತಲೆನೋವಾದ ಕ್ರಿಶ್ಚಿಯನ್ ಶಾಸಕರ ರಾಜೀನಾಮೆ!ಗೋವಾ; ಬಿಜೆಪಿಗೆ ತಲೆನೋವಾದ ಕ್ರಿಶ್ಚಿಯನ್ ಶಾಸಕರ ರಾಜೀನಾಮೆ!

ಬೆನೌಲಿಮ್ ಕ್ಷೇತ್ರದ ಪ್ರಸ್ತುತ ಶಾಸಕರು ಚರ್ಚಿಲ್ ಅಲೆಮಾವೊ. 2017ರ ಚುನಾವಣೆಯಲ್ಲಿ ಎನ್‌ಸಿಪಿಯಿಂದ ಗೆದ್ದು ವಿಧಾಸಸಭೆ ಪ್ರವೇಶಿಸಿದ್ದರು. ಆದರೆ ಕಳೆದ ತಿಂಗಳು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೇರಿದ್ದಾರೆ.

ಇನ್ನೂ ನುವೆಮ್ ಕ್ಷೇತ್ರದ ಶಾಸಕರು ವಿಲ್ಟ್ರೆಡ್‌ ಡಿಸಾ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಅವರು ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಗುರುವಾರ ಗೋವಾ ಬಿಜೆಪಿ ಕೋರ್ ಕಮಟಿ ಸಭೆ ನಡೆಯಿತು. ರಾಜ್ಯ ಚುನಾವಣೆ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್ ತನವಡೆ ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಪಸ್ಥಿತಿಯಲ್ಲಿ 38 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಗೊಳಿಸಿ ದೆಹಲಿಗೆ ಕಳಿಸಲಾಗಿದೆ.

ಜನವರಿ 15ರಂದು ಕೋರ್ ಕಮಿಟಿ ಸದಸ್ಯರು ದೆಹಲಿಗೆ ಭೇಟಿ ನೀಡಲಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಅಭ್ಯರ್ಥಿಗಳ ಪಟ್ಟಿಗೆ ಸಂಸದೀಯ ಮಂಡಳಿ ಒಪ್ಪಿಗೆ ಸಿಕ್ಕ ಬಳಿಕ ಬಿಡುಗಡೆ ಮಾಡಲಾಗುತ್ತದೆ.

ಶಾಸಕರ ರಾಜೀನಾಮೆ; ಗೋವಾ ವಿಧಾನಸಭೆಯಲ್ಲಿದ್ದ ನಾಲ್ವರು ಕ್ರಿಶ್ಚಿಯನ್ ಸಮುದಾಯದ ಶಾಸಕರ ಪೈಕಿ ಮೂವರು ಪಕ್ಷ ಬಿಟ್ಟಿದ್ದಾರೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಸಚಿವರಾಗಿದ್ದ ಮೈಕಲ್ ಲೋಬೋ ಸೋಮವಾರ ಬಿಜೆಪಿ ತೊರೆದಿದ್ದಾರೆ ಬಳಿಕ ಕಾಂಗ್ರೆಸ್ ಸೇರಿದ್ದಾರೆ.

ಬಿಜೆಪಿ ಶಾಸಕರಾಗಿದ್ದ ಅಲಿನಾ ಸಾಲ್ದಾನಾ, ಕಾರ್ಲೊಸ್ ಅಲ್ಮೇಡಾ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಬಿಟ್ಟಿದ್ದಾರೆ. ಬಿಜೆಪಿ ಕ್ರಿಶ್ಚಿಯನ್ ಸಮುದಾಯವನ್ನು ಕಡೆಗಣಿಸಿದೆ ಎಂಬ ಆರೋಪವಿದೆ.

ಬಿಜೆಪಿ ತೊರೆದಿದ್ದ ಅಲಿನಾ ಸಾಲ್ದಾನಾ ಎಎಪಿ ಸೇರಿದ್ದಾರೆ. ವಾಸ್ಕೋ ಕ್ಷೇತ್ರದ ಶಾಸಕರಾಗಿದ್ದ ಕಾರ್ಲೊಸ್ ಅಲ್ಮೇಡಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಮೈಕಲ್ ಲೋಬೊ ಕಾಂಗ್ರೆಸ್ ಸೇರಿದ್ದಾರೆ, ಸುಮಾರು ಆರು ಕ್ಷೇತ್ರಗಳಲ್ಲಿ ಮೈಕಲ್ ಲೋಬೊ ತಮ್ಮ ಪ್ರಭಾವವನ್ನು ಹೊಂದಿದ್ದಾರೆ.

ಕೇವಲ 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯ ಗೋವಾ. ರಾಜ್ಯದಲ್ಲಿನ ಮತದಾರರ ಪೈಕಿ ಶೇ 27ರಷ್ಟು ಕ್ರಿಶ್ಚಿಯನ್ ಸಮುದಾಯದವರಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಉಳಿದಂತೆ ಶೇ 8ರಷ್ಟು ಮುಸ್ಲಿಂ, ಶೇ 20ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳು ರಾಜ್ಯದಲ್ಲಿವೆ.

   Virat Kohli ಹೀಗೆ ಮೈಕ್ ನಲ್ಲಿ ಹೇಳಿದ ಮೇಲೆ ಮೊದಲ ಬಾರಿಗೆ ಪ್ರತಿಕ್ರಿಯೆ | Oneindia Kannada

   ಗೋವಾದ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಮುಸ್ಲಿಂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳನ್ನು ಅವಲಂಬಿಸಿದೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

   ಚಿಕ್ಕಮಾಗರವಲ್ಲಿ ತಿಮ್ಮೇಗೌಡ ರವಿ
   Know all about
   ಚಿಕ್ಕಮಾಗರವಲ್ಲಿ ತಿಮ್ಮೇಗೌಡ ರವಿ
   English summary
   Goa BJP not finalized candidates for Benaulim and Nuvem constituencies. These are the Christian dominated seats and people vote for non-BJP candidates.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X