ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆ; ದೆಹಲಿಗೆ ಹೊರಟ ಪ್ರಮೋದ್ ಸಾವಂತ್

|
Google Oneindia Kannada News

ಪಣಜಿ, ಜನವರಿ 16; ಗೋವಾ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಜನವರಿ 21ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

ಗೋವಾ ಬಿಜೆಪಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 38 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಪಟ್ಟಿಯನ್ನು ಸಂಸದೀಯ ಮಂಡಳಿ ಒಪ್ಪಿಗೆಗಾಗಿ ಕಳುಹಿಸಿಕೊಡಲಾಗಿದೆ.

ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು! ಗೋವಾ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿದ ಎರಡು ಕ್ಷೇತ್ರಗಳು!

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. ಸಂಸದೀಯ ಮಂಡಳಿ ಸಭೆಗೂ ಮೊದಲು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.

ಗೋವಾ; ಎಎಪಿ & ಟಿಎಂಸಿ ಸ್ಪರ್ಧೆ ಬಗ್ಗೆ ವಿಶ್ಲೇಷಿಸಿದ ಪಿ. ಚಿದಂಬರಂ ಗೋವಾ; ಎಎಪಿ & ಟಿಎಂಸಿ ಸ್ಪರ್ಧೆ ಬಗ್ಗೆ ವಿಶ್ಲೇಷಿಸಿದ ಪಿ. ಚಿದಂಬರಂ

Goa Elections Pramod Sawant In Delhi Candidates List May Final Today

ಗೋವಾ ವಿಧಾನಸಭೆಗೆ ನಾಮಪತ್ರ ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿದೆ. ಆದ್ದರಿಂದ ಭಾನುವಾರ ಸಂಜೆ ಅಥವ ಸೋಮವಾರ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಂತಿಮಗೊಳಿಸಲಿದೆ.

ಗೋವಾ; ಬಿಜೆಪಿ ಹಸಿರು ನಿಶಾನೆಗಾಗಿ ಕಾದು ಕೂತ ಉತ್ಪಲ್ ಪರಿಕ್ಕರ್! ಗೋವಾ; ಬಿಜೆಪಿ ಹಸಿರು ನಿಶಾನೆಗಾಗಿ ಕಾದು ಕೂತ ಉತ್ಪಲ್ ಪರಿಕ್ಕರ್!

ರಾಜ್ಯದ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕ್ರಿಶ್ಚಿಯನ್ ಸಮುದಾಯ ಪ್ರಾಬಲ್ಯ ಹೊಂದಿರುವ ಬೆನೌಲಿಮ್ ಮತ್ತು ನುವೆಮ್‌ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧವೇ ಮತ ಚಲಾವಣೆ ಆಗಲಿದೆ.

ಆದ್ದರಿಂದ ಬಿಜೆಪಿ 38 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ಜನವರಿ 16ರಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ" ಎಂದು ಹೇಳಿದ್ದರು.

ಗೋವಾ ಬಿಜೆಪಿ ಚುನಾವಣೆ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಗೋವಾಕ್ಕೆ ಭೇಟಿ ನೀಡಿದ್ದರು. ಸರಣಿ ಸಭೆಗಳನ್ನು ನಡೆಸಿದ್ದರು. ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿತ್ತು.

ಬಿಜೆಪಿ ಶಾಸಕರಾದ ಪ್ರವೀಣ್ ಜಾಂತ್ಯೆ, ಮೈಕಲ್ ಲೋಬೊ, ಅಲಿನಾ ಸಾಲ್ದಾನಾ, ಕಾರ್ಲೊಸ್ ಅಲ್ಮೇಡಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಬಲ 23 ಆಗಿದೆ.

ಬಿಜೆಪಿ, ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳ ಜೊತೆಗೆ ಎಎಪಿ, ಟಿಎಂಸಿ ಪಕ್ಷಗಳು ಸಹ ಈ ಬಾರಿಯ ಗೋವಾ ವಿಧಾನಸಭೆ ಚುನಾವಣಾ ಕಣಕ್ಕಿಳಿದಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ, ಭಾನುವಾರ ರಾಜ್ಯ ಪ್ರವಾದಲ್ಲಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ. 2017ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗಳಿಸಿದ್ದು ಕೇವಲ 13 ಸ್ಥಾನಗಳು.

17 ಸ್ಥಾನಗಳಲ್ಲಿ ಜಯಗಳಿಸಿದರೂ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು. 13 ಸ್ಥಾನಗಳಿಸಿದ್ದ ಬಿಜೆಪಿ ಗೋವಾ ಫಾರ್ವರ್ಡ್ ಪಾರ್ಟಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು.

ಈ ಬಾರಿ ಸಂಪೂರ್ಣ ಬಹುಮತದ ಮೂಲಕ ಸರ್ಕಾರ ರಚನೆ ಮಾಡಬೇಕು ಎಂಬುದು ಪಕ್ಷದ ಗುರಿ. ಆದರೆ ಎಎಪಿ, ಟಿಎಂಸಿ ಯಾರ ಮತಗಳನ್ನು ಕಸಿಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಎಎಪಿ ರಾಜ್ಯದ ಪ್ರತಿಪಕ್ಷವಾಗಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಕುತೂಹಲ ಮೂಡಿಸಿದ ಪಣಜಿ; ಗೋವಾ ಪಣಜಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಸದಸ್ಯ ಕಾಂಗ್ರೆಸ್ ವಶದಲ್ಲಿದೆ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ.

ಆದರೆ ಬಾಬುಶ್ ಮೊನ್ಸೆರಾತ್ ಸಹ ಕ್ಷೇತ್ರದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ಸಿಗದಿದ್ದರೆ ಉತ್ಪಲ್ ಪರಿಕ್ಕರ್ ಮುಂದಿನ ನಡೆ ಏನು? ಎಂಬುದು ಕುತೂಹಲ ಮೂಡಿಸಿದೆ. ಉತ್ಪಲ್ ಚುನಾವಣೆಗೆ ಸ್ಪರ್ಧೆ ಮಾಡುವುದಾದರೆ ಬೆಂಬಲ ನೀಡುವುದಾಗಿ ಶಿವಸೇನೆ ಹೇಳಿಕೆ ನೀಡಿದೆ.

English summary
Goa chief minister Pramod Sawant in New Delhi. BJP may finalise the list of candidates for the February 14 assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X