ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸೋಂಕು ಹೆಚ್ಚಳ: ಗೋವಾದಲ್ಲಿ ಮೇ 31ರವರೆಗೆ ಲಾಕ್‌ಡೌನ್ ವಿಸ್ತರಣೆ

|
Google Oneindia Kannada News

ಪಣಜಿ, ಮೇ 21: ಗೋವಾದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಮೇ 31ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶುಕ್ರವಾರ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮೇ 31ರವರೆಗೆ ಲಾಕ್‌ಡೌನ್ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ, ಕಠಿಣ ನಿಯಮಗಳು ಮೊದಲಿನಂತೆಯೇ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಚಿಂತೆ ಬಿಡಿ: ಭಾರತದಲ್ಲಿ ಕ್ರಮೇಣ ಕೊರೊನಾವೈರಸ್ ಇಳಿಮುಖ ಚಿಂತೆ ಬಿಡಿ: ಭಾರತದಲ್ಲಿ ಕ್ರಮೇಣ ಕೊರೊನಾವೈರಸ್ ಇಳಿಮುಖ

ಗೋವಾದಲ್ಲಿ ಗುರುವಾರ 1582 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಸೋಂಕಿತರ ಸಂಖ್ಯೆ 1,47,567ಕ್ಕೆ ಏರಿಕೆಯಾಗಿದೆ. ಈವರೆಗೆ 2272 ಮಂದಿ ಮೃತಪಟ್ಟಿದ್ದಾರೆ.

Goa Extends Covid 19 Lockdown Till May 31

ಗೋವಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 3 ರಿಂದ ಮೇ 23ರವರೆಗೆ ಲಾಕ್‌ಡೌನ್ ಘೋಷಣೆ ಮಾಡಲಾಗಿತ್ತು. ಅಗತ್ಯ ವಸ್ತುಗಳ ಖರೀದಿ, ಮದ್ಯ ಮಾರಾಟಕ್ಕೆ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಡಲು ಅನುಮತಿ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 2,59,591 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4,209 ಮಂದಿ ಪ್ರಾಣ ಬಿಟ್ಟಿದ್ದಾರೆ.

ತಮಿಳುನಾಡಿನಲ್ಲಿ ಒಂದು ವಾರ ಲಾಕ್‌ಡೌನ್‌ ವಿಸ್ತರಣೆ ಹಿಂದಿನ ಕಾರಣ!? ತಮಿಳುನಾಡಿನಲ್ಲಿ ಒಂದು ವಾರ ಲಾಕ್‌ಡೌನ್‌ ವಿಸ್ತರಣೆ ಹಿಂದಿನ ಕಾರಣ!?

ಭಾರತದಲ್ಲಿ ಒಟ್ಟು 2,60,31,991 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,27,12,735 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,91,331 ಜನರು ಪ್ರಾಣ ಬಿಟ್ಟಿದ್ದಾರೆ.

ಇದರ ಹೊರತಾಗಿ 30,27,925 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
The Goa government on Friday extended its ongoing COVID-19 restrictions till May 31. After a meeting of the state cabinet, Goa Chief Minister Pramod Sawant announced: "We are extending state curfew to May 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X