ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರೆಸಿ ಎಂದ ಗೋವಾ ಸರ್ಕಾರ
ಪಣಜಿ, ಏಪ್ರಿಲ್ 08: ಭಾರತದಲ್ಲಿ ಲಾಕ್ ಡೌನ್ ಮುಂದುವರೆಸುವಂತೆ ಅನೇಕ ರಾಜ್ಯಗಳು ಕೇಂದ್ರಕ್ಕೆ ಮನವಿ ಮಾಡಿವೆ. ಗೋವಾ ಸರ್ಕಾರ ಕೂಡ ಈ ತಿಂಗಳ ಕೊನೆಯವರೆಗೆ ಲಾಕ್‌ಡೌನ್ ಮಾಡಿ ಎಂದು ತಿಳಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ವಾರಗಳ ಕಾಲ ಅಂದರೆ ಏಪ್ರಿಲ್ 14ರ ವರೆಗೆ ಲಾಕ್‌ಡೌನ್ ಘೋಷಣೆ ಮಾಡಿದ್ದರು. ಆದರೆ, ಭಾರತದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಲಾಕ್ ಡೌನ್ ಮುಂದುವರೆಕ್ಕೆ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಹಲವು ರಾಜ್ಯಗಳು ಲಾಕ್‌ಡೌನ್ ಮುಂದುವರೆಸುವಂತೆ ಕೇಳಿಕೊಂಡಿವೆ'.
ಗೋವಾದಲ್ಲಿಯೂ ಪಾಸಿಟಿವ್ ಕೇಸ್‌ಗಳು ಹೆಚ್ಚಾಗದ ಹಾಗೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್‌ಡೌನ್ ಮಾಡಲು ಗೋವಾ ಸರ್ಕಾರ ಮುಂದಾಗಿದೆ. ಈ ಕುರಿತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಭೆ ನಡೆಸಿದ್ದಾರೆ. ಪರಿಸ್ಥಿತಿ ಕಡಿಮೆ ಆಗುವವರೆಗೆ ಸೆಕ್ಷನ್ 144 ಜಾರಿ ಮಾಡಲು ನಿರ್ಧರಿಸಿದ್ದಾರೆ.

ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಗೋವಾದಲ್ಲಿ ಪಾಸಿಟಿವ್ ಕೇಸ್‌ಗಳು ಕಡಿಮೆ ಇದೆ. 7 ಜನರಿಗೆ ಸೋಂಕು ಇರುವುದು ದೃಢವಾಗಿದೆ. ಏಳು ಕೇಸ್‌ಗಳು ಇದ್ದರೂ, ಅದು ಹೆಚ್ಚಾಗಬಾರದು ಎಂದು ಗೋವಾ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ.












Click it and Unblock the Notifications