• search
  • Live TV
ಪಣಜಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗೋವಾದಲ್ಲಿ ರೇವ್‌ಪಾರ್ಟಿ, 9 ಲಕ್ಷದ ಮಾದಕ ವಸ್ತು ವಶ

|

ಪಣಜಿ, ಆಗಸ್ಟ್ 16 : ಗೋವಾದಲ್ಲಿ ರೇವ್‌ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 20 ಜನರನ್ನು ಬಂಧಿಸಲಾಗಿದ್ದು, 9 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ವಾಗೇಟರ್ ಬೀಚ್‌ನಲ್ಲಿ ನಡೆಯುತ್ತಿದ್ದ ರೇವ್‌ಪಾರ್ಟಿ ಮೇಲೆ ಶನಿವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 20 ಜನರನ್ನು ಈ ಸಂದರ್ಭದಲ್ಲಿ ಬಂಧಿಸಲಾಗಿದೆ.

ಗೋವಾ; ಪ್ರಯಾಣಿಕರಿಗೆ ಕ್ವಾರಂಟೈನ್ ಕುರಿತ ಮಾಹಿತಿ

"ಕೊಕೈನ್, ಚರಸ್ ಸೇರಿದಂತೆ ವಿವಿಧ ಮಾದಕ ವಸ್ತುಗಳು, ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ ಸುಮಾರು 9 ಲಕ್ಷ ರೂ." ಎಂದು ಪೊಲೀಸರು ಹೇಳಿದ್ದಾರೆ.

ಕೊರೊನಾ ಭೀತಿಯಲ್ಲೂ ಪ್ರವಾಸೋದ್ಯಮ ಪುನರಾರಂಭಿಸಿದ ಗೋವಾ

ರೇವ್ ಪಾರ್ಟಿ ಆಯೋಜಕರ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೋವಿಡ್ 19 ಮಾರ್ಗಸೂಚಿ ಉಲ್ಲಂಘನೆ ಮಾಡಿ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಅಂತರರಾಜ್ಯ ಸಂಚಾರಕ್ಕೆ ಅನುಮತಿ ಕೊಡಲ್ಲ: ಗೋವಾ ಗಟ್ಟಿ ನಿರ್ಧಾರ

ಪೊಲೀಸರು ದಾಳಿ ನಡೆಸಿದ ಸಮಯದಲ್ಲಿ ರೇವ್ ಪಾರ್ಟಿ ಸ್ಥಳದಲ್ಲಿ ಮಾದಕ ವಸ್ತುಗಳು ಸಿಕ್ಕ ಕಾರಣ ಎನ್‌ಡಿಪಿಎಸ್ ಕಾಯ್ದೆ 1985ರ ಅನ್ವಯ ಆಯೋಜಕರು, ವಿದೇಶಿಯರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ. ಆನ್‌ಲೈನ್ ಮೂಲಕ ರೇವ್ ಪಾರ್ಟಿಗೆ ನೋಂದಣಿ ಮಾಡಿಸಲಾಗಿತ್ತು ಎಂಬುದು ತಿಳಿದುಬಂದಿದೆ.

ಗೋವಾದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 11,339. ಸಕ್ರಿಯ ಪ್ರಕರಣಗಳ ಸಂಖ್ಯೆ 3753, 98 ಜನರು ರಾಜ್ಯದಲ್ಲಿ ಇದುವರೆಗೂ ಮೃತಪಟ್ಟಿದ್ದಾರೆ.

English summary
Goa police crime branch conducted the raid at Frangipanni Villas in Vagator. Over 20 people including foreigners were detained who involved in Rave party and sized the drugs worth Rs 9 lakhs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X