ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ; 36 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

|
Google Oneindia Kannada News

ಪಣಜಿ, ಜನವರಿ 23; " ಗೋವಾ ವಿಧಾನಸಭೆ ಚುನಾವಣೆಗೆ 37 ಕ್ಷೇತ್ರಗಳ ಪೈಕಿ 36 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಇನ್ನೊಂದು ಕ್ಷೇತ್ರಕ್ಕೆ ಶೀಘ್ರವೇ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ" ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಹೇಳಿದರು.

ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "36 ಅಭ್ಯರ್ಥಿಗಳ ಜೊತೆ ಶನಿವಾರ ಸಭೆ ನಡೆಸಲಾಗಿದೆ. ಎಲ್ಲಾ ಅಭ್ಯರ್ಥಿಗಳಿ ಒಗ್ಗಟ್ಟಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದರೆ 5 ವರ್ಷಗಳ ಕಾಲ ಪಕ್ಷದಲ್ಲಿಯೇ ಇರುವುದಾಗಿ ಭರವಸೆ ನೀಡಿದ್ದಾರೆ" ಎಂದರು.

ಗೋವಾ; ಬಿಜೆಪಿ ಮುಂದೆ ಒಂದು ಆಯ್ಕೆ ಇಟ್ಟ ಉತ್ಪಲ್ ಪರಿಕ್ಕರ್! ಗೋವಾ; ಬಿಜೆಪಿ ಮುಂದೆ ಒಂದು ಆಯ್ಕೆ ಇಟ್ಟ ಉತ್ಪಲ್ ಪರಿಕ್ಕರ್!

"ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ನಂಬಿಕೆ ಇದೆ. ಗೋವಾದ ಜನರು ರಾಜ್ಯದ ಹಿತಕ್ಕಾಗಿ ಪಕ್ಷವನ್ನು ಚುನಾವಣೆಯಲ್ಲಿ ಬೆಂಬಲಿಸಲಿದ್ದಾರೆ. ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲಿದೆ" ಎಂದು ಪಿ. ಚಿದಂಬರಂ ವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ ಪಕ್ಷಾಂತರದಲ್ಲಿ ದಾಖಲೆ ಬರೆದ ಗೋವಾರಾಜಕೀಯ ಪಕ್ಷಾಂತರದಲ್ಲಿ ದಾಖಲೆ ಬರೆದ ಗೋವಾ

Goa Polls Congress Announced 36 Candidates Says P Chidambaram

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, "ಕಾಂಗ್ರೆಸ್‌ನ ಪ್ರತಿ ವೋಟು ಬಿಜೆಪಿಗೆ ಮತ ಹಾಕಿದಂತೆ" ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪಿ. ಚಿದಂಬರಂ, "ನಾನು ಕಾಂಗ್ರೆಸ್ ಪಕ್ಷದಲ್ಲಿ ಒಂದು ಉನ್ನತ ಸ್ಥಾನದಲ್ಲಿದ್ದೇನೆ. ಟಿಎಂಸಿಯ ಒಬ್ಬ ಸಂಸದನ ಹಂತಕ್ಕೆ ಇಳಿದು ಪ್ರತಿಕ್ರಿಯೆ ನೀಡಲಾರೆ" ಎಂದರು.

ಗೋವಾ; ಮೂವರು ಬಿಜೆಪಿ ನಾಯಕರು ಪಕ್ಷೇತರರಾಗಿ ಕಣಕ್ಕೆ! ಗೋವಾ; ಮೂವರು ಬಿಜೆಪಿ ನಾಯಕರು ಪಕ್ಷೇತರರಾಗಿ ಕಣಕ್ಕೆ!

"ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಸಾಮರ್ಥ್ಯ, ಸದಸ್ಯರ ಬಲ, ತಳ ಮಟ್ಟದ ಕಾರ್ಯಕರ್ತರನ್ನು ಹೊಂದಿದೆ. ಈ ಹಿಂದೆ ಗೋವಾ ಜನರ ಸೇವೆಯನ್ನು ಮಾಡಿದೆ. ಗೋವಾದ ಜನರು ಕಾಂಗ್ರೆಸ್‌ಗೆ ಮತ ನೀಡಿದರೆ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಸಂಕಲ್ಪದೊಂದಿಗೆ ಮತದಾನ ಮಾಡಲಿದ್ದಾರೆ" ಎಂದು ಪಿ. ಚಿದಂಬರಂ ಹೇಳಿದರು.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ; ಗೋವಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ಕುರಿತು ಮಾತನಾಡಿದ ಪಿ. ಚಿದಂಬರಂ, "ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಎಲ್ಲಾ ಅಭ್ಯರ್ಥಿಗಳ ಸಭೆ ಕರೆಯುತ್ತೇವೆ" ಎಂದರು.

"ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಚಾರದಲ್ಲಿ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಚುನಾವಣೆಗೂ ಮೊದಲು ಘೋಷಣೆ ಮಾಡಬೇಕೋ?, ಬಳಿಕವೋ ಎಂದು ಅಭಿಪ್ರಾಯ ಸಂಗ್ರಹಿಸಿ ಎಐಸಿಸಿಗೆ ಸಲ್ಲಿಕೆ ಮಾಡಲಾಗುತ್ತದೆ. ಈ ಕುರಿತು ಎಐಸಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ 37ರಲ್ಲಿ ಅಭ್ಯರ್ಥಿ ಕಣಕ್ಕಿಳಿಸುತ್ತಿದೆ. ಟಿಎಂಸಿ, ಶಿವಸೇನೆ & ಎನ್‌ಸಿಪಿ ನೀಡಿದ್ದ ಮೈತ್ರಿಯ ಆಹ್ವಾನ ತಳ್ಳಿ ಹಾಕಿದೆ. ಏಕಾಂಗಿಯಾಗಿ ಚುನಾವಣಾ ಕಣಕ್ಕಿಳಿಯುತ್ತಿದೆ.

ಮೊದಲ ಬಾರಿಗೆ ಗೋವಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಆಮ್ ಆದ್ಮಿ ಪಕ್ಷ ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಳೆದ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ ಎಂದು ಘೋಷಣೆ ಮಾಡಿದ್ದಾರೆ.

ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಶಿವಸೇನೆ & ಎನ್‌ಸಿಪಿ ಮೈತ್ರಿಕೂಟ ಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಗೋವಾ ಚುನಾವಣೆಗೆ ಫೆಬ್ರವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಟಿಎಂಸಿ, ಕಾಂಗ್ರೆಸ್ ಕಾರಣ; "ಒಂದು ವೇಳೆ ಗೋವಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕಾಂಗ್ರೆಸ್ ಮತ್ತು ಟಿಎಂಸಿ ನೇರ ಹೊಣೆ" ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

Recommended Video

Anushka ಜೊತೆ ಮದುವೆಯಾಗಿ ಕ್ರಿಕೆಟ್ ಬದುಕು ಹಾಳುಮಾಡಿಕೊಂಡ Virat Kohli | Oneindia Kannada

"ಗೋವಾದಲ್ಲಿ ಎನ್‌ಸಿಪಿ, ಗೋವಾ ಫಾರ್ವರ್ಡ್ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವಪನ್ನು ಶಿವಸೇನೆ ಕಾಂಗ್ರೆಸ್ ಮುಂದಿಟ್ಟಿತ್ತು. ಆದರೆ ಪಕ್ಷ ಪ್ರತಿಕ್ರಿಯೆ ನೀಡಲಿಲ್ಲ" ಎಂದು ಆರೋಪಿಸಿದರು.

English summary
Senior Congress leader P. Chidambaram said that party has announced 36 candidates of 37 for the Goa assembly elections. One candidate will be announced soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X