ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆ; ಬಿಜೆಪಿ ತೊರೆದ ಮತ್ತೊಬ್ಬ ಶಾಸಕ

|
Google Oneindia Kannada News

ಪಣಜಿ, ಜನವರಿ 20; ಗೋವಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಪಕ್ಷದ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ.

ನುವೇಂ ಕ್ಷೇತ್ರದ ಬಿಜೆಪಿ ಶಾಸಕ ವಿಲ್ಫರ್ಡ್ ಡಿಸೋಜಾ ಬುಧವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಅತ್ತ ನವದೆಹಲಿಯಲ್ಲಿ ಗೋವಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಂಸದೀಯ ಮಂಡಳಿ ಸಭೆ ನಡೆಯಿತು.

ಗೋವಾ; ಟಿಕೆಟ್ ಬೇಡ ಎಂದ ಹಾಲಿ ಶಾಸಕ, ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ! ಗೋವಾ; ಟಿಕೆಟ್ ಬೇಡ ಎಂದ ಹಾಲಿ ಶಾಸಕ, ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ!

ವಿಲ್ಫರ್ಡ್ ಡಿಸೋಜಾ ರಾಜೀನಾಮೆ ಕುರಿತು ಫೇಸ್ ಬುಕ್‌ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. "ಇಂದು ನಾನು ನುವೇಂ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ" ಎಂದು ಘೋಷಣೆ ಮಾಡಿದ್ದಾರೆ.

ಗೋವಾ ಚುನಾವಣೆ; ಸಿಎಂ ಅಭ್ಯರ್ಥಿ ಘೋಷಿಸಿದ ಎಎಪಿ ಗೋವಾ ಚುನಾವಣೆ; ಸಿಎಂ ಅಭ್ಯರ್ಥಿ ಘೋಷಿಸಿದ ಎಎಪಿ

Goa Polls Nuvem BJP MLA Wilfred DSa Resigns

"ನನಗೆ ನುವೇಂ ಬೆಂಬಲ ನೀಡಲಿದೆ ಎಂಬ ವಿಶ್ವಾಸವಿದೆ. ನನ್ನ ಬೆಂಬಲಿಗರು ನನ್ನ ಜೊತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ನನ್ನ ಕ್ಷೇತ್ರ, ರಾಜ್ಯ ಮತ್ತು ದೇಶದ ಅಭಿವೃದ್ಧಿಗಾಗಿ ಸದಾ ಕೆಲಸ ಮಾಡುತ್ತೇನೆ" ಎಂದು ವಿಲ್ಫರ್ಡ್ ಡಿಸೋಜಾ ಹೇಳಿದ್ದಾರೆ.

ಚುನಾವಣಾ ಸಮೀಕ್ಷೆ; ಗೋವಾದಲ್ಲಿ ಅತಂತ್ರ ಫಲಿತಾಂಶ! ಚುನಾವಣಾ ಸಮೀಕ್ಷೆ; ಗೋವಾದಲ್ಲಿ ಅತಂತ್ರ ಫಲಿತಾಂಶ!

2019ರ ಜುಲೈನಲ್ಲಿ ವಿಲ್ಫರ್ಡ್ ಡಿಸೋಜಾ 9 ಕಾಂಗ್ರೆಸ್ ಶಾಸಕರ ಜೊತೆ ಬಿಜೆಪಿ ಸೇರಿದ್ದರು. "ಬಿಜೆಪಿ ನನಗೆ ನೀಡಿದ್ದ ಭರವಸೆ ಈಡೇರಿಸಿದೆ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಕಳೆದ 25 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಆಗಿರಲಿಲ್ಲ. ಈಗ 130 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳು ಆಗಿವೆ" ಎಂದು ವಿಲ್ಫರ್ಡ್ ಡಿಸೋಜಾ ತಿಳಿಸಿದ್ದಾರೆ.

"ನಾನು ಬಿಜೆಪಿ ಸೇರಿದಾಗ ಕೆಲವು ಕ್ಯಾಥೋಲಿಕ್ ಸಮುದಾಯದವರು ನನ್ನ ವಿರುದ್ಧ ಅಸಮಾಧಾನಗೊಂಡಿದ್ದರು. ಕಳೆದ ಎರಡೂವರೆ ವರ್ಷದಲ್ಲಿನ ಅಭಿವೃದ್ಧಿ ಕೆಲಸಗಳನ್ನು ನೋಡಿ ಅವರು ನನ್ನ ಜೊತೆಯೇ ಉಳಿದಿದ್ದಾರೆ" ಎಂದರು.

ಶಾಸಕರ ರಾಜೀನಾಮೆ; ಜನವರಿ 10ರಂದು ಬಿಜೆಪಿ ಶಾಸಕ, ಸಚಿವರಾಗಿದ್ದ ಮಿಚೆಲ್ ಲೋಬೊ ಮತ್ತು ಶಾಸಕ ಪ್ರವೀಣ್ ಜಾಂತ್ಯೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದಿದ್ದರು. ಮಿಚೆಲ್ ಲೋಬೊ ಕಾಂಗ್ರೆಸ್ ಸೇರಿದರೆ, ಪ್ರವೀಣ್ ಜಾಂತ್ಯೆ ಎಂಜಿಪಿ ಪಕ್ಷ ಸೇರಿದ್ದಾರೆ.

ಗೋವಾ ವಿಧಾನಸಭೆ ಸ್ಪೀಕರ್ ಮತ್ತು ಬಿಚ್ಚೋಲಿಯಂ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ರಾಜೇಶ್ ಪಟೇನ್ನಕರ್ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋ‍ಷಣೆ ಮಾಡಿದ್ದಾರೆ.

ಸಂಸದೀಯ ಮಂಡಳಿ ಸಭೆ; ಗೋವಾದ 40 ವಿಧಾನಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನವದೆಹಲಿಯಲ್ಲಿ ಗುರುವಾರ ರಾತ್ರಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಿತು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆ ಸಭೆಯಲ್ಲಿ ಅಮಿತ್ ಶಾ, ಸಿ. ಟಿ. ರವಿ, ಬಿ. ಎಲ್. ಸಂತೋಷ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಶುಕ್ರವಾರ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. "ಚುನಾವಣೆಯಲ್ಲಿ 22+ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪಕ್ಷ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ" ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

congress list

Recommended Video

India vs South Africa : KL Rahul ಪ್ರಕಾರ ಪಂದ್ಯ ಸೋಲಲು ಇದೇ ಮುಖ್ಯ ಕಾರಣ | Oneindia Kannada

ಕಾಂಗ್ರೆಸ್ ಪಟ್ಟಿ ಬಿಡುಗಡೆ; ಗೋವಾ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ 5 ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಗೋವಾ ಫಾರ್ವರ್ಡ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಪಕ್ಷ ಚುನಾವಣೆ ಎದುರಿಸುತ್ತಿದೆ.

English summary
Ahead of the Goa assembly elections Nuvem seat BJP MLA Wilfred D’Sa resigned. He decided to contest as an independent candidate in February 14 elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X