ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಕೊರೊನಾ ವೈರಸ್‌ಗೆ ಮೊದಲ ಬಲಿ

|
Google Oneindia Kannada News

ಪಣಜಿ, ಜೂನ್ 22: ಗೋವಾದಲ್ಲಿ ಕೊರೊನಾ ವೈರಸ್ ಮೊದಲ ಬಲಿ ಪಡೆದಿದೆ. 85 ವರ್ಷದ ವ್ಯಕ್ತಿ ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಹರಡಲು ಆರಂಭವಾದ ಮೂರು ತಿಂಗಳ ಬಳಿಕ ಓರ್ವ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

Recommended Video

Galwan Faceoff : ಭಾರತ ಸೇನೆಗೆ ಬಂತು ಸೂಪರ್ ಪವರ್ | Full power For IAF & Army | Oneindia Kannadda

ಅವರನ್ನು ಐಸಿಯುನಲ್ಲಿಡಲಾಗಿತ್ತು, ವಲ್‌ಪಾಯ್ ವಿಧಾನಸಭಾ ಕ್ಷೇತ್ರದಲ್ಲಿ 19 ಪ್ರಕರಣಗಳು ಕಾಣಿಸಿಕೊಂಡ ಪರಿಣಾಮ ಕಂಟೈನ್ಮೆಂಟ್‌ ಝೋನ್ ಆಗಿ ಘೋಷಿಸಲಾಗಿದೆ. ಗೋವಾದಲ್ಲಿ ಇದುವರೆಗೆ 818 ಪ್ರಕರಣಗಳಿವೆ, ಕಳೆದ ಎರಡು ವಾರಗಳಿಂದ ಇಎಸ್ಐ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳೆಷ್ಟು, ಬಲಿಯಾದವರೆಷ್ಟು?ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳೆಷ್ಟು, ಬಲಿಯಾದವರೆಷ್ಟು?

ಕೊರೊನಾದಿಂದ ಮೃತಪಟ್ಟಿರುವ ವ್ಯಕ್ತಿ ಮಧುಮೇಹ, ಅಸ್ತಮಾ, ರಕ್ತದೊತ್ತಡದಂದ ಬಳಲುತ್ತಿದ್ದರು ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Goa Registers First Coronavirus Death

ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಮತ್ತೊಮ್ಮೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಮಹಾಮಾರಿ ಕೊವಿಡ್-19 ಅಟ್ಟಹಾಸಕ್ಕೆ ಒಂದೇ ದಿನ 445 ಮಂದಿ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಅಂಕಿ-ಅಂಶಗಳಿಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲೇ ಭಾರತದಲ್ಲಿ 14,821 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಭಾರತದಲ್ಲಿ ಮಹಾಮಾರಿ ಕೊವಿಡ್-19 ಸೋಂಕಿಗೆ ಇದುವರೆಗೂ 13,699 ಮಂದಿ ಅಸುನೀಗಿದ್ದಾರೆ. ಒಟ್ಟು 4,25,282 ಮಂದಿ ಕೊರೊನಾವೈರಸ್ ಸೋಂಕಿತರ ಪೈಕಿ 2,37,196ಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. 1,74,387 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

English summary
An 85-year-old man from Morlem in north Goa passed away at ESI, the state’s designated Covid-19 hospital, making it the first Covid-19 death of Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X