• search
  • Live TV
ಪಣಜಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹದಾಯಿ ವಿಚಾರ; ಮತ್ತೆ ಕ್ಯಾತೆ ತೆಗೆದ ಗೋವಾ ಸರ್ಕಾರ

|

ಪಣಜಿ, ನವೆಂಬರ್ 27 : ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾದ ಬಿಜೆಪಿ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ವಿವಾದವನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಶುಕ್ರವಾರ ಮಾತನಾಡಿರುವ ಮುಖ್ಯಮಂತ್ರಿಗಳು, "ಮಹದಾಯಿ ನದಿ ನೀರಿನ ತಿರುವು ವಿವಾದದ ಬಗ್ಗೆ ನಾವು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಬಾಕಿ ಇದೆ. ಅಲ್ಲಿ ಹೋರಾಟ ಮುಂದುವರೆಸುತ್ತೇವೆ" ಎಂದರು.

ಮಹದಾಯಿ ವಿವಾದದ ಹೇಳಿಕೆ; ದಿನೇಶ್ ಗುಂಡೂರಾವ್ ಸ್ಪಷ್ಟನೆ

"ಮಹದಾಯಿ ನ್ಯಾಯಾಧೀಕರಣ ನೀಡಿದ ತೀರ್ಪನ್ನು ಎಸ್‌ಎಲ್‌ಪಿ ಮೂಲಕ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ನ್ಯಾಯಾಲಯದ ಹೊರಗೆ ವಿವಾದ ಬಗೆಹರಿಸಿಕೊಳ್ಳುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ" ಎಂದು ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಮಹದಾಯಿ; ಕರ್ನಾಟಕದ ವಿರುದ್ಧ ಸುಪ್ರೀಂಗೆ ಗೋವಾ ಅರ್ಜಿ

"ಕರ್ನಾಟಕ ನಮ್ಮ ಪಾಲಿನ ನೀರನ್ನು ತಿರುಗಿಸಿಕೊಂಡಿದೆ. ಇದರಿಂದಾಗಿ ನೀರಿನ ಹರಿವು ಇಳಿಮುಖವಾಗಿದೆ. ನಮ್ಮ ಪಾಲಿನ ನೀರನ್ನು ಬಿಡುಗಡೆ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿದೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ

ಕರ್ನಾಟಕ ಸರ್ಕಾರ ಮಹದಾಯಿ ನ್ಯಾಯಾಧೀಕರಣದ ತೀರ್ಪನ್ನು ಉಲ್ಲಂಘನೆ ಮಾಡಿದೆ ಎಂದು ಗೋವಾ ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಹ ಸಲ್ಲಿಸಿದೆ. ಎರಡೂ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ.

2014ರಲ್ಲಿ ಮಹದಾಯಿ ನ್ಯಾಯಾಧೀಕರಣ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನದಿ ನೀರನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಇದನ್ನು ಸುಪ್ರೀಂನಲ್ಲಿ ಗೋವಾ ಪ್ರಶ್ನಿಸಿದೆ.

ಕರ್ನಾಟಕ ಸರ್ಕಾರ ನದಿ ನೀರನ್ನು ಅಂತಿಮ ಆದೇಶವನ್ನು ಉಲ್ಲಂಘನೆ ಮಾಡಿ ತಿರುಗಿಸಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ. ಕರ್ನಾಟಕ ಸಹ ಹೆಚ್ಚುವರಿ ನೀರನ್ನು ನೀಡಬೇಕು ಎಂದು ಬೇಡಿಕೆ ಇಟ್ಟಿದೆ.

English summary
Goa Chief Minister Pramod Sawant ruled out out-of-court settlement on Mahadayi issue. We will continue legal fight in supreme court against river water diversion he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X