ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವಾಸಿಗರ ಫೋಟೋ ಕ್ಲಿಕ್!

|
Google Oneindia Kannada News

ಪಣಜಿ, ಡಿಸೆಂಬರ್.04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಗೋವಾ ತೆರೆದುಕೊಳ್ಳುತ್ತಿದ್ದಂತೆ ಪ್ರವಾಸಿಗರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಗೋವಾ ಪ್ರವಾಸಕ್ಕೆ ತೆರಳುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಕೊವಿಡ್-19 ನಿಯಮ ಪಾಲಿಸದೇ, ಮಾಸ್ಕ್ ಗಳನ್ನು ಧರಿಸದೇ ಎಲ್ಲೆಂದರಲ್ಲಿ ಸಂಚರಿಸುತ್ತಿದ್ದಾರೆ.

ಗೋವಾಗೆ ಭೇಟಿ ನೀಡುವ ಪ್ರವಾಸಿಗರು ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುತ್ತಿದ್ದರು. ಮಾಸ್ಕ್ ಧರಿಸುವಂತೆ ಸೂಚಿಸುವ ಸರ್ಕಾರಿ ಅಧಿಕಾರಿಗಳ ಜೊತೆಗೆ ಪ್ರವಾಸಿಗರು ವಾಗ್ವಾದಕ್ಕೆ ಇಳಿದ ಘಟನೆಗಳು ಬೆಳಕಿಗೆ ಬಂದಿವೆ.

ಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖ

ಕೊವಿಡ್-19 ಭೀತಿ ನಡುವೆಯೂ ಮಾಸ್ಕ್ ಧರಿಸದೇ ಸಾರ್ವಜನಿಕವಾಗಿ ಸಂಚರಿಸುವ ಪ್ರವಾಸಿಗರ ಫೋಟೋಗಳನ್ನು ಕ್ಲಿಕ್ಕಿಸಲಾಗುತ್ತದೆ. ತದನಂತರ ಫೋಟೋಗಳನ್ನು ಆಧರಿಸಿ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆ 200 ರೂಪಾಯಿ ದಂಡವನ್ನು ಸಂಗ್ರಹಿಸಲಾಗುತ್ತಿದೆ ಎಂದು ಪಣಜಿ ಮೇಯರ್ ಉದಯ್ ಮದಕೈಕರ್ ತಿಳಿಸಿದ್ದಾರೆ.

Goa Tourists To Be Photographed If Not Wearing A Face Mask


ಪ್ರವಾಸಿಗರು ಮಾರ್ಗಸೂಚಿ ಪಾಲಿಸುವಂತೆ ಮನವಿ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಗೋವಾ ಪ್ರವಾಸಕ್ಕೆ ಆಗಮಿಸುತ್ತಿರುವ ಜನರು ತಮ್ಮ ಆರೋಗ್ಯದ ಜೊತೆಗೆ ಸ್ಥಳೀಯರ ಆರೋಗ್ಯವನ್ನು ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಕೊವಿಡ್-19 ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಪೊಲೀಸರು, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕವಾಗಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರು ಮಾಸ್ಕ್ ಗಳನ್ನು ಧರಿಸುತ್ತಿದ್ದಾರೆ. ಪ್ರವಾಸಿಗರು ಕೂಡಾ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಪಣಜಿ ಮೇಯರ್ ತಿಳಿಸಿದ್ದಾರೆ.

ಗೋವಾದಲ್ಲಿ ಇದುವರೆಗೂ 48365 ಕೊರೊನವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ 696 ಜನರು ಪ್ರಾಣ ಬಿಟ್ಟಿದ್ದಾರೆ. 46251 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 1418 ಸಕ್ರಿಯ ಪ್ರಕರಣ ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

English summary
Goa Tourists To Be Photographed If Not Wearing A Face Mask. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X