ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

|
Google Oneindia Kannada News

ಪಣಜಿ, ಡಿಸೆಂಬರ್ 15: ಗೋವಾ ಜಿಲ್ಲಾ ಪಂಚಾಯಿತಿ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿವೆ. ಗೋವಾದಲ್ಲಿನ ಆಡಳಿತಾರೂಢ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 49 ಸೀಟುಗಳ ಪೈಕಿ ಬಿಜೆಪಿ 32ರಲ್ಲಿ ಅಭೂತಪೂರ್ವ ಗೆಲುವು ಕಂಡಿದೆ. ಇನ್ನು ವಿರೋಧಪಕ್ಷ ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

49 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 32, ಕಾಂಗ್ರೆಸ್ 4, ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) 3, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) 1 ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) 1 ಸ್ಥಾನಗಳಲ್ಲಿ ಗೆಲುವು ಕಂಡಿವೆ. ಇನ್ನುಳಿದ ಏಳು ಸ್ಥಾನಗಳು ಪಕ್ಷೇತರ ಅಭ್ಯರ್ಥಿಗಳ ಪಾಲಾಗಿವೆ.

ಕರಾವಳಿ ರಾಜ್ಯದಲ್ಲಿ ನಡೆದ ಚುನಾವಣೆಗಳಲ್ಲಿ ಇದೇ ಮೊದಲ ಬಾರಿಗೆ ಗೆಲುವು ಕಾಣುವ ಮೂಲಕ ಎಎಪಿ ಇಲ್ಲಿ ಖಾತೆ ತೆರೆದಿದೆ. 2022ರಲ್ಲಿ ನಡೆಯುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಉದ್ದೇಶಿಸಿದ್ದು, ಆ ಬಯಕೆಗೆ ಬಲ ಸಿಕ್ಕಂತಾಗಿದೆ.

Goa Zilla Panchayat Poll Results: BJP Wins 32, Congress 4 In 49 Seats

ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೊಂದು ಕ್ಷೇತ್ರದಲ್ಲಿ ನಡೆಯಬೇಕಿದ್ದ ಚುನಾವಣೆ ಅಭ್ಯರ್ಥಿಯೊಬ್ಬರ ಸಾವಿನಿಂದ ರದ್ದುಗೊಂಡಿದೆ.

'ಬಿಜೆಪಿ ಮತ್ತು ನನ್ನ ನಾಯಕತ್ವದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರದ ಮೇಲಿನ ನಂಬಿಕೆಯನ್ನು ಉಳಿಸಿಕೊಂಡಿರುವುದಕ್ಕಾಗಿ ಗೋವಾದ ಜನತೆ ಮುಂದೆ ತಲೆಬಾಗುತ್ತೇನೆ. ಇದೇ ನಂಬಿಕೆ ಮತ್ತು ಆತ್ಮವಿಶ್ವಾಸದೊಂದಿಗೆ ಗೋವಾವನ್ನು ಅದ್ಭುತ ಮತ್ತು ಸ್ವಾವಲಂಬಿ ರಾಜ್ಯವನ್ನಾಗಿಸೋಣ' ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

English summary
Goa Zilla Panchayat Poll Results: Ruling BJP bagged 32 seats while opposition Congress won only 4 out of 49 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X