ಪಣಜಿಯಿಂದ ಬಿಜೆಪಿ ಟಿಕೆಟ್ ಇಲ್ಲ: ಉತ್ಪಲ್ ಪರಿಕ್ಕರ್ ಹೇಳಿದ್ದೇನು?
ಪಣಜಿ, ಏ.29: ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕರ್ ಪುತ್ರ ಉತ್ಪಲ್ ಪರಿಕ್ಕರ್‌ಗೆ ಪಣಜಿಯಿಂದ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದೆ. ಈ ಕುರಿತು ಉತ್ಪಲ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ.
ನಮ್ಮ ತಂದೆ ಎಂದೂ ನಾನು ರಾಜಕೀಯಕ್ಕೆ ಬರುವುದನ್ನು ಬಯಸಿರಲಿಲ್ಲ, ಅದು ಕುಟುಂಬ ಪ್ರಭುತ್ವ ಆಗಬಾರದು ಎನ್ನುವುದು ಕೂಡ ಅವರ ಅಭಿಪ್ರಾಯವಾಗಿತ್ತು.
ನಾನು ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತೇನೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಹಾಗಾಗಿ ಪಕ್ಷ ಯಾರಿಗೆ ಟಿಕೆಟ್ ನೀಡಿದೆ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದರು.

ಪಣಜಿಯಿಂದ ಉತ್ಪಲ್ ಪರಿಕ್ಕರ್‌ಗೆ ಬಿಜೆಪಿ ಟಿಕೆಟ್ ನೀಡುತ್ತದೆಯೋ ಇಲ್ಲವೋ ಎನ್ನುವ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ. ಗೋವಾ ರಾಜ್ಯದ ಪಣಜಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಭಾನುವಾರ ಸಂಜೆ ಬಿಜೆಪಿ ಘೋಷಣೆ ಮಾಡಿದೆ. ಆದರೆ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಟಿಕೆಟ್ ತಪ್ಪಿದೆ.
ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕರ್ನಾಟಕದ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಅವಿನಾಶ್ ಜಾಧವ್ ಹಾಗೂ ಕುಂದಗೋಳದ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಸಿದ್ಧಾರ್ಥ್ ಕುಂಕಲೇನಕರ್ ಅವರಿಗೆ ಪಣಜಿ ಉಪ ಚುನಾವಣೆಯ ಟಿಕೆಟ್ ನೀಡಲಾಗಿದೆ.
ಸಿದ್ಧಾರ್ಥ್ ಕುಂಕಲೇನಕರ್ ಅವರು ಈ ಹಿಂದೆ ಎರಡು ಬಾರಿ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಗೋವಾ ರಾಜಕಾರಣಕ್ಕೆ ಮರಳಲು ನಿರ್ಧರಿಸಿದ್ದರು.
ಹೀಗಾಗಿ ಸಿದ್ಧಾರ್ಥ್ ಕುಂಕಲೇನಕರ್ ಅವರು 2017 ಮೇ 10ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ಪಣಜಿ ಉಪ ಚುನಾವಣೆಯಲ್ಲಿ ಜಯಗಳಿಸಿದ್ದ ಮನೋಹರ್ ಪರಿಕ್ಕರ್ ಅವರು ಮತ್ತೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು.
ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 19ರಂದು ನಡೆಯಲಿದೆ. ಹೀಗಾಗಿ ಬಿಜೆಪಿಯು ಉತ್ಪಲ್ ಪರಿಕ್ಕರ್ ಅವರಿಗೆ ಟಿಕೆಟ್ ನೀಡುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅಂತಿಮವಾಗಿ ಸಿದ್ಧಾರ್ಥ್ ಕುಂಕಲೇನಕರ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications