ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಜನತೆಗೆ ಅರವಿಂದ್ ಕೇಜ್ರಿವಾಲ್‌ರಿಂದ ಭರವಸೆಯ ಮಹಾಪೂರ

|
Google Oneindia Kannada News

ಪಣಜಿ, ಸೆಪ್ಟೆಂಬರ್ 21: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೋವಾ ಜನತೆಗೆ ಭರವಸೆಯ ಮಹಾಪೂರವನ್ನೇ ಹರಿಸಿದ್ದಾರೆ. ಮುಂಬರುವ 2022ರ ಗೋವಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ, ಸ್ಥಳೀಯರಿಗೆ ಶೇ.80ರಷ್ಟು ಉದ್ಯೋಗವನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಗಣಿಗಾರಿಕೆ ಮತ್ತು ಪ್ರವಾಸೋದ್ಯಮ ಉದ್ಯಮಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಈ ವಲಯಗಳನ್ನು ಅವಲಂಬಿಸಿರುವ ಕುಟುಂಬಗಳಿಗೆ ತಿಂಗಳಿ 5,000 ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

 ಗೋವಾದಲ್ಲಿ ಆಮ್‌ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ಉಚಿತ ವಿದ್ಯುತ್: ಕೇಜ್ರಿವಾಲ್ ಗೋವಾದಲ್ಲಿ ಆಮ್‌ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ಉಚಿತ ವಿದ್ಯುತ್: ಕೇಜ್ರಿವಾಲ್

ಗೋವಾದಲ್ಲಿ ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ನಿರುದ್ಯೋಗಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಮತ್ತು ಉದ್ಯೋಗವಿಲ್ಲದ ಯುವಕರಿಗೆ ಉದ್ಯೋಗ ದೊರೆಯುವವರೆಗೆ ಮಾಸಿಕ 3,000 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಅವರು ಭರವಸೆ ನೀಡಿದ್ದಾರೆ.

Kejriwal Sssures 80 Percent Jobs For Locals If AAP Voted To Power In Goa Next Year

ಈ ಹಿಂದೆ ಜುಲೈನಲ್ಲಿ ಗೋವಾಗೆ ಭೇಟಿ ನೀಡಿದ ವೇಳೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು, ಗೋವಾದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಿದರೆ ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದರು.

ಪ್ರಸ್ತುತ ಬಿಜೆಪಿ ಆಡಳಿತದಲ್ಲಿರುವ ಗೋವಾದಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಕೇಜ್ರಿವಾಲ್ ಅವರು ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗೋವಾಕ್ಕೆ ಭೇಟಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನಲೆ ಪ್ರಚಾರಕ್ಕೆ ತೆರಳಿದ್ದ ಅವರು ಯುವ ಜನತೆಗೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ. ಯುವ ಮತಗಳ ಮೇಲೆ ಕಣ್ಣಿಟ್ಟಿರುವ ಅರವಿಂದ್ ಕೇಜ್ರಿವಾಲ್ ನಿರುದ್ಯೋಗ ಸಮಸ್ಯೆಯನ್ನು ಚುನಾವಣಾ ಅಸ್ತ್ರ ಮಾಡಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೋವಾದಲ್ಲಿ ಸರ್ಕಾರಿ ಉದ್ಯೋಗ ರಾಜಕಾರಣಿಗಳ ಸಂಬಂಧಿಗಳಿಗೆ ಮೀಸಲಾಗಿದೆ. ಸಾಮಾನ್ಯ ಯುವಕರು ಇಲ್ಲಿ ಸರ್ಕಾರ ನೌಕರಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಒಂದು ವೇಳೆ ಗೋವಾದಲ್ಲಿ ಆಮ್ ಅದ್ಮಿ ಅಧಿಕಾರಕ್ಕೆ ಬಂದಲ್ಲಿ ಸಾಮಾನ್ಯ ಯುವಕರಿಗೆ ಸರ್ಕಾರಿ ಹುದ್ದೆ ಹೊಂದಬಹುದು. ಖಾಸಗಿ ಕ್ಷೇತ್ರದ ಶೇ.80ರಷ್ಟು ನೌಕರಿಗಳನ್ನು ಸ್ಥಳೀಯರಿಗೆ ಮೀಸಲಿಡುವ ಕಾನೂನು ತರಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದರು.

ಗೋವಾ ಸಿಎಂ ಪ್ರಮೋದ್ ಸಾವಂತ್ ದೆಹಲಿ ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ಮನೆ ಬಾಗಿಲಿಗೆ ಸೇವೆ ಕಾರ್ಯಕ್ರಮ ಆರಂಭಿಸಿದ್ದಾರೆ. ನಕಲಿ ಸರ್ಕಾರಕ್ಕೆ ಏಕೆ ಮತ ಹಾಕುಬೇಕು ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

English summary
Aam Aadmi Party (AAP) national convener Arvind Kejriwal on Tuesday said if voted to power in Goa in the 2022 polls, his party will ensure that 80 per cent of jobs, including in the private sector, will be reserved for local people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X