ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಪ್ರಚಾರ ಶುರು ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ

|
Google Oneindia Kannada News

ಪಣಜಿ, ಸೆಪ್ಟೆಂಬರ್ 25:ಮುಂಬರಲಿರುವ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಶುರುಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

2022ರ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ.

ಗೋವಾ ಜನತೆಗೆ ಅರವಿಂದ್ ಕೇಜ್ರಿವಾಲ್‌ರಿಂದ ಭರವಸೆಯ ಮಹಾಪೂರಗೋವಾ ಜನತೆಗೆ ಅರವಿಂದ್ ಕೇಜ್ರಿವಾಲ್‌ರಿಂದ ಭರವಸೆಯ ಮಹಾಪೂರ

ಗೋವಾದಲ್ಲಿ ಬಿಜೆಪಿಯನ್ನು ಸೋಲಿಸಿ ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದು, ಇದಕ್ಕಾಗಿ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ‌ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ' ಎಂದೂ ಅವರು ತಿಳಿಸಿದ್ದಾರೆ.

Launch Aggressive Poll Campaign In Goa, Ensure Defeat Of BJP: Rahul Gandhi

ಚುನಾವಣಾ ವೀಕ್ಷಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾನಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್‌ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ.

ಇನ್ನೊಂದೆಡೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾಗುತ್ತಿದ್ದಾರೆ.

ಗೋವಾದಲ್ಲಿ ರಾಜಕೀಯ ಅಸ್ತಿತ್ವ ಸ್ಥಾಪಿಸಲು ಮುಂದಾಗಿರುವ ಅವರು, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರ ಐ-ಪ್ಯಾಕ್‌ ಸಂಸ್ಥೆಯ ಜತೆ ಸದ್ಯದಲ್ಲೇ ಗೋವಾಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಂಗಾಳದಲ್ಲಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿಯನ್ನು ಸೋಲಿಸಿದ ನಂತರ ಮಮತಾಇಡೀ ದೇಶಕ್ಕೆ ಟಿಎಂಸಿಯನ್ನು ವಿಸ್ತರಿಸುವ ಚಿಂತನೆಯಲ್ಲಿದ್ದಾರೆ. ಈಗಾಗಲೇ ತ್ರಿಪುರಾದಲ್ಲಿ ಅವರ ಪಕ್ಷ ನೆಲೆಯೂರುತ್ತಿದೆ. 2024ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ತಮ್ಮ ಪಕ್ಷದ ಅಸ್ತಿತ್ವವಿರಬೇಕು ಎಂಬುದು ಅವರ ಯೋಚನೆ.

40 ವಿಧಾನಸಭಾ ಕ್ಷೇತ್ರಗಳ ಪುಟ್ಟರಾಜ್ಯ ಗೋವಾದಲ್ಲಿ 2017ರ ಚುನಾವಣೆಯಲ್ಲಿ ಕಾಂಗ್ರೆಸ್‌ 17 ಹಾಗೂ ಬಿಜೆಪಿ 13 ಸೀಟು ಗೆದ್ದಿದ್ದವು. ಆದರೂ ಬಿಜೆಪಿ ಸರ್ಕಾರ ರಚಿಸಿತ್ತು. ಅಲ್ಲಿ ಕಾಂಗ್ರೆಸ್‌ ದುರ್ಬಲವಾಗಿದ್ದು, ಟಿಎಂಸಿ ತುಂಬಾ ದೊಡ್ಡ ಸಾಧನೆ ಮಾಡದಿದ್ದರೂ ಬಿಜೆಪಿಯನ್ನು ಸೋಲಿಸಲು ಸಾಧ್ಯವಿದೆ.

ಈಗಾಗಲೇ ಆಮ್‌ ಆದ್ಮಿ ಪಕ್ಷ ಕೂಡ ಗೋವಾಕ್ಕೆ ಕಾಲಿಟ್ಟಿದೆ. ಆಪ್‌ನ ಅರವಿಂದ ಕೇಜ್ರಿವಾಲ್‌ ಜೊತೆ ಮಮತಾ ಸ್ನೇಹ ಹೊಂದಿದ್ದಾರೆ. ಹೀಗಾಗಿ ಮುಂದಿನ ವರ್ಷದ ಗೋವಾ ಚುನಾವಣೆ ಕುತೂಹಲ ಮೂಡಿಸಿದೆ.

ಅದಕ್ಕೂ ಮುನ್ನ 2022ರ ಫೆಬ್ರವರಿಯಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಷ್ಟರೊಳಗೆ ರಾಜ್ಯದಲ್ಲಿ ಟಿಎಂಸಿ ಸಂಘಟನೆ ಆರಂಭಿಸಲು ಮಮತಾ ನಿರ್ಧರಿಸಿದ್ದಾರೆ. ಈಗಾಗಲೇ ಐ-ಪ್ಯಾಕ್‌ನ 200ಕ್ಕೂ ಹೆಚ್ಚು ಮಂದಿ ಗೋವಾದಲ್ಲಿ ಟಿಎಂಸಿಗಾಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸದ್ಯದಲ್ಲೇ ಟಿಎಂಸಿಯ ಕೆಲ ಸಂಸದರು ಗೋವಾಕ್ಕೆ ತೆರಳಿ ಪಕ್ಷಕ್ಕಿರುವ ಸಾಧ್ಯತೆಗಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಮಮತಾ ಬ್ಯಾನರ್ಜಿಯವರ ಅಳಿಯ ಅಭಿಷೇಕ್‌ ಬ್ಯಾನರ್ಜಿಗೋವಾಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸ್ವತಃ ಮಮತಾ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

English summary
Senior Congress leader Rahul Gandhi has directed the leaders of his party in Goa, where Assembly polls are due in February next year, to launch an aggressive campaign in the state and ensure the defeat of the ruling BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X