ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನೋಹರ್ ಪರಿಕ್ಕರ್ ಪುಣ್ಯತಿಥಿ; ಪ್ರಮೋದ್ ಸಾವಂತ್ ಟ್ವೀಟ್

|
Google Oneindia Kannada News

ಪಣಜಿ, ಮಾರ್ಚ್ 17; ಗುರುವಾರ ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುಣ್ಯತಿಥಿ. ರಾಜ್ಯದ ಹಂಗಾಮಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಟ್ವೀಟ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಪರಿಕ್ಕರ್ ಜೊತೆಗಿನ ಫೋಟೋ ಶೇರ್ ಮಾಡಿ ನೆನಪು ಮಾಡಿಕೊಂಡಿದ್ದಾರೆ.

ಗೋವಾದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನಾಯಕ ಮನೋಹರ್ ಪರಿಕ್ಕರ್ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಕ್ಷಣಾ ಸಚಿವರಾಗಿದ್ದರು. ಬಳಿಕ ಅವರು ಗೋವಾ ರಾಜಕೀಯಕ್ಕೆ ವಾಪಸ್ ಆಗಿ, ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಅಂತಿಮ? ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಅಂತಿಮ?

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ 2019ರ ಮಾರ್ಚ್ 17ರಂದು ನಿಧನಹೊಂದಿದ್ದರು. ಇಂದು ಅವರ ಪುಣ್ಯತಿಥಿ ಬಿಜೆಪಿ ನಾಯಕರು ಟ್ವೀಟ್‌ಗಳನ್ನು ಮಾಡುವ ಮೂಲಕ ಪರಿಕ್ಕರ್ ನೆನಪು ಮಾಡಿಕೊಳ್ಳುತ್ತಿದ್ದಾರೆ.

ಮೋದಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್ ಮೋದಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್

Manohar Parrikar Punyatithi Pramod Sawant Shares Old Photo

ಗೋವಾದ ಹಂಗಾಮಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದು, ಭಾಯಿ ಸದಾ ಸ್ಫೂರ್ತಿಯ ಮೂಲವಾಗಿದ್ದಾರೆ. ಅವರು ನನ್ನನ್ನು ರಾಜಕೀಯ ಕ್ಷೇತ್ರಕ್ಕೆ ಮಾತ್ರ ಕರೆತಂದಿಲ್ಲ. ಪ್ರಾಮಾಣಿಕತೆಯಿಂದ ಜನರ ಸೇವೆ ಸಲ್ಲಿಸಲು ಮಾರ್ಗದರ್ಶನ ನೀಡಿದರು. ಅವರ ಪುಣ್ಯತಿಥಿಯಂದು ಅವರ ಸ್ಮರಣೆ ಮಾಡಿಕೊಂಡು ಪ್ರಾರ್ಥನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಮೋದ್ ಸಾವಂತ್ ಗುರುವಾರ ಮಿರಾಮರ್ ಬೀಚ್‌ನಲ್ಲಿರುವ ಮನೋಹರ್ ಪರಿಕ್ಕರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವಂದನೆ ಸಲ್ಲಿಸಿದರು. ಪರಿಕ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಸೇರಿದಂತೆ ಇತರ ಬಿಜೆಪಿ ನಾಯಕರು ಸಹ ಸಮಾಧಿ ಸ್ಥಳದಲ್ಲಿ ನಮನಗಳನ್ನು ಸಲ್ಲಿಸಿದರು.

ಗೋವಾ ಚುನಾವಣೆ; ಉತ್ಪಲ್ ಪರಿಕ್ಕರ್ ಪಡೆದ ಮತಗಳು ಎಷ್ಟು?ಗೋವಾ ಚುನಾವಣೆ; ಉತ್ಪಲ್ ಪರಿಕ್ಕರ್ ಪಡೆದ ಮತಗಳು ಎಷ್ಟು?

ಮನೋಹರ್ ಪರಿಕ್ಕರ್ ನಿಧನರಾದ ಬಳಿಕ ಬಿಜೆಪಿ ಪ್ರಮೋದ್ ಸಾವಂತ್‌ರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿತು. 2022ರ ಚುನಾವಣೆಯನ್ನು ಪ್ರಮೋದ್ ಸಾವಂತ್ ನೇತೃತ್ವದಲ್ಲಿಯೇ ಎದುರಿಸಲಾಗಿತ್ತು. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಉತ್ಪಲ್ ಪರಿಕ್ಕರ್‌ ಉಪಸ್ಥಿತಿ; ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲಿಲ್ಲ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಪಣಜಿ ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಕಂಡ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿ ನಾಯಕರ ಜೊತೆ ಅದರಲ್ಲೂ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆ ಕಾಣಿಸಿಕೊಂಡರು.

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆಗೆ ಒಂದು ಶಾಸಕರ ಕೊರತೆ ಉಂಟಾಗಿದೆ. ಮೂವರು ಪಕ್ಷೇತರರು, ಎಂಜಿಪಿ ಪಕ್ಷದ ಇಬ್ಬರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ.

ಗೋವಾ ಫಲಿತಾಂಶ; ಗೋವಾ ವಿಧಾನಸಭೆ ಸದಸ್ಯ ಬಲ 40. ಚುನಾವಣೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್‌ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ.

ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದಾಗಿ ಹೇಳಿದೆ. ಆದರೆ ಮುಖ್ಯಮಂತ್ರಿ ಯಾರು? ಎಂಬುದು ಇನ್ನು ನಿಗೂಢವಾಗಿದೆ. ಪ್ರಮೋದ್ ಸಾವಂತ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಹೋಳಿ ಹಬ್ಬದ ಬಳಿಕ ಗೋವಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಪ್ರಮೋದ್ ಸಾವಂತ್ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬುಧವಾರ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದರು.

ಬಿಜೆಪಿ ಹೈಕಮಾಂಡ್ ಬಿ. ಎಲ್. ಸಂತೋಷ್ ಮತ್ತು ಕೇಂದ್ರ ಸಚಿವ ಪಿಯೂಷ್ ಘೋಯೆಲ್‌ರನ್ನು ಗೋವಾಗೆ ವೀಕ್ಷಕರಾಗಿ ನೇಮಕ ಮಾಡಿದೆ. ವೀಕ್ಷಕರ ನೇತೃತ್ವದಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.

English summary
March 17th Goa former chief minister late Manohar Parrikar punyatithi. Goa chief minister Pramod Sawant shared old photo on twitter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X