ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಹೇಗಿದೆ?

ಪಣಜಿ, ನವೆಂಬರ್ 15: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿರುವ ವದಂತಿಯನ್ನು ಪರಿಕ್ಕರ್ ಅವರ ಕಚೇರಿ ಮೂಲಗಳು ಅಲ್ಲಗಳೆದಿವೆ.

ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ. ಅವರು ಸುಧಾರಿಸಿಕೊಳ್ಳುತ್ತಿದ್ದಾರೆ. ದಯವಿಟ್ಟು ಸುಳ್ಳು ವದಂತಿಗಳನ್ನು ಹಬ್ಬಿಸಬೇಡಿ ಎಂದು ಅವರ ಆಪ್ತ ಮೂಲಗಳು ಮನವಿ ಮಾಡಿವೆ.

62 ವರ್ಷದ ಮನೋಹರ್ ಪರಿಕ್ಕರ್ ಅವರು ಪ್ಯಾಂಕ್ರಿಯಾಸ್ ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು, ಹಲವು ದಿನಗಳ ಕಾಲ ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದೆ. ನಂತರ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲೂ ಅವರು ಚಿಕಿತ್ಸೆ ಪಡೆದಿದ್ದು, ಇದೀಗ ಅವರ ಆರೋಗ್ಯ ಕೊಂಚ ಸುಧಾರಿಸುತ್ತಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

Manohar Parrikars health condition is stable: government official said

ಪರಿಕ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರೂ ಆಸ್ಪತ್ರೆಯಲ್ಲಿಯೇ ಸಚಿವ ಸಂಪುಟ ಸಭೆ ನಡೆಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆಯೇ ನಿವಾಸಕ್ಕೆ ತೆರಳುವ ಬದಲು ವಿಧಾನಸಭೆಗೆ ತೆರಳಿ, ಬಜೆಟ್ ಮಂಡಿಸಿದ್ದನ್ನು ಇಲ್ಲಿ ನೆನೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+