ಪರಿಕ್ಕರ್ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ: 48 ಗಂಟೆಗಳ ಗಡುವು

ಪಣಜಿ, ನವೆಂಬರ್ 21: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ಪಣಜಿಯ ಅವರ ನಿವಾಸದ ಮುಂದೆ ನೂರಾರು ಜನ ಪ್ರತಿಭಟನೆ ನಡೆಸುತ್ತಿದ್ದಾರೆ.

48 ಗಂಟೆಗಳೊಳಗೆ ಪರಿಕ್ಕರ್ ರಾಜೀನಾಮೆ ನೀಡಬೇಕು ಮತ್ತು ಪೂರ್ಣಾವಧಿ ಮುಖ್ಯಮಂತ್ರಿಯನ್ನು ನೇಮಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ಕೆಲವು ಎನ್ ಜಿಒ ಮತ್ತು ಸಾಮಾಜಿಕ ಕಾರ್ಯಕರ್ತರು ನಡೆಸುತ್ತಿದ್ದ ಈ ಪ್ರತಿಭಟನೆಗೆ ಇದೀಗ ಕಾಂಗ್ರೆಸ್, ಎನ್ ಸಿಪಿ, ಶಿವಸೇನೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳೂ ಬೆಂಬಲ ನೀಡಿವೆ.

Many people march to Manohar Parikkars home, demand his resignation

ಅನಾರೋಗ್ಯದಿಂದ ಬಳಲುತ್ತಿರುವ ಮನೋಹರ್ ಪರಿಕ್ಕರ್ ಅವರು ರಾಜೀನಾಮೆ ನೀಡಬೇಕು. ಅವರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಆಡಳಿತವನ್ನು ಸರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಅವರ ಬದಲಾಗಿ ಆಡಳಿತದಲ್ಲಿ ಪೂರ್ಣ ಸಮಯ ನೀಡಬಲ್ಲ ನಾಯಕರಿಗೆ ಅವಕಾಶ ನೀಡಬೇಕು ಎಂದು ಪ್ರತಿಭಟನಕಾರರು ಬೇಡಿಕೆ ಇಟ್ಟಿದ್ದಾರೆ.

ಪ್ಯಾಂಕ್ರಿಯಾಸ್ ಸಂಬಂಧೀ ಕಾಯಿಲೆಯಿಂದ ಬಳಲುತ್ತಿರುವ ಪರಿಕ್ಕರ್ ಅವರು ಇತ್ತೀಚೆಗಷ್ಟೇ ವಿದೇಶದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+