ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಸಮೀಕ್ಷೆ; ಗೋವಾದಲ್ಲಿ ಅತಂತ್ರ ಫಲಿತಾಂಶ!

|
Google Oneindia Kannada News

ಪಣಜಿ, ಜನವರಿ 18; "ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳಲ್ಲಿಯೂ ಕಣಕ್ಕಿಳಿಯಲಿದೆ. ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮತ್ತೆ ಅಧಿಕಾರ ಪಡೆಯಲಿದೆ" ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21. ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಹೇಳಿದೆ.

ಗೋವಾ; ಉತ್ಪಲ್ ಪರಿಕ್ಕರ್‌ಗೆ ಎಲ್ಲಾ ವಿರೋಧ ಪಕ್ಷಗಳ ಬೆಂಬಲ? ಗೋವಾ; ಉತ್ಪಲ್ ಪರಿಕ್ಕರ್‌ಗೆ ಎಲ್ಲಾ ವಿರೋಧ ಪಕ್ಷಗಳ ಬೆಂಬಲ?

Republic P-MARQ ಚುನಾವಣಾ ಪೂರ್ವ ಸಮೀಕ್ಷೆ ವರದಿ ಪ್ರಕಟವಾಗಿದೆ. ಯಾವುದೇ ಪಕ್ಷಕ್ಕೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವಷ್ಟು ಸ್ಥಾನಗಳು ಲಭ್ಯವಾಗುವುದಿಲ್ಲ. ಆದರೆ ಬಿಜೆಪಿ 16-20 ಸ್ಥಾನ ಗೆದ್ದು ಬಹುದೊಡ್ಡ ಪಕ್ಷವಾಗಲಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.

ಗೋವಾ; ಎಎಪಿ, ಟಿಎಂಸಿಗೆ ಟ್ವೀಟ್ ಬಾಣ ಬಿಟ್ಟ ಪಿ. ಚಿದಂಬರಂ ಗೋವಾ; ಎಎಪಿ, ಟಿಎಂಸಿಗೆ ಟ್ವೀಟ್ ಬಾಣ ಬಿಟ್ಟ ಪಿ. ಚಿದಂಬರಂ

ಗೋವ ವಿಧಾನಸಭೆ ಚುನಾವಣೆಗೆ ಎಎಪಿ ಮತ್ತು ಟಿಎಂಸಿ ಮೊದಲ ಬಾರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಎಎಪಿ 4-8 ಮತ್ತು ಟಿಎಂಸಿ ಮೈತ್ರಿಕೂಟ 1-5 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಸೀಟುಗಳು ಎಎಪಿ ಮತ್ತು ಟಿಎಂಸಿ ಕಡೆ ಹಂಚಿ ಹೋಗಲಿದ್ದು ಬಹುಮತಕ್ಕೆ ಕೊರತೆ ಉಂಟಾಗಲಿದೆ.

ಗೋವಾ; ಶಿವಸೇನೆ & ಎನ್‌ಸಿಪಿ ಮೈತ್ರಿ, ದೂರ ಉಳಿದ ಕಾಂಗ್ರೆಸ್! ಗೋವಾ; ಶಿವಸೇನೆ & ಎನ್‌ಸಿಪಿ ಮೈತ್ರಿ, ದೂರ ಉಳಿದ ಕಾಂಗ್ರೆಸ್!

ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ

ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ

40 ಸದಸ್ಯ ಬಲದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಬಿಜೆಪಿ ಮೈತ್ರಿಕೂಟ 16-20, ಕಾಂಗ್ರೆಸ್ ಮೈತ್ರಿಕೂಟ 9-13 ಸ್ಥಾನಗಳನ್ನು ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ. ಬಿಜೆಪಿ ಶೇ 3.05 ಮತ್ತು ಕಾಂಗ್ರೆಸ್ ಶೇ 22.2ರಷ್ಟು ಮತಗಳನ್ನು ಪಡೆಯಲಿವೆ.

2017ರ ಚುನಾವಣೆಯಲ್ಲಿ ಬಿಜೆಪಿ 13, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯಗಳಿಸಿ ಅತಂತ್ರ ಫಲಿತಾಂಶ ಬಂದಿತ್ತು. ಬಿಜೆಪಿ ಗೋವಾ ಫಾರ್ವರ್ಡ್ ಪಕ್ಷ, ಪಕ್ಷೇತರರ ಸಹಾಯದಿಂದ ಸರ್ಕಾರ ರಚನೆ ಮಾಡಿತ್ತು. ಈ ಬಾರಿ ಗೋವಾ ಫಾರ್ವರ್ಡ್ ಪಕ್ಷ ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ.

ಎಎಪಿ, ಟಿಎಂಸಿ, ಇತರರು

ಎಎಪಿ, ಟಿಎಂಸಿ, ಇತರರು

ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ, ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ಟಿಎಂಸಿ ಈ ಬಾರಿ ಗೋವಾ ವಿಧಾನಸಭೆ ಚುನಾವಣಾ ಕಣಕ್ಕೆ ಧುಮುಕಿವೆ. ಟಿಎಂಸಿ ಮತ್ತು ಎಂಜಿಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎಎಪಿ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ.

ಎಎಪಿ ಚುನಾವಣೆಯಲ್ಲಿ ಶೇ 17.4ರಷ್ಟು ಮತಗಳನ್ನು ಪಡೆಯಲಿದ್ದು, 4-8 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಅಂದಾಜಿಸಲಾಗಿದೆ. ಟಿಎಂಸಿ ಮೈತ್ರಿಕೂಟ ಶೇ 12.2ರಷ್ಟು ಮತಗಳನ್ನು ಪಡೆಯಲಿದ್ದು,1-5 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಇತರರಿಗೆ ಎಷ್ಟು ಸ್ಥಾನಗಳು

ಇತರರಿಗೆ ಎಷ್ಟು ಸ್ಥಾನಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಎಎಪಿ ಹೊರತುಪಡಿಸಿ ಅನೇಕ ಪ್ರಾದೇಶಿಕ ಪಕ್ಷಗಳು. ಎನ್‌ಸಿಪಿ, ಶಿವಸೇನೆ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಚುನಾವಣೆಯಲ್ಲಿ ಇತರ ಪಕ್ಷಗಳು ಶೇ 17.7ರಷ್ಟು ಮತಗಳನ್ನು ಪಡೆಯಲಿದ್ದು, 1-3 ಸ್ಥಾನ ಪಡೆಯಬಹುದು ಎಂದು ಅಂದಾಜಿಸಲಾಗಿದೆ.

ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಯಾರು ಬೆಸ್ಟ್?

ಮುಖ್ಯಮಂತ್ರಿ ಹುದ್ದೆಗೆ ಯಾರು ಬೆಸ್ಟ್?

ಗೋವಾದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು? ಎಂದು ಸಹ ಸಮೀಕ್ಷೆ ನಡೆಸಲಾಗಿದೆ. ಪ್ರಸ್ತುತ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಪ್ರಮೋದ್ ಸಾವಂತ್ ಪರವಾಗಿ ಶೇ 30ರಷ್ಟು ಜನರು ಒಲವು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ದಿಗಂಬರ್ ಕಾಮತ್ ಪರವಾಗಿ ಶೇ 16ರಷ್ಟು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಳಿದಂತೆ ಮನೋಜ್ ಪರಬ್ ಶೇ 14, ವಿಜಯ್ ಸರ್‌ದೇಸಾಯಿ ಶೇ 10, ಎಎಪಿಯಿಂದ ಮುಖ್ಯಮಂತ್ರಿ ಆಗುವವರಿಗೆ ಶೇ 14ರಷ್ಟು, ಇತರರಿಗೆ ಶೇ 16ರಷ್ಟು ಬೆಂಬಲ ಸಿಕ್ಕಿದೆ.

Recommended Video

Usman Khawajaರನ್ನು stage ಮೇಲೆ ಕರೆಯಲು Pat Cummins ಮಾಡಿದ್ದೇನು | Oneindia Kannada

English summary
Republic P-MARQ opinion poll predicted hung assembly in Goa. BJP may get 16-20 seat and Congress 9-13 seats. 40 member house majority mark is 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X