ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನೋಹರ್ ಪರಿಕ್ಕರ್ ಬಗ್ಗೆ ಗೋವಾ ನೂತನ ಮುಖ್ಯಮಂತ್ರಿ ಹೇಳಿದ್ದೇನು?

|
Google Oneindia Kannada News

ಪಣಜಿ, ಮಾರ್ಚ್ 19: ಮನೋಹರ್ ಪರಿಕ್ಕರ್ ಅವರ ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ, ಆದರೆ ಪ್ರಯತ್ನ ಪಡುತ್ತೇನೆ ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಮತ್ತು ರಾಜ್ಯದ ಜನತಗೆ ಸ್ಥಿರ ಸರ್ಕಾರವನ್ನು ನೀಡುವ ಜವಾಬ್ದಾರಿ ಕೂಡ ತಮ್ಮ ಮೇಲಿದೆ. ಬಾಕಿ ಉಳಿದಿರುವ ಕಾರ್ಯಗಳನ್ನು ತಮ್ಮ ಸರ್ಕಾರ ಪೂರ್ಣಗೊಳಿಸಲಿದೆ.

Pramod Sawant says will never be able to do as much as Parrikar

ಬಹುಶಃ ನಾನು ಮನೋಹರ್ ಪರಿಕ್ಕರ್ ಅವರ ಮಟ್ಟಿಕ್ಕೆ ಕೆಲಸ ಮಾಡದೇ ಇರಬಹುದು. ಆದರೆ ನನ್ನ ಶಕ್ತಿ ಮೀರಿ ಗೋವಾ ಜನತೆಗಾಗಿ ದುಡಿಯುತ್ತೇನೆ ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ.

ಮಧ್ಯರಾತ್ರಿ ಪ್ರಮಾಣ ವಚನ ಸ್ವೀಕರಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್ ಮಧ್ಯರಾತ್ರಿ ಪ್ರಮಾಣ ವಚನ ಸ್ವೀಕರಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್

ಮನೋಹರ್ ಪರಿಕ್ಕರ್ ಅವರ ನಿಧನದಿಂದಾಗಿ ಗೋವಾದಲ್ಲಿ ಭುಗಿಲೆದ್ದಿದ್ದ ಸರ್ಕಾರ ರಚನೆ ಕಸರತ್ತಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬಿಜೆಪಿ ಹೈ ಕಮಾಂಡ್ ತರಾತುರಿಯಲ್ಲಿ ಸ್ಪೀಕರ್ ಆಗಿದ್ದ ಪ್ರಮೋದ್ ಸಾವಂತ್ ರನ್ನು ಮೈತ್ರಿ ಸರ್ಕಾರದ ಸಿಎಂ ಆಗಿ ಆಯ್ಕೆ ಮಾಡಿದೆ. ಹಾಗೆಯೇ ಮಧ್ಯರಾತ್ರಿ 2 ಗಂಟೆಗೆ ಪ್ರಮೋದ್ ಸಾವಂತ್ ಅವರು ಗೋವಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

English summary
The BJP's Pramod Sawant was sworn in as chief minister of Goa at 1.50 am on Tuesday. Eleven ministers were sworn in along with him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X