ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಅಂತಿಮ?

|
Google Oneindia Kannada News

ಪಣಜಿ, ಮಾರ್ಚ್ 16; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಅಂತಿಮಗೊಳಿಸಿದೆ?. ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದ್ದು, ಪಕ್ಷೇತರರು, ಎಂಜಿಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚನೆ ಮಾಡಲಿದೆ.

ಬಿಜೆಪಿ ಗೋವಾದ ಸಿಎಂ ಆಗಿ ಪ್ರಮೋದ್ ಸಾವಂತ್, ಮಣಿಪುರ ಸಿಎಂ ಆಗಿ ಎನ್. ಬಿರೇನ್ ಸಿಂಗ್‌ರನ್ನು ಮುಂದುವರೆಸಲು ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೋಳಿ ಹಬ್ಬದ ಬಳಿಕ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಮೋದಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್ ಮೋದಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್

ಬುಧವಾರ ಎನ್. ಬಿರೇನ್ ಸಿಂಗ್ ಮತ್ತು ಪ್ರಮೋದ್ ಸಾವಂತ್ ಸಂಸತ್ ಭವನದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದರು. ಈ ಭೇಟಿಯ ಬಳಕ ಪಕ್ಷ ಇಬ್ಬರನ್ನು ಎರಡನೇ ಅವಧಿಗೆ ಮುಂದುವರೆಸಲು ಒಪ್ಪಿಗೆ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ

Pramod Sawant To Continue As Chief Minister Of Goa

ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೊದಲ ಬಾರಿಗೆ ಬುಧವಾರ ಪ್ರಮೋದ್ ಸಾವಂತ್ ನರೇಂದ್ರ ಮೋದಿ ಭೇಟಿಯಾದರು. ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಿ ಪಕ್ಷ ಇನ್ನೂ ಶಾಸಕಾಂಗ ಪಕ್ಷದ ಸಭೆ ನಡೆಸಿಲ್ಲ.

ಗೋವಾ; ಬಿಜೆಪಿ ಇನ್ನೂ ಸಿಎಂ ಅಭ್ಯರ್ಥಿ ಅಂತಿಮಗೊಳಿಸಿಲ್ಲ! ಗೋವಾ; ಬಿಜೆಪಿ ಇನ್ನೂ ಸಿಎಂ ಅಭ್ಯರ್ಥಿ ಅಂತಿಮಗೊಳಿಸಿಲ್ಲ!

ಬಿ. ಎಲ್. ಸಂತೋಷ್ ಮತ್ತು ಕೇಂದ್ರ ಸಚಿವ ಪಿಯೂಷ್ ಘೋಯೆಲ್ ಗೋವಾಕ್ಕೆ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಹೋಳಿ ಹಬ್ಬ ಮುಗಿದ ಬಳಿಕ ಉಭಯ ನಾಯಕರು ಗೋವಾಕ್ಕೆ ತೆರಳಲಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಲಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆದಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಿತ್ತು. ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ, ದೊಡ್ಡ ಪಕ್ಷವಾಗಿ ಹೊರಮ್ಮಿದೆ. ಆದರೆ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ 21 ಲಭ್ಯವಾಗಿಲ್ಲ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ದಿನವೇ ಮೂವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಬೆಂಬಲಿಸುವುದಾಗಿ ಘೋಷಣೆ ಮಾಡಿದರು. ಬಳಿಕ ಎರಡು ಸ್ಥಾನದಲ್ಲಿ ಜಯಗಳಿಸಿರುವ ಎಂಜಿಪಿ ಪಕ್ಷ ಸಹ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿತು.

ಗೋವಾ ಮುಖ್ಯಮಂತ್ರಿಯಾಗಿ ವಿಶ್ವಜಿತ್ ರಾಣೆ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದು ಅವರು ಹೇಳಿದ್ದರು. ಆದರೆ ಬುಧವಾರ ಪ್ರಮೋದ್ ಸಾವಂತ್ ಮುಂದುವರೆಯಲಿದ್ದಾರೆ? ಎಂಬ ಮಾಹಿತಿ ಸಿಕ್ಕಿದೆ.

English summary
Pramod Sawant and N. Biren Singh will continue as chief minister and get second terms in the two states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X