Breaking; ಗೋವಾ ಮುಖ್ಯಮಂತ್ರಿ ಘೋಷಣೆ ಮಾಡಿದ ಬಿಜೆಪಿ
ಪಣಜಿ, ಮಾರ್ಚ್ 21; ಗೋವಾದಲ್ಲಿ ಸರ್ಕಾರ ರಚನೆ ಮಾಡಲಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ಫೆಬ್ರವರಿ 14ರಂದು ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಸೋಮವಾರ ಬಿಜೆಪಿ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ರಾಜ್ಯದ ಹಂಗಾಮಿ ಮುಖ್ಯಮಂತ್ರಿಯಾಗಿರುವ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಮಣಿಪುರ, ಉತ್ತರ ಪ್ರದೇಶದ ಬಳಿಕ ಗೋವಾದಲ್ಲಿಯೂ ಹಿಂದಿನ ಮುಖ್ಯಮಂತ್ರಿಯನ್ನೇ ಬಿಜೆಪಿ ಮುಂದುವರೆಸುತ್ತಿದೆ. 2ನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಲು ಪಕ್ಷ ಪ್ರಮೋದ್ ಸಾವಂತ್ಗೆ ಅವಕಾಶ ನೀಡಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಿತ್ತು. ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.
ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಯಾರಿಗೂ ಸಿಕ್ಕಿರಲಿಲ್ಲ. ಆದರೆ ಮೂವರು ಪಕ್ಷೇತರರು, ಇಬ್ಬರು ಎಂಜಿಪಿ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ನೀಡಿದ್ದರು. ಬಿಜೆಪಿ ಬಲ 25ಕ್ಕೆ ಏರಿಕೆಯಾಗಿದ್ದು, ಪಕ್ಷ ಸರ್ಕಾರ ರಚನೆ ಮಾಡುತ್ತಿದೆ.
I want to thank PM Narendra Modi and Union HM Amit Shah to have given me the opportunity to work as the CM of Goa for next 5 years. I am glad that the people of Goa have accepted me. I'll do everything possible to work for development of the state: Goa CM-designate Pramod Sawant pic.twitter.com/QJDFNbRK1U
— ANI (@ANI) March 21, 2022
2019ರಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪ್ರಮೋದ್ ಸಾವಂತ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಅವರ ನೇತೃತ್ವದಲ್ಲಿಯೇ 2022ರ ಚುನಾವಣೆ ಎದುರಿಸಲಾಗಿತ್ತು.
ಚುನಾವಣೆ ಬಳಿಕ ಮಾರ್ಚ್ 12ರಂದು ಪ್ರಮೋದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನೂತನ ಮುಖ್ಯಮಂತ್ರಿ ನೇಮಕವಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ರಾಜ್ಯಪಾಲರು ಸೂಚಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications