ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಕೋವಿಡ್ ಸೋಂಕು
ಪಣಜಿ, ಜುಲೈ 13 : ಗೋವಾದಲ್ಲಿ ಕೋವಿಡ್ - 19 ನಿಯಂತ್ರಣಕ್ಕೆ ತರಲು ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅಧಿಕಾರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,453.
Recommended Video
ಗೋವಾ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಜ್ಯದಲ್ಲಿ ಕೋವಿಡ್ - 19 ನಿಯಂತ್ರಣಕ್ಕೆ ತರಲು ಈ ಅಧಿಕಾರಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಮಾರ್ಚ್, ಏಪ್ರಿಲ್ ತಿಂಗಳಿನಲ್ಲಿ ಕೊರೊನಾ ಮುಕ್ತವಾಗಿದ್ದ ಗೋವಾ ರಾಜ್ಯದಲ್ಲೀಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ರಾಜ್ಯದಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 2,453. 14 ಜನರು ರಾಜ್ಯದಲ್ಲಿ ಇದುವರೆಗೂ ಮೃತಪಟ್ಟಿದ್ದಾರೆ.
ಬಸ್, ನಿಲ್ದಾಣ ಸ್ಯಾನಿಟೈಸ್ : ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, "ಗೋವಾದದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಸ್, ನಿಲ್ದಾಣವನ್ನು ಸ್ಯಾನಿಟೈಸ್ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ದಕ್ಷಿಣ ಗೋವಾದ ವ್ಯಕ್ತಿಯೊಬ್ಬರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜೂನ್ 28ರಿಂದ 49 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.












Click it and Unblock the Notifications