ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ; ಶಿವಸೇನೆ & ಎನ್‌ಸಿಪಿ ಮೈತ್ರಿ, ದೂರ ಉಳಿದ ಕಾಂಗ್ರೆಸ್!

|
Google Oneindia Kannada News

ಪಣಜಿ, ಜನವರಿ 16; ಗೋವಾ ವಿಧಾನಸಭೆ ಚುನಾವಣೆಗೆ ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿವೆ. ಫೆಬ್ರವರಿ 14ರಂದು 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಶರದ್ ಪವಾತ್ ನೇತೃತ್ವದ ಎನ್‌ಪಿಸಿ ಮತ್ತು ಉದ್ಭವ್ ಠಾಕ್ರೆ ನೇತೃತ್ವದ ಶೀವಸೇನೆ ಗೋವಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲಿವೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್‌ ಹೇಳಿದ್ದಾರೆ.

ಕಾಂಗ್ರೆಸ್ ಏಕಾಂಗಿಯಾಗಿ ಗೋವಾದಲ್ಲಿ ಗೆಲ್ಲಲು ಸಾಧ್ಯವಿಲ್ಲ; ಶಿವಸೇನೆ ಕಾಂಗ್ರೆಸ್ ಏಕಾಂಗಿಯಾಗಿ ಗೋವಾದಲ್ಲಿ ಗೆಲ್ಲಲು ಸಾಧ್ಯವಿಲ್ಲ; ಶಿವಸೇನೆ

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ)ಯ ಭಾಗವಾಗಿರುವ ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಮೈತ್ರಿಕೂಟದ ಜೊತೆಗಿಲ್ಲ. ಕಾಂಗ್ರೆಸ್ ಪಕ್ಷ ಸೀಟು ಹಂಚಿಕೆ ಸೇರಿದಂತೆ ಯಾವುದೇ ವಿಚಾರದ ಬಗ್ಗೆ ನಮ್ಮ ಜೊತೆ ಚರ್ಚೆ ನಡೆಸಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ.

ಗೋವಾ ಚುನಾವಣೆ; 13 ಅಂಶಗಳ ಅಜೆಂಡಾ ಘೋಷಿಸಿದ ಅರವಿಂದ ಕೇಜ್ರಿವಾಲ್ ಗೋವಾ ಚುನಾವಣೆ; 13 ಅಂಶಗಳ ಅಜೆಂಡಾ ಘೋಷಿಸಿದ ಅರವಿಂದ ಕೇಜ್ರಿವಾಲ್

Shiva Sena And NCP To Contest Goa Elections Together Congress will Not Ally With Them

"ಶಿವಸೇನೆ ಪಕ್ಷದ ನಾಯಕರು ಜನವರಿ 18 ಮತ್ತು 19ರಂದು ಗೋವಾಕ್ಕೆ ಭೇಟಿ ನೀಡಲಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಸಾಮಾನ್ಯ ಜನರು ನಮ್ಮ ಪಕ್ಷದ ಅಭ್ಯರ್ಥಿಗಳಾಗಲಿದ್ದಾರೆ" ಎಂದು ಸಂಜಯ್ ರಾವತ್ ಹೇಳಿದರು.

ಗೋವಾ ಚುನಾವಣೆ; ದೆಹಲಿಗೆ ಹೊರಟ ಪ್ರಮೋದ್ ಸಾವಂತ್ ಗೋವಾ ಚುನಾವಣೆ; ದೆಹಲಿಗೆ ಹೊರಟ ಪ್ರಮೋದ್ ಸಾವಂತ್

ಕಾಂಗ್ರೆಸ್ ಪಕ್ಷ ಫೆಬ್ರವರಿ 14ರಂದು ನಡೆಯುವ ಚುನಾವಣೆಗೆ ಈಗಾಗಲೇ ಗೋವಾ ಫಾರ್ವರ್ಡ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಶಿವಸೇನೆ & ಎನ್‌ಪಿಸಿ ಮೈತ್ರಿಕೂಟಕ್ಕೆ ಏಕೆ ಸೇರಿಲ್ಲ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

"ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಶಿವಸೇನೆ ಮತ್ತು ಎನ್‌ಸಿಪಿಯ ಜೊತೆಗೆ ಇದೆ. ಆದರೆ ಸೀಟುಗಳ ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಗೋವಾದಲ್ಲಿ ಕಾಂಗ್ರೆಸ್ ನಮ್ಮ ಜೊತೆ ಇಲ್ಲ. ಎನ್‌ಸಿಪಿ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಮಾತುಕತೆ ನಡೆಸುತ್ತಿದೆ" ಎಂದು ಸಂಜಯ ರಾವತ್ ಹೇಳಿದ್ದಾರೆ.

"ಗೋವಾದಲ್ಲಿ ಪದೇ ಪದೇ ಪಕ್ಷ ಬದಲಿಸುವ 10 ರಿಂದ 12 ಜನರಿಂದ ರಾಜ್ಯ ರಾಜಕೀಯ ತೀರ್ಮಾನ ಆಗುತ್ತದೆ. ಅವರ ನಡುವೆ ಒಳ ಒಪ್ಪಂದವಿದೆ, ಆದ್ದರಿಂದ ಸಾಮಾನ್ಯ ಜನರು ರಾಜಕೀಯಕ್ಕೆ ಬರಬೇಕು ಎಂದು ಪಕ್ಷ ಬಯಸುತ್ತದೆ" ಎಂದು ಸಂಜಯ್ ರಾವತ್ ತಿಳಿಸಿದರು.

"ಮಹಾರಾಷ್ಟ್ರದಲ್ಲಿ ಸಾಮಾನ್ಯ ಜನರಿಗೆ ಟಿಕೆಟ್ ನೀಡುವ ಮೂಲಕ ಶಿವಸೇನೆ ಜನರ ಕೈಗೆ ಅಧಿಕಾರ ನೀಡಿದೆ. ಗೋವಾದಲ್ಲಿಯೂ ಇದೇ ಮಾದರಿ ಜಾರಿಯಾಗಬೇಕು. ಸಾಮಾನ್ಯರು ಚುನಾವಣೆಗೆ ಸ್ಪರ್ಧಿಸಬೇಕು" ಎಂದರು.

ಸರ್ಕಾರ ರಚನೆ ಮಾಡಿವೆ; ಎಎಪಿ ಮತ್ತು ಟಿಎಂಸಿ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. "ಎರಡೂ ಪಕ್ಷಗಳು ಗೋವಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಗಿದೆ. ಅವರು ಸರ್ಕಾರ ರಚನೆ ಮಾಡಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಮಾತ್ರ ಬಾಕಿ ಇದೆ" ಎಂದು ಟೀಕಿಸಿದರು.

ಕೋವಿಡ್ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೋವಾದಲ್ಲಿ ಮನೆ-ಮನೆ ಪ್ರಚಾರ ನಡೆಸುತ್ತಿರುವುದಕ್ಕೆ ಸಂಜಯ್ ರಾವತ್ ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಟಿಎಂಸಿ ಜೊತೆಗಿನ ಮೈತ್ರಿ ಆಹ್ವಾನವನ್ನು ಕಳೆದ ವಾರ ತಿರಸ್ಕಾರ ಮಾಡಿತ್ತು. ಗೋವಾ ಫಾರ್ವರ್ಡ್ ಪಕ್ಷದೊಂದಿಗೆ ಮಾತ್ರ ಮೈತ್ರಿ ಮಾಡಿಕೊಂಡು ಪಕ್ಷ ಚುನಾವಣೆ ಎದುರಿಸುತ್ತಿದೆ.

2017ರ ಚುನಾವಣೆಯಲ್ಲಿ ಕಾಂಗ್ರೆಸ್ 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ 17 ಸ್ಥಾನಗಳಲ್ಲಿ ಜಯಗಳಿಸಿತ್ತು. ಚುನಾವಣೆಯಲ್ಲಿ ಪಕ್ಷ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು.

ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಗೋವಾ ಫಾರ್ವರ್ಡ್ ಪಕ್ಷ, ಪಕ್ಷೇತರ ಅಭ್ಯರ್ಥಿಗಳ ಸಹಾಯದಿಂದ ಸರ್ಕಾರ ರಚನೆ ಮಾಡಿತ್ತು. ಈ ಬಾರಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ.

English summary
Shiv Sena and Nationalist Congress Party (NCP) have decided to contest the Goa assembly elections 2022 together. But Congress will not ally with them for the elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X