ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಮೂರು ದಿನ ಸಂಪೂರ್ಣ ಲಾಕ್‌ಡೌನ್‌

|
Google Oneindia Kannada News

ಪಣಜಿ, ಜುಲೈ 15: ಗೋವಾದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಉಲ್ಬಣವಾಗುತ್ತಿರುವ ಹಿನ್ನೆಲೆ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡಲಾಗುವುದು ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

Recommended Video

Dhoni ಜೊತೆ ಆಡೋದು ತುಂಬಾ ಖುಷಿ ಕೊಡುತ್ತೆ ಎಂದ Pant | Oneindia Kannada

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಗೋವಾದಲ್ಲಿ ಕಂಪ್ಲೀಟ್ ಲಾಕ್‌ಡೌನ್‌ ಜಾರಿಯಾಗಲಿದೆ. ಈ ಅವಧಿಯಲ್ಲಿ ಕೇವಲ ವೈದ್ಯಕೀಯ ಸೌಲಭ್ಯಗಳು ಮಾತ್ರ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ!ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ!

ಜೊತೆಗೆ ಬುಧವಾರದಿಂದ ರಾತ್ರಿ 8 ರಿಂದ ಪ್ರಾರಂಭವಾಗಿ ಆಗಸ್ಟ್ 10 ರ ಬೆಳಗ್ಗೆ 6 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಸಿಎಂ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Three days Complete lockdown will be imposed in Goa

'ನಾವು ಜುಲೈ ಮಧ್ಯದಲ್ಲಿದ್ದೇವೆ, ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗುತ್ತದೆ. ಮಂಗಳವಾರ, ಗೋವಾದಲ್ಲಿ 170 ಕೋವಿಡ್ -19 ಸಕಾರಾತ್ಮಕ ಪ್ರಕರಣಗಳನ್ನು ವರದಿಯಾಗಿದೆ. ಇದು ದಿನವೊಂದರಲ್ಲಿ ದಾಖಲಾದ ಅತಿ ಹೆಚ್ಚು ಸೋಂಕು. ಮುಂಬರುವ ದಿನಗಳಲ್ಲಿ ಈ ಸಂಖ್ಯೆ ಏರಿಕೆಯಾಗಬಹುದು' ಎಂಬ ಆತಂಕ ವ್ಯಕ್ತಪಡಿಸಿದ್ದಾರೆ ಗೋವಾ ಸಿಎಂ.

ಅತಿಯಾದ ಮಳೆ ಮತ್ತು ಸೋಂಕಿನ ಪ್ರಮಾಣ ಏರಿಕೆಯಾದರೆ ರಾಜ್ಯವೂ ಗಂಭೀರ ಪರಿಸ್ಥಿತಿ ತಲುಪಲಿದೆ ಎಂದು ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಲಾಕ್‌ಡೌನ್‌ ಅವಶ್ಯಕ ಮತ್ತು ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಇದುವರೆಗೂ ಗೋವಾದಲ್ಲಿ ಒಟ್ಟು 2,753 ಕೊರೊನಾ ಪ್ರಕರಣಗಳು ದಾಖಲಾಗಿದೆ. ಅದರಲ್ಲಿ ಪ್ರಸ್ತುತ, 1,128 ಕೇಸ್‌ಗಳು ಮಾತ್ರ ಸಕ್ರಿಯವಾಗಿದೆ. 1,607 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

English summary
The 'Janta Curfew' will be observed from today. Complete lockdown will be imposed on Friday, Saturday & Sunday this week: Pramod Sawant, Goa Chief Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X