ಕೊರೊನಾ ಭೀತಿ; ಗೋವಾಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ

ಪಣಜಿ, ಮಾರ್ಚ್ 21: ಕೊರೊನಾ ಭೀತಿ ಹಿನ್ನಲೆಯಲ್ಲಿ ಗೋವಾ ರಾಜ್ಯಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ವಿದೇಶಿಯರೇ ಹೆಚ್ಚಾಗಿ ಭೇಟಿ ನೀಡುವ ಗೋವಾದಲ್ಲಿ ಇದುವರೆಗೂ ಯಾವುದೇ ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 31ರ ತನಕ ಯಾವುದೇ ಪ್ರವಾಸಿಗರು ಗೋವಾಕ್ಕೆ ಭೇಟಿ ನೀಡುವಂತಿಲ್ಲ. ಬೀಚ್, ರೆಸ್ಟೋರೆಂಟ್ ಬಂದ್ ಮಾಡಲು ಸೂಚನೆ ನೀಡಲಾಗಿದೆ.

ಶನಿವಾರ ಗೋವಾ ಸರ್ಕಾರ ರಾಜ್ಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಅಂತರರಾಜ್ಯದ ವಾಹನಗಳು ಗೋವಾ ಪ್ರವೇಶಿಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಈಗ ಪ್ರವಾಸಿಗ ಭೇಟಿಯನ್ನು ನಿಷೇಧಿಸಲಾಗಿದೆ.

Tourists Visit To Goa Banned Till March 31

ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಅಗತ್ಯ ವಸ್ತುಗಳ ಸಾಗಣೆ ಹೊರತುಪಡಿಸಿ ಬೇರೆ ವಾಹನಗಳು ರಾಜ್ಯಕ್ಕೆ ಪ್ರವೇಶಿಸುವಂತಿಲ್ಲ" ಎಂದು ಹೇಳಿದ್ದಾರೆ. ಶನಿವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬಂದಿದೆ.

ಗೋವಾ ಕರ್ನಾಟಕ ಮತ್ತು ಮಹಾರಾಷ್ಟ್ರ ಜೊತೆ ಗಡಿಯನ್ನು ಹಂಚಿಕೊಂಡಿದ್ದು, ಎರಡೂ ರಾಜ್ಯಗಳಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. ಪ್ರವಾಸಿಗರೇ ಹೆಚ್ಚಾಗಿ ಭೇಟಿ ನೀಡುವ ಗೋವಾದಲ್ಲಿ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಖಾಸಗಿ ಕಾರ್ಯಕ್ರಮಗಳು, ಪಾರ್ಟಿ, ವಿವಾಹಗಳನ್ನು ಮುಂದಿನ ಆದೇಶದ ತನಕ ನಿಷೇಧಿಸಲಾಗಿದೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಹಲವು ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+