ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆ; ಹೀನಾಯ ಸೋಲು ಒಪ್ಪಿಕೊಂಡ ಟಿಎಂಸಿ

|
Google Oneindia Kannada News

ಪಣಜಿ, ಮಾರ್ಚ್ 10; ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಮೊದಲ ಬಾರಿಗೆ ಗೋವಾ ವಿಧಾನಸಭೆ ಚುನಾವಣಾ ಕಣಕ್ಕಿಳಿದಿತ್ತು. ಆದರೆ ಒಂದೂ ಸ್ಥಾನದಲ್ಲಿ ಜಯಗಳಿಸುವಲ್ಲಿ ಪಕ್ಷ ವಿಫಲವಾಗಿದೆ.

ಮೊದಲ ಬಾರಿಗೆ ಗೋವಾ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಟಿಎಂಸಿ ಪಕ್ಷ, ಎಂಜಿಪಿ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಆದರೆ ಪಕ್ಷ ಒಂದು ಸ್ಥಾನದಲ್ಲಿಯೂ ಗೆಲುವು ಸಾಧಿಸಿಲ್ಲ. ಕಾಂಗ್ರೆಸ್ ಜೊತೆ ಸಹ ಪಕ್ಷ ಮೈತ್ರಿ ಮಾಡಿಕೊಳ್ಳಲು ಬಯಸಿತ್ತು. ಆದರೆ ಕಾಂಗ್ರೆಸ್ ಇದಕ್ಕೆ ಒಪ್ಪಿರಲಿಲ್ಲ.

ಗೋವಾ; ಬಿಜೆಪಿಗೆ ಬೆಂಬಲ ಘೋಷಿಸಿದ ಮೂವರು ಪಕ್ಷೇತರರು! ಗೋವಾ; ಬಿಜೆಪಿಗೆ ಬೆಂಬಲ ಘೋಷಿಸಿದ ಮೂವರು ಪಕ್ಷೇತರರು!

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಬಿಜೆಪಿ ವಿರುದ್ಧ ಹೋರಾಡಲು ಟಿಎಂಸಿ ಎಂಜಿಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪರ್ಯಾಯವಾಗಿ ಟಿಎಂಸಿಗೆ ಜನ ಬೆಂಬಲ ನೀಡಲಿದ್ದಾರೆ ಎಂದು ಪಕ್ಷದ ನಾಯಕರು ಘೋಷಣೆ ಮಾಡಿದ್ದರು.

ಗೋವಾ; ಬಿಜೆಪಿಗೆ ಬೆಂಬಲ ಘೋಷಿಸಿದ ಮೂವರು ಪಕ್ಷೇತರರು! ಗೋವಾ; ಬಿಜೆಪಿಗೆ ಬೆಂಬಲ ಘೋಷಿಸಿದ ಮೂವರು ಪಕ್ಷೇತರರು!

Will Continue To Serve The People Of Goa Says TMC After Elections Result

ಎಂಜಿಪಿ, ಟಿಎಂಸಿ ಜಂಟಿಯಾಗಿ ಗೋವಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದವು. ಅಧಿಕಾರಕ್ಕೆ ಬಂದ 250 ದಿನಗಳಲ್ಲಿ ಗಣಿಗಾರಿಕೆ ಆರಂಭ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡುವುದು, ಸರ್ಕಾರಿ ಮತ್ತು ಖಾಸಗಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದು ಮುಂತಾದ ಭರವಸೆಗಳನ್ನು ಜನರಿಗೆ ನೀಡಿತ್ತು.

ಗೋವಾ ಚುನಾವಣೆ; ಟಿಎಂಸಿ ಕಿಂಗ್ ಮೇಕರ್ ಆಗಲಿದೆಯೇ?ಗೋವಾ ಚುನಾವಣೆ; ಟಿಎಂಸಿ ಕಿಂಗ್ ಮೇಕರ್ ಆಗಲಿದೆಯೇ?

ಗುರುವಾರ ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಟಿಎಂಸಿ ಪಕ್ಷ ಒಂದು ಸ್ಥಾನದಲ್ಲಿ ಸಹ ಜಯಗಳಿಸಿಲ್ಲ. ಫಲಿತಾಂಶದ ಬಳಿಕ ಟ್ವೀಟ್ ಮಾಡಿರುವ ಟಿಎಂಸಿ, "ನಾವು ಈ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಪ್ರತಿಯೊಬ್ಬ ಗೋಯೆಂಕರ್ ನಂಬಿಕೆ ಮತ್ತು ಪ್ರೀತಿಯನ್ನು ಗಳಿಸಲು ನಾವು ಶ್ರಮಿಸುತ್ತೇವೆ. ಇದಕ್ಕೆ ಎಷ್ಟೇ ಸಮಯ ಬೇಕು ಎಂಬುದು ತಿಳಿದಿಲ್ಲ. ಅಲ್ಲಿಯ ತನಕ ಗೋವಾ ಜನರ ಸೇವೆ ಮಾಡುತ್ತಲೇ ಇರುತ್ತೇವೆ" ಎಂದು ಪಕ್ಷ ಹೇಳಿದೆ.

ಕೈ ಕೊಟ್ಟ ಎಂಜಿಪಿ; ಇನ್ನು ಗೋವಾ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಟಿಎಂಸಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಎಂಜಿಪಿ ಪಕ್ಷ ಈಗ ಬಿಜೆಪಿ ಬೆಂಬಲಿಸುವುದಾಗಿ ಹೇಳಿದೆ. ಈ ಮೂಲಕ ಎಂಜಿಪಿ ಜೊತೆಗಿನ ಪಕ್ಷದ ಮೈತ್ರಿಯೂ ಮುರಿದುಬಿದ್ದಿದೆ.

ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21. ಗುರುವಾರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಧ್ಯಾಹ್ನ 4 ಗಂಟೆ ವೇಳೆಗೆ 25 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 14, ಕಾಂಗ್ರೆಸ್ 5 , ಎಎಪಿ 1, ಗೋವಾ ಫಾರ್ವರ್ಡ್‌ ಪಾರ್ಟಿ 1, ಆರ್‌ಜಿಪಿ 1, ಮೂವರು ಪಕ್ಷೇತರರು ಜಯಗಳಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21. ಗುರುವಾರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಧ್ಯಾಹ್ನ 4 ಗಂಟೆ ವೇಳೆಗೆ 25 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 14, ಕಾಂಗ್ರೆಸ್ 5 , ಎಎಪಿ 1, ಗೋವಾ ಫಾರ್ವರ್ಡ್‌ ಪಾರ್ಟಿ 1, ಆರ್‌ಜಿಪಿ 1, ಮೂವರು ಪಕ್ಷೇತರರು ಜಯಗಳಿಸಿದ್ದಾರೆ.

ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ" ಎಂದು ಹೇಳಿದರು.

ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಲು ಬಿಜೆಪಿ ಸಮಯ ಕೇಳಿದೆ. ರಾಜ್ಯಪಾಲರ ಬಳಿ ಸರ್ಕಾರ ರಚನೆ ಮಾಡಲು ಪಕ್ಷ ಹಕ್ಕು ಮಂಡಿಸಲಿದೆ. ಮೂವರು ಪಕ್ಷೇತರ ಶಾಸಕರು ಸಹ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

English summary
Trinamool Congress (TMC) failed to win signal seat in Goa assembly elections. In a statement party said that it will continue to serve the people of Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X