• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದಲ್ಲಿ 15 ವರ್ಷಗಳ ಆಡಳಿತ ಫಲ ಶೂನ್ಯ ಎಂದ ಓವೈಸಿ

|

ಪಾಟ್ನಾ, ಆಕ್ಟೋಬರ್.08: ಬಿಹಾರ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಸರ್ಕಾರ ಮತ್ತು ಪ್ರತಿಪಕ್ಷ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಇದರ ನಡುವೆ ರಾಜ್ಯದ ರಾಜಕೀಯ ಪಕ್ಷಗಳು ಮತ್ತು ನಾಯಕರ ವಿರುದ್ಧ ಆಲ್ ಇಂಡಿಯಾ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.

ಬಿಹಾರದಲ್ಲಿ 15 ವರ್ಷಗಳ ಕಾಲ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಡಳಿತ ನಡೆಸಿದ್ದಾರೆ. ಇನ್ನು 15 ವರ್ಷಗಳ ಕಾಲ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳದ ಮೈತ್ರಿಕೂಟದ ಸರ್ಕಾರವು ಆಡಳಿತ ನೀಡಿದ್ದರೂ, ಬಡ ಜನರಿಗೆ ಮಾತ್ರ ಅದರಿಂದ ಯಾವುದೇ ಲಾಭವಾಗಿಲ್ಲ ಎಂದು ಓವೈಸಿ ದೂಷಿಸಿದ್ದಾರೆ.

ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ತಪ್ಪಿನಿಂದ ಅರಳುತ್ತಾ ಕಮಲ?

ರಾಜ್ಯವು ಇಂದಿಗೂ ಸಾಮಾಜಿಕ ವಲಯ, ಆರ್ಥಿಕ ಹಾಗೂ ಶಿಕ್ಷಣ ರಂಗದಲ್ಲಿ ಸಾಕಷ್ಟು ಹಿಂದುಳಿದಿದೆ. ಸಾಲು ಸಾಲಾಗಿ ರಾಜ್ಯದಲ್ಲಿ ಗೆಲುವು ಸಾಧಿಸಿದ ರಾಜಕೀಯ ಪಕ್ಷಗಳು ಮತ್ತು ನಾಯಕರು ನೀಡಿರುವ ಆಡಳಿತ ಮಾತ್ರ ಅಷ್ಟಕಷ್ಟೆ ಎಂದು ಅವರು ಕಿಡಿ ಕಾರಿದ್ದಾರೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆ:

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷವು 115 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಎನ್ ಡಿಎ ಜೊತೆಗೆ ಮಾಡಿಕೊಂಡ ಒಪ್ಪಂದದಂತೆ ಜೆಡಿಯು 122 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಪೈಕಿ ಏಳು ಕ್ಷೇತ್ರಗಳನ್ನು ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಬಿಜೆಪಿ ಪಡೆದುಕೊಂಡ 122 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳನ್ನು ವಿಕಾಸಶೀಲ ಇನ್ಸಾನ್ ಪಕ್ಷಕ್ಕೆ ಬಿಟ್ಟುಕೊಡಲಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಬಿಹಾರದ 243 ವಿಧಾನಸಭೆ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತ, ನವೆಂಬರ್.03 ಎರಡನೇ ಹಂತ ಮತ್ತು ನವೆಂಬರ್.07ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಖಾಲಿ ಆಗಿರುವ ಬಿಹಾರದ ವಾಲ್ಮೀಕಿ ನಗರ ಲೋಕಸಕ್ಷಾ ಕ್ಷೇತ್ರಕ್ಕೆ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
15 Yrs Of Nitish Kumar And BJP, And 15 Yrs Of RJD-Congress Didn't Benefit Bihar's Poor: Owaisi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X