ಬಿಹಾರದಲ್ಲಿ ಎನ್‌ಕೌಂಟರ್: ನಾಲ್ವರು ನಕ್ಸಲರ ಹತ್ಯೆ
ಪಶ್ಚಿಮ ಚಂಪಾರಣ್, ಜುಲೈ 10: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಘಳು ಹಾಗೂ ಸ್ಫೋಟಕ ವಸ್ತುಗಳನ್ನು, 3 ಸೆಲ್ಫ್ ಲೋಡಿಂಗ್ ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಗಹ ಎಂಬ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ್ದ ಸಶಸ್ತ್ರ ಸೀಮಾ ಬಲ (ಎಸ್ಎಸ್‌ಬಿ) ಹಾಗೂ ವಿಶೇಷ ಕಾರ್ಯಾಚರಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಕಾರ್ಯಾಚರಣೆಯಲ್ಲಿ ಇದೀಗ ನಾಲ್ವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದ್ದಾರೆ.











Click it and Unblock the Notifications