• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ: ಮೊದಲ ಹಂತದಲ್ಲಿ ಶೇ.55.69ರಷ್ಟು ದಾಖಲೆ ಮತದಾನ

|

ಪಾಟ್ನಾ, ಅಕ್ಟೋಬರ್.29: ಬಿಹಾರದ 71 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ದಾಖಲೆಯ ಮತದಾನ ನಡೆದಿದೆ. ಬುಧವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶೇ.55.69ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮೊದಲ ಹಂತದಲ್ಲಿ ನಡೆದ ಶೇಕಡಾವಾರು ಮತದಾನವು ಈ ಹಿಂದೆ ನಡೆದ ಎರಡು ಚುನಾವಣೆಗಿಂತಲೂ ಹೆಚ್ಚಾಗಿದೆ. ಕಳೆದ 2015ರಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ 54.94ರಷ್ಟು ಮತದಾನ ನಡೆದಿತ್ತು.

"ಜಂಗಲ್ ರಾಜ್ ಕಾ ಯುವರಾಜ್": ಪ್ರಧಾನಿಗೆ ತೇಜಸ್ವಿ ಯಾದವ್ ತಿರುಗೇಟು

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲೂ ಈ ಕ್ಷೇತ್ರಗಳಲ್ಲಿ ಶೇ.53.54ರಷ್ಟು ಮತದಾನ ನಡೆದಿತ್ತು. ಅಕ್ಟೋಬರ್.28ರಂದು ನಡೆದ 71 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದ ಶೇಕಡಾವಾರ ಪ್ರಮಾಣವು ಹೊಸ ದಾಖಲೆ ಬರೆದಿದೆ. ಈ ಬಾರಿ ಶೇ.55.69ರಷ್ಟು ಮತದಾನ ನಡೆದಿದೆ ಎಂದು ಭಾರತೀಯ ಚುನಾವಣಾ ಆಯೋಗವು ಮಾಹಿತಿ ನೀಡಿದೆ.

1066 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಸಲಾಯಿತು. ಆರ್ ಜೆಡಿಯ 42 ಅಭ್ಯರ್ಥಿಗಳು ಕಣದಲ್ಲಿದ್ದರೆ ಕಾಂಗ್ರೆಸ್ 20 ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಅದೃಷ್ಟ ಪರೀಕ್ಷೆಗೆ ಇಳಿಸಿದೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷವು ಜೆಡಿಯು ಅಭ್ಯರ್ಥಿಗಳು ಸ್ಪರ್ಧಿಸಿರುವ 35 ಕ್ಷೇತ್ರಗಳೂ ಸೇರಿದಂತೆ ಒಟ್ಟು 41 ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಒಟ್ಟು 1066 ಅಭ್ಯರ್ಥಿಗಳ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ. ನವೆಂಬರ್.03ರಂದು ಎರಡನೇ ಹಂತ ಮತ್ತು ನವೆಂಬರ್.07ರಂದು ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ.

English summary
55.69% Final Voter Turnout Was Recorded In The First Phase Of Bihar Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X