ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ: ಬಿಹಾರ್ನಲ್ಲಿ 9 ಕಾರ್ಮಿಕರು ಸಾವು
ಪಾಟ್ನಾ, ಮೇ 18: ದೇಶದಲ್ಲಿ ವಲಸೆ ಕಾರ್ಮಿಕರ ರಸ್ತೆ ಅಪಘಾತ ಹೆಚ್ಚು ಸಂಭವಿಸುತ್ತಿದೆ. ಲಾಕ್ಡೌನ್ ಕಾರಣದಿಂದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು, ಬಸ್ ಮತ್ತು ರೈಲಿಗೆ ಕಾಯದೆ ಹೆದ್ದಾರಿಗಳಲ್ಲಿ ನಡೆದುಕೊಂಡು, ಟ್ರಕ್, ಸೈಕಲ್ಗಳಲ್ಲಿ ಊರು ಸೇರುವ ಸಾಹಸ ಮಾಡ್ತಿದ್ದಾರೆ.
ಈ ನಡುವೆ ಅಪಘಾತಗಳಿಗೆ ಸಿಕ್ಕಿ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಪ್ರತಿದಿನವೂ ವರದಿಯಾಗುತ್ತಿದೆ. ಬಿಹಾರದ ಭಾಗಲ್ಪುರದ ನೌಗಾಚಿಯಾ ಬಳಿ ಟ್ರಕ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟ್ರಕ್ನಲ್ಲಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರಕ್ ರಸ್ತೆಯಿಂದ ಹಳ್ಳಕ್ಕೆ ಬಿದ್ದಿದೆ. ಬಳಿಕ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಬಂದು ಕಾರ್ಯಾಚರಣೆ ಮಾಡಿದ್ದಾರೆ.

ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ 4 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 4 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಬಸ್ ಸೋಲಾಪುರದಿಂದ ಜಾರ್ಖಂಡ್ಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ.
Bihar: At least 9 labourers dead & several injured after a truck & a bus collided in Naugachhia, Bhagalpur. The truck in which the labourers were travelling, fell off the road following the collision. Rescue operation underway. pic.twitter.com/rGVxw6xQVh
— ANI (@ANI) May 19, 2020
ಉತ್ತರ ಪ್ರದೇಶದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications