ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ರಕ್ ಮತ್ತು ಬಸ್‌ ನಡುವೆ ಡಿಕ್ಕಿ: ಬಿಹಾರ್‌ನಲ್ಲಿ 9 ಕಾರ್ಮಿಕರು ಸಾವು

|
Google Oneindia Kannada News

ಪಾಟ್ನಾ, ಮೇ 18: ದೇಶದಲ್ಲಿ ವಲಸೆ ಕಾರ್ಮಿಕರ ರಸ್ತೆ ಅಪಘಾತ ಹೆಚ್ಚು ಸಂಭವಿಸುತ್ತಿದೆ. ಲಾಕ್‌ಡೌನ್‌ ಕಾರಣದಿಂದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು, ಬಸ್ ಮತ್ತು ರೈಲಿಗೆ ಕಾಯದೆ ಹೆದ್ದಾರಿಗಳಲ್ಲಿ ನಡೆದುಕೊಂಡು, ಟ್ರಕ್, ಸೈಕಲ್‌ಗಳಲ್ಲಿ ಊರು ಸೇರುವ ಸಾಹಸ ಮಾಡ್ತಿದ್ದಾರೆ.

ಈ ನಡುವೆ ಅಪಘಾತಗಳಿಗೆ ಸಿಕ್ಕಿ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಪ್ರತಿದಿನವೂ ವರದಿಯಾಗುತ್ತಿದೆ. ಬಿಹಾರದ ಭಾಗಲ್‌ಪುರದ ನೌಗಾಚಿಯಾ ಬಳಿ ಟ್ರಕ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಕೊರೊನಾ ಭೀತಿಯಲ್ಲಿ ಮನೆಗೆ ಹೊರಟವರು ಸೇರಿದ್ದು ಮಸಣಕೊರೊನಾ ಭೀತಿಯಲ್ಲಿ ಮನೆಗೆ ಹೊರಟವರು ಸೇರಿದ್ದು ಮಸಣ

ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟ್ರಕ್‌ನಲ್ಲಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರಕ್ ರಸ್ತೆಯಿಂದ ಹಳ್ಳಕ್ಕೆ ಬಿದ್ದಿದೆ. ಬಳಿಕ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಬಂದು ಕಾರ್ಯಾಚರಣೆ ಮಾಡಿದ್ದಾರೆ.

 9 Migrant Workers died at Road Accident In Naugachia

ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ 4 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 4 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಬಸ್ ಸೋಲಾಪುರದಿಂದ ಜಾರ್ಖಂಡ್‌ಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ.

English summary
Bihar: At least 9 laborers dead & several injured after a truck & a bus collided in Naugachia, Bhagalpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X