• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಬಿಹಾರದಲ್ಲಿ ಬಿಜೆಪಿ-ಎಲ್ ಜೆಪಿ ಮೈತ್ರಿಕೂಟದಲ್ಲಿ ಹೊಸ ಸರ್ಕಾರ"

|

ಪಾಟ್ನಾ, ಅಕ್ಟೋಬರ್.28: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಸಿಎಂ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಭವಿಷ್ಯ ನುಡಿದಿದ್ದಾರೆ.

ಕೊರೊನಾವೈರಸ್ ಸೋಂಕಿನ ಭೀತಿ ನಡುವೆಯೂ ಮೊದಲ ಹಂತದ ಚುನಾವಣೆಯಲ್ಲಿ ಶೇ.54.26ರಷ್ಟು ಮತದಾನ ನಡೆದಿದೆ. ಈ ಬಾರಿ ರಾಜ್ಯದ ಮತದಾರರು ಬದಲಾವಣೆ ಮತ್ತು ಅಭಿವೃದ್ಧಿಯ ಪರವಾಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಹಾರದಲ್ಲಿ ಗಮನ ಸೆಳೆದ ಟಾಪ್-5 ವಿಧಾನಸಭಾ ಕ್ಷೇತ್ರಗಳು!

"ನಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರ ಮೂಲಕ ಬಂದಿರುವ ಮಾಹಿತಿಯು ಸ್ಪಷ್ಟವಾಗಿದೆ. ನವೆಂಬರ್.10ರಂದು ಹೊರಬೀಳಲಿರುವ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ನಿತೀಶ್ ಕುಮಾರ್ ಅಧಿಕಾರದಿಂದ ಕೆಳಗೆ ಇಳಿಯುತ್ತಾರೆ" ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಎಲ್ ಜೆಪಿ ಮೈತ್ರಿಕೂಟದ ಸರ್ಕಾರ

ಬಿಹಾರದಲ್ಲಿ ಬಿಜೆಪಿ ಎಲ್ ಜೆಪಿ ಮೈತ್ರಿಕೂಟದ ಸರ್ಕಾರ

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡು ನವೆಂಬರ್.10ರಂದು ಫಲಿತಾಂಶ ಹೊರ ಬೀಳಲಿದೆ. ಅಂದು ಸಿಎಂ ನಿತೀಶ್ ಕುಮಾರ್ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲಿದ್ದು, ಬಿಜೆಪಿ ಮತ್ತು ಎಲ್ ಜೆಪಿ ಪಕ್ಷಗಳು ಒಟ್ಟಾಗಿ ಸರ್ಕಾರವನ್ನು ರಚಿಸುತ್ತವೆ ಎಂದು ಚಿರಾಗ್ ಪಾಸ್ವಾನ್ ಭವಿಷ್ಯ ಹೇಳಿದ್ದಾರೆ.

ಆರ್ ಜೆಡಿ ಮೈತ್ರಿಕೂಟದ ಜೊತೆ ನಿತೀಶ್ ಕುಮಾರ್

ಆರ್ ಜೆಡಿ ಮೈತ್ರಿಕೂಟದ ಜೊತೆ ನಿತೀಶ್ ಕುಮಾರ್

"ಬಿಜೆಪಿ ಜೊತೆಗಿನ ಮೈತ್ರಿಕೂಟವನ್ನು ಕಡಿದುಕೊಳ್ಳಲು ನಿತೀಶ್ ಕುಮಾರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಚಿರಾಗ್ ಪಾಸ್ವಾನ್ ಈ ಮೊದಲೇ ಆರೋಪಿಸಿದ್ದಾರೆ. ನಿತೀಶ್ ಕುಮಾರ್ ಅವರಿಗೆ ನೀಡುವ ಒಂದೊಂದು ಮತವೂ, ಬಿಹಾರದ ಆಡಳಿತವನ್ನು ಕುಗ್ಗಿಸುವುದಷ್ಟೇ ಅಲ್ಲ. ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟವನ್ನು ಶಕ್ತಿಯುತಗೊಳಿಸಿದಂತೆ" ಎಂದು ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿದ್ದರು. ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಸಖ್ಯವನ್ನು ತೊರೆದು ನಿತೀಶ್ ಕುಮಾರ್ ಆರ್ ಜೆಡಿ ಜೊತೆಗೆ ತೆರಳುತ್ತಾರೆ. ಈ ಹಿಂದೆ ನಿತೀಶ್ ಕುಮಾರ್ ಆರ್ ಜೆಡಿ ಆಶೀರ್ವಾದದಿಂದಲೇ ಮುಖ್ಯಮಂತ್ರಿ ಆಗಿದ್ದರು ಎಂದು ಚಿರಾಗ್ ಪಾಸ್ವಾನ್ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

"ಸಿಎಂ ನಿತೀಶ್ ಕುಮಾರ್ ಮುಕ್ತ ಸರ್ಕಾರ ರಚಿಸೋಣ"

"ಬಿಹಾರದಲ್ಲಿ ಮೊದಲ 15 ವರ್ಷಗಳ ಆರ್ ಜೆಡಿ ನೇತೃತ್ವದ ಸರ್ಕಾರ ನಡೆಸಿದ ಆಡಳಿತವು ದೇಶಾದ್ಯಂತ ಕುಖ್ಯಾತಿ ಪಡೆದುಕೊಂಡಿತ್ತು. ತದನಂತರದ 15 ವರ್ಷಗಳ ಆಡಳಿತದಲ್ಲಿ ಬಿಹಾರವು ತೀರಾ ಕೆಟ್ಟ ಪರಿಸ್ಥಿತಿಗೆ ದೂಡಲ್ಪಟ್ಟಿತ್ತು. ಆದರೆ ಇದೀಗ ನಿಮ್ಮೆಲ್ಲರ ಆಶೀರ್ವಾದವಿದ್ದಲ್ಲಿ ನಿತೀಶ್ ಕುಮಾರ್ ಮುಕ್ತ ಸರ್ಕಾರ ರಚಿಸಿ ಮತ್ತು ಬಿಹಾರ ಫಸ್ಟ್, ಬಿಹಾರಿ ಫಸ್ಟ್ ಧ್ಯೇಯವನ್ನು ಸಾಕಾರಗೊಳಿಸುತ್ತೇವೆ" ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಹಾರ ಮೊದಲ ಹಂತದಲ್ಲಿ ಶೇ.54.26ರಷ್ಟು ವೋಟಿಂಗ್

ಬಿಹಾರ ಮೊದಲ ಹಂತದಲ್ಲಿ ಶೇ.54.26ರಷ್ಟು ವೋಟಿಂಗ್

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಸಲಾಯಿತು. ಆರ್ ಜೆಡಿಯ 42 ಅಭ್ಯರ್ಥಿಗಳು ಕಣದಲ್ಲಿದ್ದರೆ ಕಾಂಗ್ರೆಸ್ 20 ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಅದೃಷ್ಟ ಪರೀಕ್ಷೆಗೆ ಇಳಿಸಿದೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷವು ಜೆಡಿಯು ಅಭ್ಯರ್ಥಿಗಳು ಸ್ಪರ್ಧಿಸಿರುವ 35 ಕ್ಷೇತ್ರಗಳೂ ಸೇರಿದಂತೆ ಒಟ್ಟು 41 ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಮೊದಲ ಹಂತದಲ್ಲಿ 54.26ರಷ್ಟು ಮತದಾನ ನಡೆದಿದೆ. ನವೆಂಬರ್.03ರಂದು ಎರಡನೇ ಹಂತ ಮತ್ತು ನವೆಂಬರ್.07ರಂದು ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ.

English summary
After Bihar Election Result BJP And LJP Will Form New Coalition Govt - Says chirag Paswan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X