ಪಾಟ್ನಾ ಹೈಕೋರ್ಟ್ ಸೂಚನೆ; ಬಿಹಾರದಲ್ಲಿ ಲಾಕ್ ಡೌನ್ ಘೋಷಿಸಿದ ಸರ್ಕಾರ

ಪಾಟ್ನಾ, ಮೇ 04; ಬಿಹಾರ ಸರ್ಕಾರ ಕೋವಿಡ್ ನಿರ್ವಹಣೆ ಮಾಡಲು ವಿಫಲವಾಗಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 5,09,047. ಸೋಮವಾರ ರಾಜ್ಯದಲ್ಲಿ 11,407 ಹೊಸ ಪ್ರಕರಣ ದಾಖಲಾಗಿದೆ.

ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಚಕ್ರಧಾರಿ ಶರಣ್ ಸಿಂಗ್, ಮೋಹಿತ್ ಕುಮಾರ್ ಶಾ ನೇತೃತ್ವದ ವಿಭಾಗೀಯ ಪೀಠ ಲಾಕ್ ಡೌನ್ ಜಾರಿಗೆ ತನ್ನಿ, ಇಲ್ಲವಾದಲ್ಲಿ ನಾವೇ ಆದೇಶ ನೀಡುತ್ತೇವೆ ಎಂದು ಬಿಹಾರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರುವ ಅಗತ್ಯವಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಎಂದು ಅಡ್ವೊಕೇಟ್ ಜನರಲ್ ಲಲಿತ್ ಕಿಶೋರ್‌ಗೆ ಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಲಿದೆಯೇ? ಅಥವಾ ಕೋರ್ಟ್ ಈ ಕುರಿತು ಆದೇಶಿಸಬೇಕೆ? ಎಂದು ನ್ಯಾಯಾಲಯ ಪ್ರಶ್ನಿಸಿದೆ.

After Patna High Court Direction Bihar Govt Announced Lock Down Till May 15

ಲಾಕ್ ಡೌನ್ ಘೋಷಣೆ; ಸೋಮವಾರ ಪಾಟ್ನಾ ಹೈಕೋರ್ಟ್ ಸೂಚನೆ ನೀಡುತ್ತಿದ್ದಂತೆ ಮಂಗಳವಾರ ಲಾಕ್ ಡೌನ್ ಘೋಷಣೆ ಮಾಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶ ಹೊರಡಿಸಿದದ್ದಾರೆ. ಮೇ 15ರ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

ಪಾಟ್ನಾದ ಇಂದಿರಾ ಗಾಂಧಿ ಇನ್ಸ್‌ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸ್ ಕೋವಿಡ್ ಆಸ್ಪತ್ರೆಯಲ್ಲಿ ಕೇವಲ 200 ಹಾಸಿಗೆ ಖಾಲಿ ಇದೆ. ಇವುಗಳಲ್ಲಿ 60 ಐಸಿಯು ಬೆಡ್‌ಗಳಿವೆ, ಆಕ್ಸಿಜನ್ ಕೊರತೆ ಕಾರಣ ಹೊಸ ರೋಗಿಳನ್ನು ದಾಖಲು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಸರ್ಕಾರ ಕೋವಿಡ್ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಪಾಟ್ನಾ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸುತ್ತಿರುವ ಕೋರ್ಟ್ ಸರ್ಕಾರ ಕೇವಲ ಕಾಗದದಲ್ಲಿ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಸೋಮವಾರ ಐಎಂಎ ಸಹ ಬಿಹಾರ ಸರ್ಕಾರವನ್ನು ಲಾಕ್ ಡೌನ್ ಘೋಷಣೆ ಮಾಡುವಂತೆ ಒತ್ತಾಯಿಸಿತ್ತು. ಸರ್ವಪಕ್ಷಗಳ ಸಭೆಯಲ್ಲಿ ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿ ಎಂದು ವಿವಿಧ ಪಕ್ಷದ ನಾಯಕರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+