ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮಹತ್ವದ ಸಭೆ

|
Google Oneindia Kannada News

ಪಾಟ್ನಾ, ಅಕ್ಟೋಬರ್.10: ಬಿಹಾರ ವಿಧಾನಸಭಾ ಚುನಾವಣಾ ಹಿನ್ನೆಲೆ ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಎರಡನೇ ಸಭೆ ನಡೆಯಲಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಶನಿವಾರ ಸಂಜೆ ಮಹತ್ವದ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಕಳೆದ ವಾರವಷ್ಟೇ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ವಿಕಾಸಶೀಲ ಇನ್ಸಾನ್ ಪಕ್ಷವು ಸೇರ್ಪಡೆಯಾಗಿತ್ತು. ಈ ಹಿನ್ನೆಲೆ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ಪಡೆದ ಒಟ್ಟು ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳನ್ನು ವಿಕಾಸಶೀಲ ಇನ್ಸಾನ್ ಪಕ್ಷದ ಅಭ್ಯರ್ಥಿಗಳಿಗೆ ಬಿಟ್ಟು ಕೊಟ್ಟಿತ್ತು.

ಬಿಹಾರದ ಬೋಧಗಯಾದಲ್ಲಿ ಬಿಜೆಪಿ ಮೊದಲ ಚುನಾವಣಾ ಪ್ರಚಾರ ಬಿಹಾರದ ಬೋಧಗಯಾದಲ್ಲಿ ಬಿಜೆಪಿ ಮೊದಲ ಚುನಾವಣಾ ಪ್ರಚಾರ

ಬಿಹಾರದಲ್ಲಿರುವ ಹಿಂದುವದ ಜಾತಿ ಮತ್ತು ವರ್ಗದ ಮತದಾರರನ್ನು ಸೆಳೆಯಲು ವಿಕಾಸಶೀಲ ಇನ್ಸಾನ್ ಪಕ್ಷವನ್ನು ಮೈತ್ರಿಕೂಟದಲ್ಲಿ ಸೇರಿಸಿಕೊಳ್ಳಲಾಗಿತ್ತು. ಈ ಮೊದಲು ಲೋಕ ಜನಶಕ್ತಿ ಪಕ್ಷವು ಮೈತ್ರಿಕೂಟದಲ್ಲಿದ್ದು, ಇತ್ತೀಚಿಗಷ್ಟೇ ಸಿಎಂ ನಿತೀಶ್ ಕುಮಾರ್ ಆಡಳಿತದ ವಿರುದ್ಧ ಆಕ್ರೋಶಗೊಂಡು ಎನ್ ಡಿಎ ಮೈತ್ರಿಕೂಟದಿಂದ ಹೊರ ಹೋಗಿತ್ತು.

Amid Bihar Assembly Election BJP CEC To Meeting To Discuss About Candidate List

ಬಿಜೆಪಿ-ಜೆಡಿಯು ಸೀಟು ಹಂಚಿಕೆ:

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಯು ಪಕ್ಷಗಳು ಸರಿ ಸಮಾನ ಸೀಟು ಹಂಚಿಕೆಯ ಒಪ್ಪಂದ ಮಾಡಿಕೊಂಡಿದ್ದವು. ಬಿಜೆಪಿ 121 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಜೆಡಿಯು 122 ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿತ್ತು. ಇನ್ನೊಂದು ಕಡೆ ಜೆಡಿಯು ಪಡೆದ 122 ಕ್ಷೇತ್ರಗಳ ಪೈಕಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜಿತನ್ ರಾಮ್ ಮಾಂಜೆ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾಕ್ಕೆ ನೀಡಿದ್ದರು.

ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ:

ಇನ್ನು, ಕಳೆದ ಸಪ್ಟೆಂಬರ್.25ರಂದು ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿತು. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
Amid Bihar Assembly Election BJP CEC To Meeting To Discuss About Candidate List.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X